Wednesday, 22nd November 2017  

Vijayavani

1. ಉಗ್ರನ ವಿರುದ್ಧ ಕೊಡಲಿಲ್ಲ ಪಾಕ್ ಸಾಕ್ಷ್ಯ – LET ಕ್ರಿಮಿ ಹಫೀಜ್ ಸಯೀದ್​ಗೆ ಕ್ಲೀನ್​ಚಿಟ್ – ಮನೆಯಿಂದ ಹೊರಬರ್ತಾನೆ ಮುಂಬೈ ದಾಳಿ ಮಾಸ್ಟರ್ ಮೈಂಡ್ 2. ಅಲೆಮಾರಿಗಳ ಮನೆ ತೆರವು ವೇಳೆ ಅಮಾನವೀಯ ವರ್ತನೆ – ನಡುರಸ್ತೆಯಲ್ಲಿ ಮಹಿಳೆಗೆ ಹೆರಿಗೆ – ದಿಗ್ವಿಜಯ ನ್ಯೂಸ್​ ವರದಿಗೆ ಡಿಸಿ ಸ್ಪಂದನೆ 3. ಹೆರಿಗೆ ವೇಳೆ ಮೃತಪಟ್ಟಿದ್ದಾಳೆ ಅಂದ್ರು ಡಾಕ್ಟರ್ಸ್​ – ಅಂತ್ಯ ಸಂಸ್ಕಾರದ ವೇಳೆ ಕಣ್ಣು ಬಿಟ್ಲಂತೆ ಬಾಣಂತಿ – ಮನೆಗೆ ತರೋವಷ್ಟರಲ್ಲಿ ಮತ್ತೆ ಸಾವಿನ ದರ್ಶನ 4. ಕೊಪ್ಪಳ ಜಿಲ್ಲಾಪ್ರವಾಸದಲ್ಲಿ ಎಚ್​ಡಿಡಿ – ಗವಿಮಠಕ್ಕೆ ಮಾಜಿ ಪ್ರಧಾನಿ ಭೇಟಿ – ಇಳಿವಯಸ್ಸಿನಲ್ಲೂ ಕಿಂಡಿಯಲ್ಲೆ ತೆರಳಿ ದರ್ಶನ 5. ಯೂರ್ಟನ್​ ವೇಳೆ ಕಾರಿಗೆ ಲಾರಿ ಡಿಕ್ಕಿ – ಡಿಕ್ಕಿ ಹೊಡೆದ ಲಾರಿಗೆ ಟ್ರಕ್ ಡ್ಯಾಶ್ – ಸೌದಿ ಹೈವೇಯಲ್ಲಿ ಹಾರಿಬಲ್ ಆಕ್ಸಿಡೆಂಟ್
Breaking News :

ಕಾಳಗಾಪುರ ಬಳಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು, ಹಲವರಿಗೆ ಗಾಯ

Friday, 21.04.2017, 8:15 AM       No Comments

ಬೀದರ್: ಬೀದರ್ ಜಿಲ್ಲೆ ಔರಾದ್ ತಾಲೂಕಿನ ಕಾಳಗಾಪುರದ ಬಳಿ ಔರಂಗಾಬಾದ್-ಹೈದರಾಬಾದ್ ಪ್ಯಾಸೆಂಜರ್ ರೈಲು ಶುಕ್ರವಾರ ಬೆಳಗಿನಜಾವ ಹಳಿ ತಪ್ಪಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ವೀಕ್ಷಿಸಿ ದಿಗ್ವಿಜಯ ನ್ಯೂಸ್ LIVE

ಶುಕ್ರವಾರ ಬೆಳಗಿನ ಜಾವ 3.50ರ ಸುಮಾರಿಗೆ ಕಾಳಗಾಪುರ ಮತ್ತು ಬಾಲ್ಕಿ ರೈಲ್ವೆ ನಿಲ್ದಾಣದ ನಡುವೆ ಕಾಳಗಾಪುರ ಸೇತುವೆ ಬಳಿ ರೈಲಿನ ಇಂಜಿನ್ ಮತ್ತು ಎರಡು ಬೋಗಿಗಳು ಹಳಿ ತಪ್ಪಿವೆ. ರೈಲು ನಿಧಾನವಾಗಿ ಚಲಿಸುತ್ತಿದ್ದ ಕಾರಣ ಭಾರೀ ಅನಾಹುತ ತಪ್ಪಿದೆ. ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ, ಗಾಯಾಳುಗಳನ್ನು ಬಾಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ರೈಲ್ವೆ ಅಧಿಕಾರಿ ಶ್ರೀಪತಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೀದರ್ ಉಸ್ತುವಾರ ಸಚಿವ ಈಶ್ವರ ಖಂಡ್ರೆ, ಎಸ್ಪಿ ಪ್ರಕಾಶ್ ನಿಕ್ಕಮ್ ರೈಲ್ವೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸಚಿವ ಈಶ್ವರ ಖಂಡ್ರೆ ಅವರು ಆಸ್ಪತ್ರೆಗೆ ಭೇಟಿ ನೀಡಿ ಚಿಕ್ಸೆ ಪಡೆಯುತ್ತಿರುವ ಪ್ರಯಾಣಿಕರ ಆರೋಗ್ಯ ವಿಚಾರಿಸಿದರು.

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top