Friday, 23rd March 2018  

Vijayavani

ರಾಜ್ಯಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ - ವಿಧಾನಸೌಧದಲ್ಲಿ ಮತ ಎಣಿಕೆ - ಚುನಾವಣಾ ಅಧಿಕಾರಿಯಿಂದ ರಿಸಲ್ಟ್​ ಅನೌನ್ಸ್        ಕೈಗೆ ಮೂರು, ಬಿಜೆಪಿಗೆ ಒಂದು ಸೀಟು ಪಕ್ಕಾ - ಈ ಬಾರಿಯೂ ಜೆಡಿಎಸ್​ಗಿಲ್ಲ ಸ್ಥಾನ - ಎರಡನೇ ಫಾರೂಕ್​ಗಿಲ್ಲ ಅದೃಷ್ಟ        ಸ್ಪೀಕರ್​ ನೆರವಿಗೆ ಬರಲಿಲ್ಲ - ನಾಗಮೋಹನ್​ದಾಸ್​ ವರದಿಯೇ ಸರಿಯಿಲ್ಲ - ವೀರಶೈವ ಮಹಾಸಭೆಯಲ್ಲಿ ಪ್ರತ್ಯೇಕ ಧರ್ಮಕ್ಕೆ ಆಕ್ರೋಶ        SSLC ಅಲ್ಲ ಇದು ಕಾಪಿಚೀಟಿ ಪರೀಕ್ಷೆ - ಬಹುತೇಕ ಕೇಂದ್ರಗಳಲ್ಲಿ ಸಾಮೂಹಿಕ ನಕಲು - ಹುಬ್ಬಳ್ಳಿ, ವಿಜಯಪುರ, ಕಲಬುರಗಿ ಸೇರಿ ಎಂಟು ಡಿಬಾರ್​        ಮಕ್ಕಳಾಗದ್ದಕ್ಕೆ ಪತ್ನಿ ಮೇಲೆ ದೌರ್ಜನ್ಯ - ವಿಕೃತ ಪತಿಯಿಂದ ಪತ್ನಿಗೆ ನಿರಂತರ ಕಿರುಕುಳ - ಮಗನಿಗೆ ಎರಡನೇ ಮದ್ವೆ ಮಾಡಲು ಪೋಷಕರ ಪ್ಲಾನ್​       
Breaking News

ಉಗ್ರ ಸಂಘಟನೆಗೆ ಸೇರಲು ಯುವಕರಿಗೆ ಪ್ರೇರೇಪಿಸುತ್ತಿದ್ದ ವ್ಯಕ್ತಿಯ ಬಂಧನ

Wednesday, 13.09.2017, 8:00 PM       No Comments

ಶ್ರೀನಗರ: ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆಗಳನ್ನು ನಿಗ್ರಹಿಸಲು ಸೇನೆ ನಿರಂತರವಾಗಿ ಪ್ರಯತ್ನಿಸುತ್ತಿದೆ. ಸೇನೆ ಮತ್ತು ಕಾಶ್ಮೀರಿ ಪೊಲೀಸರು ಉಗ್ರರು ಮತ್ತು ಉಗ್ರ ಸಂಘಟನೆಗೆ ಸೇರಲು ಪ್ರೇರೇಪಿಸುತ್ತಿರುವವರ ಮೇಲೆ ನಿಗಾ ವಹಿಸಿದೆ. ಬುಧವಾರ ಕಾಶ್ಮೀರಿ ಯುವಕರಿಗೆ ಉಗ್ರ ಸಂಘಟನೆಗೆ ಸೇರಲು ಪ್ರೇರಣೆ ನೀಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಹಿಜ್ಬುಲ್​ ಮುಜಾಹಿದೀನ್​ ಉಗ್ರ ಸಂಘಟನೆಗೆ ಸೇರುವಂತೆ ಯುವಕರಿಗೆ ಪ್ರೇರೇಪಿಸುತ್ತಿದ್ದ ಇಷ್ತಿಯಾಕ್​ ವನಿ ಎಂಬಾತನನ್ನು ಬಾರಾಮುಲ್ಲಾ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಈತ ವಿರುದ್ಧ 13 Unlawful Activities Prevention Act and Sec 506 RPC ಅನ್ವಯ ದೂರು ದಾಖಲಿಸಿಕೊಳ್ಳಲಾಗಿದೆ.

ಇತ್ತೀಚೆಗೆ ಬಾರಾಮುಲ್ಲಾ ಪೊಲೀಸರು ಉಗ್ರ ಸಂಘಟನೆಗೆ ಸೇರಲು ಸಿದ್ಧರಾಗಿದ್ದ 10 ಬಾಲಕರನ್ನು ರಕ್ಷಿಸಿದ್ದರು. ರಕ್ಷಿಸಿದ ಬಾಲಕರನ್ನು ಪೊಲೀಸರು ಅವರ ಪೋಷಕರಿಗೆ ಒಪ್ಪಿಸಿದ್ದರು. ರಕ್ಷಿಸಲ್ಪಟ್ಟಿದ್ದ ಬಾಲಕರಲ್ಲಿ ನಾಲ್ವರಿಗೆ ಇಷ್ತಾಕಿ ವನಿ ಪ್ರೇರಣೆ ನೀಡಿದ್ದ. ಈ ಹಿನ್ನೆಲೆಯಲ್ಲಿ ವನಿಯನ್ನು ಬಂಧಿಸಲಾಗಿದೆ.

ಸೇನೆಯ ಉಗ್ರ ನಿಗ್ರಹ ಕಾರ್ಯಾಚರಣೆಗಳಿಂದಾಗಿ ಉತ್ತರ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಹತೋಟಿಗೆ ಬಂದಿವೆ. ಜತೆಗೆ ಉಗ್ರರು ಸೇನೆಗೆ ಹೆದರಿ ತಟಸ್ಥರಾಗಿದ್ದಾರೆ. ಹಾಗಾಗಿ ಕಣಿವೆ ರಾಜ್ಯದ ಇತರ ಭಾಗಗಳಿಂದ ಯುವಕರನ್ನು ಉಗ್ರ ಸಂಘಟನೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top