Monday, 23rd October 2017  

Vijayavani

1. ಲಿಂಗಾಯತರು ಹಿಂದೂಗಳಲ್ಲ ಹೇಳಿಕೆ – ಜಾಮದಾರ್​ಗೆ ಕನೇರಿ ಮಠದ ಶ್ರೀ ತಿರುಗೇಟು – ಬಹಿರಂಗ ಚರ್ಚೆಗೆ ಕಾಡಸಿದ್ದೇಶ್ವರ ಸ್ವಾಮಿಗಳ ಆಹ್ವಾನ 2. ರಾಜ್ಯ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಭಿನ್ನಾಭಿಪ್ರಾಯ – ಸಿದ್ದು, ಪರಂ, ಡಿಕೆಶಿ ದೂರ ದೂರ – ಹೈಕಮಾಂಡ್​ ಸಾಮೂಹಿಕ ಜಪ, ನಾಯಕರು ಸಪರೇಟ್​ ರೂಪ 3. ಧಾರವಾಡದಲ್ಲಿ ಸರ್ಕಾರದ ಸಾಧನಾ ಸಮಾವೇಶ – ಜನರ ತೆರಿಗೆ ದುಡ್ಡಲ್ಲಿ ಕಾಂಗ್ರೆಸ್‌ ಪಕ್ಷಕ್ಕೂ ಪ್ರಚಾರ – ಬೆನ್ನುತಟ್ಟಿಕೊಳ್ಳೋ ಸಮಾವೇಶಕ್ಕೆ ಪಿಡಿಓಗಳೂ ದುರ್ಬಳಕೆ 4. ನಟ ವಿಜಯ್ ಬೆಂಬಲಕ್ಕೆ ನಿಂತ ತಲೈವಾ – ಮೆರ್ಸಲ್‌ ಸಿನಿಮಾದ ಬಗ್ಗೆ ಮೆಚ್ಚುಗೆಯ ಟ್ವೀಟ್ – ವಿವಾದಾತ್ಮಕ ವಿಷಯಗಳಿಗೂ ರಜನಿಕಾಂತ್ ಪರೋಕ್ಷ ಶ್ಲಾಘನೆ 5. ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್​ ಶಾಕ್​ – ಬಿಜೆಪಿಗೆ ಸೇರಲು 1 ಕೋಟಿ ರೂ ಆಮೀಷ – ಹಾರ್ದಿಕ್​ ಪಟೇಲ್​ ಸಂಗಡಿಗನ ಗಂಭೀರ ಆರೋಪ
Breaking News :

ಮೂಲ ಸೌಕರ್ಯಕ್ಕಾಗಿ ಪ್ರತಿಭಟಿಸಿದ್ರೆ ಕೇಸ್​ ದಾಖಲಿಸಿದ ಪೊಲೀಸರು!

Tuesday, 19.09.2017, 7:46 AM       No Comments

ಚಾಮರಾಜನಗರ: ಕಳೆದ ನಾಲ್ಕೈದು ವರ್ಷಗಳಿಂದ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿದ್ರೂ ಯಾವೊಬ್ಬ ಜನಪ್ರತಿನಿಧಿಗಳಾಗಲೀ ಅಥವಾ ಅಧಿಕಾರಿಗಳಾಗಲೀ ಸ್ಪಂದಿಸಲೇ ಇಲ್ಲ. ಇದರಿಂದ ಬೇಸತ್ತ ಚಾಮರಾಜನಗರದ ಜನ ಪ್ರತಿಭಟನೆ ಮಾಡಿದರೆ, ಸಮಸ್ಯೆ ನಿವಾರಿಸೋ ಬದಲು ಪ್ರತಿಭಟನಕಾರರ ಮೇಲೆ ಕೇಸ್​​ ದಾಖಲಿಸಲಾಗಿದೆ.

ಹೌದು, ಚಾಮರಾಜನಗರ ಜಿಲ್ಲಾ ಕೇಂದ್ರವಾಗಿ 20 ವರ್ಷಗಳೇ ಗತಿಸಿದ್ರೂ ಇಲ್ಲಿನ ದುಸ್ಥಿತಿ ಮಾತ್ರ ಹೇಳ ತೀರದು. ಮಳೆ ಬಂದರೆ ಸಾಕು ಚಾಮರಾಜನಗರ ಜಿಲ್ಲಾ ಕೇಂದ್ರದ ಬೀದಿಗಳು ಕೆಸರು ಗದ್ದೆಯಂತಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಇಲ್ಲಿನ ನಿವಾಸಿಗಳು ಕಳೆದ ಒಂದು ವರ್ಷದ ಹಿಂದೆ ಚಾಮರಾಜನಗರ ಬಂದ್​ ಮಾಡಿ ಪ್ರತಿಭಟನೆ ನಡೆಸಿದ್ರು. ಆಗ ಪ್ರತಿಭಟನೆಗೆ ಮಣಿದು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವುದಾಗಿ ಹೇಳಿದ್ದ ಜನಪ್ರತಿನಿಧಿಗಳು ಈವರೆಗೂ ಈ ಕಡೆ ಕಣ್ಣು ಹಾಯಿಸಿಲ್ಲ.

ಇನ್ನು ಇದರಿಂದ ಬೇಸತ್ತ ಸ್ಥಳೀಯರು ಕಳೆದ ವಾರ ಮತ್ತೆ ಬೀದಿಗಿಳಿದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ರು. ಈ ವೇಳೆ ಮಹಿಳೆಯರು ಸೇರಿದಂತೆ ಹಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಇದೀಗ ಪೊಲೀಸರು 18 ಮಂದಿ ಸ್ಥಳೀಯರ ಮೇಲೆ ಕೇಸ್ ಹಾಕಿದ್ದಾರೆ.

ಒಂದೆಡೆ ಇಲ್ಲಿನ ಜನ ಮೂಲಭೂತ ಸೌಕರ್ಯಗಳಿಂದ ವಂಚಿತರಾಗ್ತಿದ್ರೆ, ಇನ್ನೊಂದೆಡೆ ತಮ್ಮ ಹಕ್ಕಿಗಾಗಿ ಹೋರಾಟ ನಡೆಸಿದ ಜನರ ಮೇಲೆ ಪೊಲೀಸರು ಕೇಸ್​ ದಾಖಲಿಸಿದ್ದಾರೆ. ಇದರಿಂದ ಸ್ಥಳೀಯರು ಮತ್ತಷ್ಟು ಆಕ್ರೋಶಗೊಂಡಿದ್ದು, ಜನಪ್ರತಿನಿಧಿಗಳ ವಿರುದ್ಧ ಕಿಡಿಕಾರುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top