Wednesday, 19th September 2018  

Vijayavani

ಗೌಡರ ಫ್ಯಾಮಿಲಿ ವಿರುದ್ಧ ಮತ್ತೆ ಸಿಡಿದೆದ್ದ ಮಂಜು- ಡಿಸಿ, ಕಂದಾಯ ಸಚಿವರಿಗೆ ನಾಳೆ  ದೂರು ನೀಡಲಿರುವ ಎ.ಮಂಜು        ಎದುರಾಳಿ ಇಲ್ದೇ ಚೆಸ್ ಆಡೋದೇಗೆ - ಡಿಕೆಶಿ ದರ್ಪದ ಮಾತಿಗೆ ಬಿಎಸ್​ವೈ ತಿರುಗೇಟು - ಇತ್ತ ಅಪ್ಪ-ಮಕ್ಕಳ ವಿರುದ್ಧವೂ ವಾಗ್ದಾಳಿ        ಬಿಜೆಪಿಗೆ ಹೋದ್ರೆ ಬೆಳೆಯಕ್ಕಾಗಲ್ಲ, ಪಕ್ಷದಲ್ಲಿದ್ರೆ ಹೆಚ್ಚು ಲಾಭ - ಬಂಡೆದ್ದಿದ್ದ ಬ್ರದರ್ಸ್ ಕೂಲ್ ಮಾಡಿದ್ದೇ ಸಹೋದರ ಲಖನ್        ದಿಲ್ಲಿಯಲ್ಲಿ ಸಂಪುಟ ವಿಸ್ತರಣೆ ಸರ್ಕಸ್ - ಖಾಲಿ ಇರೋ 6 ಸ್ಥಾನಗಳಿಗೆ ಲಾಬಿ ಜೋರು - ಭಿನ್ನಮತಕ್ಕೆ ರಾಹುಲ್ ಹಾಡ್ತಾರಾ ಇತಿಶ್ರೀ..?        ತ್ರಿವಳಿ ತಲಾಖ್ ಸುಗ್ರೀವಾಜ್ಞೆಗೆ ಅಸ್ತು - ಕೇಂದ್ರ ಸಚಿವ ಸಂಪುಟದಿಂದ ಒಪ್ಪಿಗೆ - ಮುಸ್ಲಿಂ ಮಹಿಳೆಯರಿಗೆ ಕೊನೆಗೂ ಸಿಕ್ತು ನ್ಯಾಯ       
Breaking News

ಚೊಚ್ಚಲ ಟೆಸ್ಟ್​ ಪಂದ್ಯವನ್ನಾಡುತ್ತಿರುವ ಅಫ್ಘಾನ್​ಗೆ ಶುಭಕೋರಿದ ಪ್ರಧಾನಿ

Thursday, 14.06.2018, 11:36 AM       No Comments

ನವದೆಹಲಿ: ಟೀಂ ಇಂಡಿಯಾ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಚೊಚ್ಚಲ ಟೆಸ್ಟ್​ ಪಂದ್ಯವನ್ನಾಡುತ್ತಿರುವ ಅಫ್ಘಾನಿಸ್ತಾನ ಕ್ರಿಕೆಟ್​ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಕೋರಿದ್ದಾರೆ.

ಟ್ವೀಟ್​ ಮಾಡಿರುವ ಪ್ರಧಾನಿ ಉಭಯ ತಂಡಗಳಿಗೆ ಗೆಲುವಿನ ಅದೃಷ್ಟ ನಿಮ್ಮದಾಗಲಿ ಎಂದು ಶುಭ ಹಾರೈಸಿದ್ದಾರೆ.

ಮೊದಲ ಅಂತಾರಾಷ್ಟ್ರೀಯ ಟೆಸ್ಟ್​ ಪಂದ್ಯವನ್ನಾಡುತ್ತಿರುವ ಅಫ್ಘಾನಿಸ್ತಾನ ತಂಡಕ್ಕೆ ಅಭಿನಂದನೆಗಳು. ಮೊದಲ ಟೆಸ್ಟ್​ ಪಂದ್ಯವನ್ನಾಡಲು ಭಾರತವನ್ನು ಆಯ್ಕೆ ಮಾಡಿಕೊಂಡದಕ್ಕೆ ಸಂತೋಷವಾಗಿದೆ. ಎರಡು ತಂಡಕ್ಕೆ ಅಭಿನಂದನೆಗಳು. ಇಬ್ಬರ ನಡುವಿನ ಕ್ರಿಕೆಟ್​ ಹೀಗೆ ಮುಂದುವರಿದು ಉತ್ತಮ ಸಂಬಂಧ ಬಲವಾಗಲಿ ಎಂದು ಪ್ರಧಾನಿ ಶುಭಕೋರಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ರಾಜವರ್ಧನ್​​ ಸಿಂಗ್​ ರಾಥೋಡ್​ ಕೂಡ ಶುಭಾಶಯ ತಿಳಿಸಿದ್ದು, ಭಾರತದ ವಿರುದ್ಧ ಚೊಚ್ಚಲ ಟೆಸ್ಟ್​ ಪಂದ್ಯವನ್ನಾಡುತ್ತಿರುವ ಅಫ್ಘಾನಿಸ್ತಾನ ತಂಡಕ್ಕೆ ಶುಭವಾಗಲಿ. ಈ ಆಟದಿಂದ ಅಫ್ಘಾನ್​ ಹಾಗೂ ನಮ್ಮ ದೇಶದ ನಡುವಿನ ಉತ್ತಮ ಸಂಬಂಧ ಎಂಬ ಹೊಸ ಇನ್ನಿಂಗ್ಸ್​ ಪ್ರಾರಂಭವಾಗಲಿ ಎಂದು ತಿಳಿಸಿದ್ದಾರೆ.

ಭಾರತವು ನಾಯಕ ವಿರಾಟ್​ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯಾ ರಹಾನೆ ನೇತೃತ್ವದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಕಣಕ್ಕಿಳಿದಿದೆ. ಅಫ್ಘಾನ್​ ತಂಡವನ್ನು ಅಸ್ಘರ್​ ಸ್ಟಾನಿಕ್ಝೈ ಅವರು ಮುನ್ನಡೆಸುತ್ತಿದ್ದಾರೆ.​ ಸದ್ಯ ಟಾಸ್​ ಗೆದ್ದಿರುವ ಇಂಡಿಯಾ ಮೊದಲು ಬ್ಯಾಟಿಂಗ್​ ಆಯ್ದುಕೊಂಡಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top