Wednesday, 19th September 2018  

Vijayavani

ಸಂಪುಟಕ್ಕೆ ಸತೀಶ್​​​​​.. ಲೋಕಸಭೆಗೆ ರಮೇಶ್​​ - ಬೆಳಗಾವಿ ಕದನಕ್ಕೆ ತೆರೆ ಎಳೆಯಲು ಸಿದ್ದು ಪ್ಲಾನ್​​        ಹೈಕಮಾಂಡ್​​ ಅಂಗಳಕ್ಕೆ ಅತೃಪ್ತರ ಪುರಾಣ - ರಾಹುಲ್​​ ಜತೆ ಇಂದು ಸಿದ್ದರಾಮಯ್ಯ ಚರ್ಚೆ        ರಣೋತ್ಸಾಹದಲ್ಲಿ ಕಮಲ ಪಾಳಯ - ಇಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್​​ನಲ್ಲಿ ಶಾಸಕಾಂಗ ಸಭೆ        ಸಚಿವ ಡಿಕೆಶಿಗೆ ಫುಡ್​​ ಪಾಯ್ಸನ್​ - ಅಪೋಲೋ ಆಸ್ಪತ್ರೆಯಲ್ಲಿ ಸಚಿವರಿಗೆ ಟ್ರೀಟ್​ಮೆಂಟ್​ - ಸಂಜೆ ಡಿಸ್ಚಾರ್ಜ್ ಸಾಧ್ಯತೆ        ರಾಮಚಂದ್ರಾಪುರ ಮಠದ ಕೈತಪ್ಪಿದ ಗೋಕರ್ಣ ದೇಗುಲ - ಶ್ರೀ ಮಹಾಬಲೇಶ್ವರ ದೇವಸ್ಥಾನ ಸರ್ಕಾರದ ಸುಪರ್ದಿಗೆ        ದುಬೈ ಅಂಗಳದಲ್ಲಿಂದು ಭಾರತ- ಪಾಕ್​​ ಕಾಳಗ - ರೋಹಿತ್​​​​ ಪಡೆ ವಿರುದ್ಧ ಸರ್ಫರಾಜ್​ ಟೀಮ್​​ ತಂತ್ರ       
Breaking News

ಹೆದ್ದಾರಿ ಸಂಚಾರ ತಡೆದು ಆಕ್ರೋಶ

Friday, 13.07.2018, 5:00 AM       No Comments

ಮದ್ದೂರು:ರೈತರು ಹಾಗೂ ಸ್ತ್ರೀಶಕ್ತಿ ಸಂಘಗಳ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ (ಮೂಲ ಸಂಘಟನೆ) ಸದಸ್ಯರು ಶಿವಪುರದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಹೆದ್ದಾರಿಗೆ ಆಗಮಿಸಿದ ರೈತ ಸಂಘದ ಕಾರ್ಯಕರ್ತರು, ಸಿಎಂ ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಹೆದ್ದಾರಿ ಸಂಚಾರವನ್ನು ಕೆಲಕಾಲ ತಡೆದ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಕೆಲಕಾಲ ವ್ಯತ್ಯಯ ಉಂಟಾಗಿತ್ತು.

ರೈತ ಸಂಘದ ಬೋರಾಪುರ ಶಂಕರೇಗೌಡ ಮಾತನಾಡಿ, ಸಿಎಂ ಕುಮಾರಸ್ವಾಮಿ ಚುನಾವಣಾ ಪೂರ್ವದಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದಂತೆ ರೈತರ ಮತ್ತು ಸ್ತ್ರೀ ಶಕ್ತಿ ಸಂಘಗಳ ಸಂಪೂರ್ಣ ಸಾಲಮನ್ನಾ ಮಾಡಿಲ್ಲ. ಇದು ರೈತ ವಿರೋಧಿ ನೀತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡರಾದ ಸೊ.ಸಿ.ಪ್ರಕಾಶ್, ಕೆ.ಜಿ.ಉಮೇಶ್, ಮುದ್ದೇಗೌಡ, ರಾಜೇಶ್, ರಾಮಲಿಂಗೇಗೌಡ, ಗಣೇಶ್, ಸತೀಶ್, ಗದ್ದೇಗೌಡ, ಶಿವಲಿಂಗು, ರಾಮೇಗೌಡ ಇತರರು ಹಾಜರಿದ್ದರು.

Leave a Reply

Your email address will not be published. Required fields are marked *

Back To Top