Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಪಾಕ್​ ಪ್ರಧಾನಿ

Thursday, 20.09.2018, 8:26 AM       No Comments

ನವದೆಹಲಿ: ಪಾಕಿಸ್ತಾನದ ಪ್ರಧಾನಿ ಇಮ್ರಾನ್​ ಖಾನ್​ ಭಾರತದ ಪ್ರಧಾನ ಮಂತ್ರಿ ಮೋದಿಯವರಿಗೆ ಪತ್ರ ಬರೆದಿದ್ದು ಎರಡೂ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆಯ ಪುನಾರಂಭಿಸುವ ಪ್ರಸ್ತಾವನೆ ಇಟ್ಟಿದ್ದಾರೆ.

ನ್ಯೂಯಾರ್ಕ್​ನಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​, ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮೆಹ್ಮೂದ್​ ಖುರೇಶಿ ನಡುವೆ ಸಭೆ ನಡೆಸುವ ಸಾಧ್ಯತೆ ಕುರಿತು ಪರಿಶೀಲಿಸಲು ಖಾನ್​ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಎರಡು ದೇಶಗಳ ನಡುವೆ ಅರ್ಥಪೂರ್ಣ ಹಾಗೂ ರಚನಾತ್ಮಕ ಮೈತ್ರಿಯಾಗುವುದನ್ನು ಬಯಸುತ್ತೇನೆ ಎಂಬ ಮೋದಿಯವರ ಮಾತಿಗೆ ಪ್ರತಿಕ್ರಿಯೆಯಾಗಿ ಇಮ್ರಾನ್​ ಖಾನ್​ ಈ ಪತ್ರ ಬರೆದಿದ್ದಾರೆ.

ವಿವಾದಗಳನ್ನು ಬಗೆ ಹರಿಸಲು ಭಾರತ ಒಂದು ಹೆಜ್ಜೆ ಮುಂದಾದರೆ ಪಾಕಿಸ್ತಾನ ಎರಡು ಹೆಜ್ಜೆ ಮುಂಬರುವುದಾಗಿ ಇಮ್ರಾನ್​ ಖಾನ್​ ಪಾಕ್​ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿ ಬಳಿಕ ತಿಳಿಸಿದ್ದರು.

ವಿಶ್ವಸಂಸ್ಥೆಯಲ್ಲಿ ಸುಷ್ಮಾ ಸ್ವರಾಜ್ ಹಾಗೂ ಮೆಹ್ಮೂದ್​ ಕ್ವೆರೇಶಿ ಭೇಟಿಯ ಬಗ್ಗೆ ಈಗಾಗಲೇ ಅನೇಕ ಊಹಾಪೋಹಗಳು ಎದ್ದಿವೆ.
ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಮಗ್ರ ಮಾತುಕತೆ ಪ್ರಾರಂಭಿಸಲು 2015ರಲ್ಲಿ ಪ್ರಯತ್ನಿಸಲಾಗಿತ್ತು ಆದರೆ ಪಠಾಣ್​ಕೋಟ್​ ದಾಳಿ ಹಿನ್ನೆಲೆಯಲ್ಲಿ ಮಾತುಕತೆ ಸ್ಥಗಿತಗೊಂಡಿತ್ತು. ಇನ್ನಾದರೂ ಭಾರತ, ಪಾಕಿಸ್ತಾನಗಳು ಮಾತುಕತೆಯ ಮೂಲಕ ಉಭಯ ದೇಶಗಳ ನಡುವಿನ ಭಿನ್ನಾಭಿಪ್ರಾಯಗಳು, ಕಾಶ್ಮೀರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ಖಾನ್​ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top