Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಇಳಿಕೆ

Friday, 08.06.2018, 2:14 PM       No Comments

ನವದೆಹಲಿ: ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದ ಪೆಟ್ರೋಲ್‌, ಡೀಸೆಲ್‌ ಬೆಲೆ ಇದೀಗ ಕೊಂಚ ಇಳಿಕೆಯಾಗುತ್ತಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.

ಈ ಹಿಂದಿನ ದಿನಗಳಿಗೆ ಹೋಲಿಸಿಕೊಂಡರೆ ನವದೆಹಲಿ, ಕೋಲ್ಕತಾ, ಮುಂಬೈ ಮತ್ತು ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 21 ರಿಂದ 22 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 15 ರಿಂದ 16 ಪೈಸೆ ಕಡಿಮೆಯಾಗಿದೆ.

ದೆಹಲಿಯಲ್ಲಿ ಪೆಟ್ರೋಲ್‌ ಲೀ.ಗೆ 77. 42 ಪೈಸೆ ಮತ್ತು ಡೀಸೆಲ್ ಲೀಟರ್‌ಗೆ 68. 58 ಪೈಸೆಯಷ್ಟಾಗಿದೆ. ಗುರುವಾರವಷ್ಟೇ ಲೀಟರ್ ಪೆಟ್ರೋಲ್ ಬೆಲೆ ಲೀಟರ್ ಗೆ 77. 63 ಹಾಗೂ ಡೀಸೆಲ್ ದರ 68. 73 ಪೈಸೆಯಷ್ಟಾಗಿತ್ತು.

ದೆಹಲಿಯನ್ನು ಹೊರತುಪಡಿಸಿ ಇನ್ನಿತರ ಮೆಟ್ರೋ ನಗರಗಳಲ್ಲಿಯೂ ಪೆಟ್ರೋಲ್ ದರ ಇಳಿಕೆಯಾಗಿದ್ದು, ಕೊಲ್ಕತ್ತಾದಲ್ಲಿ 80. 07, ಮುಂಬೈಯಲ್ಲಿ 85.24 ಮತ್ತು ಚೆನ್ನೈನಲ್ಲಿ 80.37 ಪೈಸೆ ಆಗಿದೆ.

ಡೀಸೆಲ್ ದರ ಕೊಲ್ಕತ್ತಾದಲ್ಲಿ 71.13 , ಮುಂಬೈನಲ್ಲಿ 73. 02 ಹಾಗೂ ಚೆನ್ನೈನಲ್ಲಿ 72. 40 ಪೈಸೆ ಆಗಿದೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top