Wednesday, 17th October 2018  

Vijayavani

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ -  ಸಂಜೆ 6.15ರಿಂದ 6.45ರೊಳಗೆ ಉಕ್ಕಿಹರಿಯಲಿದೆ ಜೀವನದಿ ಕಾವೇರಿ        ಪವಿತ್ರ ತೀರ್ಥಕ್ಕಾಗಿ ಹರಿದು ಬಂದಿದೆ ಭಕ್ತರ ದಂಡು - ತಲಕಾವೇರಿಯಲ್ಲಿ ಬಿಗಿ ಬಂದೋಬಸ್ತ್​ - ಸಿಎಂ ಕುಮಾರಸ್ವಾಮಿ ಉಪಸ್ಥಿತಿ        ನಿಗದಿಯಂತೆ ಬಾಗಿಲು ತೆರೆದ ಅಯ್ಯಪ್ಪ ದೇಗುಲ - ಮಹಿಳಾ ಭಕ್ತರಿಗೆ ಸಿಗಲೇ ಇಲ್ಲ ಮಣಿಕಂಠನ ದರ್ಶನ        ಶಬರಿಮಲೆಯಲ್ಲಿ ಭಾರೀ ಹಿಂಸಾಚಾರ ಹಿನ್ನೆಲೆ - ಪಂಪಾ, ನೀಲಕ್ಕಲ್ ಸೇರಿ 4 ಕಡೆ ನಿಷೇಧಾಜ್ಞೆ ಜಾರಿ - 144 ಸೆಕ್ಷನ್ ಆದೇಶ        ಮೀಟೂ ಅಭಿಯಾನಕ್ಕೆ ಮೊದಲ ವಿಕೆಟ್‌ ಪತನ - ಕೇಂದ್ರ ಸಚಿವ ಸ್ಥಾನಕ್ಕೆ ಅಕ್ಬರ್‌ ರಾಜೀನಾಮೆ       
Breaking News

ಸುವರ್ಣ ಸೌಧದೆದುರು ವೈದ್ಯರು, ರೋಗಿಗಳ ಸಮಸ್ಯೆ ಕೇಳೋರು ಯಾರು?

Monday, 13.11.2017, 1:48 PM       No Comments

ಬೆಳಗಾವಿ: ರಾಜ್ಯಾದಾಂತ್ಯ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಳಗಾವಿಯ ಅಧಿವೇಶನಕ್ಕೆ ಧರಣಿಗಾಗಿ ತೆರಳಿದ್ದು ರೋಗಿಗಳಿಗೆ ಸಮಸ್ಯೆ ಉಂಟುಮಾಡಿದೆ. ಪೂರ್ವ ಮಾಹಿತಿ ನೀಡದೇ ಏಕಾಏಕಿ ವೈದ್ಯರು ಕೆಲಸಕ್ಕೆ ಗೈರಾಗಿದ್ದು, ರೋಗಿಗಳನ್ನು ಪರದಾಡುವಂತೆ ಮಾಡಿದೆ.

ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿ ವೈದ್ಯರು ಧರಣಿ ಕೂಡಲೆಂದು ಬೆಳಗಾವಿಗೆ ತೆರಳಿದ್ದಾರೆ. ಆದರೆ ಇದರ ಕುರಿತು ಯಾವುದೇ ಮಾಹಿತಿ ಇರದ ರೋಗಿಗಳು ಸೋಮವಾರ ಎಂದಿನಂತೆ ಚಿಕಿತ್ಸೆ ದೊರೆಯುತ್ತದೆ ಎಂಬ ನಿರೀಕ್ಷೆಯಲ್ಲಿ ಆಸ್ಪತ್ರೆಗಳಿಗೆ ತೆರಳಿ ನಿರಾಸೆಗೆ ಒಳಗಾಗಿದ್ದಾರೆ.

ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಚಿಕಿತ್ಸೆ ಸ್ಥಗಿತಗೊಳಿಸಲಾಗಿದ್ದು, ಸುತ್ತಮುತ್ತಲಿನ ಗ್ರಾಮಗಳಿಂದ ತೆರಳಿದ್ದ ರೋಗಿಗಳು ಆಸ್ಪತ್ರೆ ಮೆಟ್ಟಿಲ ಮೇಲೆ ಕುಳಿತು ವೈದ್ಯರಿಗಾಗಿ ಕಾಯುವಂತಾ ಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದ ಹಲವೆಡೆ ಇದೇ ಪರಿಸ್ಥಿತಿ ಇದೆ, ಬಳ್ಳಾರಿಯಲ್ಲಿ ಬಹುತೇಕ ಎಲ್ಲ ಕ್ಲಿನಿಕ್​ಗಳಲ್ಲಿ, ನರ್ಸಿಂಗ್ ಹೊಂಗಳಲ್ಲಿ ಸೇವೆ ಸ್ಥಗಿತವಾಗಿದೆ. ಬಾಗಲಕೋಟೆಯಲ್ಲಿ 250 ಖಾಸಗಿ ಆಸ್ಪತ್ರೆಗಳು ಬಂದ್ ಮಾಡಿ, ಸುಮಾರು ಎರಡು ಸಾವಿರ ಖಾಸಗಿ ವೈದ್ಯರು ಬೆಳಗಾವಿಗೆ ತೆರಳಿದ್ದಾರೆ. ವಿಜಯಪುರದ ಸುಮಾರು 460 ಖಾಸಗಿ ವೈದ್ಯರು ಬೆಳಗಾವಿಗೆ ತೆರಳಿದ್ದು, 120 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸ್ಥಗಿತಗೊಳಿಸಲಾಗಿದೆ.

ಇನ್ನು, ಬೆಂಗಳೂರಿನಿಂದಲೂ ಸಾವಿರಾರು ವೈದ್ಯರು ಧರಣಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಅಲ್ಲದೆ, ನೆಲಮಂಗಲ ತಾಲೂಕಿನಾದ್ಯಂತ ಖಾಸಗಿ ಆಸ್ಪತ್ರೆಗಳು ಬಂದ್ ಮಾಡಲಾಗಿದೆ. ವೈದ್ಯರ ಈ ನಡೆಯಿಂದಾಗಿ ಬೆಂಗಳೂರು ಸೇರಿದಂತೆ ಖಾಸಗಿ ವೈದ್ಯಕೀಯ ಸೇವೆಯಲ್ಲಿ ತೀವ್ರ ಸಮಸ್ಯೆ ಎದುರಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top