Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ಪ್ರಿಯಕರನ ಜತೆ ಮದುವೆಗೆ ವಿರೋಧ: ಯುವತಿ ನೇಣಿಗೆ ಶರಣು

Monday, 28.08.2017, 4:40 PM       No Comments

ಚಾಮರಾಜನಗರ: ಪ್ರಿಯಕರನೊಂದಿಗೆ ಮದುವೆಯಾಗಲು ಪಾಲಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದಲ್ಲಿ ಸೋಮವಾರ ನಡೆದಿದೆ.

ವಿಶಾಲಾಕ್ಷಿ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಗ್ರಾಮದ ವೈರಮುಡಿ ಮತ್ತು ಉಮಾ ದಂಪತಿಗಳ ಪುತ್ರಿಯಾದ ವಿಶಾಲಾಕ್ಷಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ತನ್ನ ಪ್ರಿಯಕರನ ಜತೆ ಮದುವೆಯಾಗಲು ಬಯಸಿದ್ದಳು ಎನ್ನಲಾಗಿದೆ.

ಈ ಬಗ್ಗೆ ಮೃತಳ ಪಾಲಕರ ವಿರುದ್ಧ ಸೋದರ ಮಾವ ಶಿವಶಂಕರ್ ದೂರು ನೀಡಿದ್ದು, ಪಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top