Sunday, 22nd October 2017  

Vijayavani

1. ಜಮ್ಮು ಕಾಶ್ಮೀರದಲ್ಲಿ ಗುಂಡಿನ ಕಾಳಗ – ಸೇನೆ ಎನ್​ಕೌಂಟರ್​ಗೆ ಉಗ್ರ ಫಿನಿಶ್ – ಹತನಿಂದ ಪಾಕ್​ ಕರೆನ್ಸಿ, ಶಸ್ತ್ರಾಸ್ತ್ರ ವಶಕ್ಕೆ 2. ಬಿಎಸ್​ವೈ-ಬಿ.ಎಲ್.ಸಂತೋಷ ನಡುವೆ ಕಿತ್ತಾಟ – ಸಂಘಟನಾತ್ಮಕ ವರದಿ ಪಡೆಯಲು ಮುಂದಾದ ಹೈಕಮಾಂಡ್​ – ರಿಪೋರ್ಟ್​ಗಾಗಿ ಶಿವಪ್ರಕಾಶ್​ ಯಾದವ್​ ನೇಮಕ 3. ಬಹುಮನಿ ಕಾಲದ ಕೋಟೆಗಿಲ್ಲ ಭದ್ರತೆ – ಅವ್ಯವಸ್ಥೆಗಳ ಆಗರ ಜಾಮೀಮಾ ಮಸೀದಿ – ಪ್ರವಾಸೋದ್ಯಮ ಸಚಿವರ ತವರಲ್ಲೇ ಇದೆಂಥ ಅದ್ವಾನ 4. ಗುಜರಾತ್​​​ ಚುನಾವಣೆ ಗೆಲ್ಲಲು ಸರ್ಕಸ್​ – ಹಲವು ಯೋಜನೆಗಳಿಗೆ ಇಂದು ನಮೋ ಚಾಲನೆ – ಹಾರ್ದಿಕ್​​​​​​​, ಜಿಗ್ನೇಶ್ ಸೆಳೆಯಲು ಕೈ ಪ್ಲಾನ್​​ 5. ಚಿರಂಜೀವಿ ಸರ್ಜಾ-ಮೇಘನಾ ರಾಜ್ ನಿಶ್ಚಿತಾರ್ಥ – ಮನೆಯಲ್ಲಿ ತಾಂಬುಲ ಶಾಸ್ತ್ರ – ಸಂಜೆ ಲೀಲಾ ಪ್ಯಾಲೇಸ್​ನಲ್ಲಿ ರಿಂಗ್​ ಎಕ್ಸ್​ಚೇಂಜ್​
Breaking News :

ನಟ ಉಪೇಂದ್ರ ರಾಜಕೀಯ ಎಂಟ್ರಿಯಿಂದ ಗಿಮಿಕ್​​ ನಡೆಯಲ್ಲ ಅಂದ್ರು…

Sunday, 13.08.2017, 9:35 PM       No Comments

ಬೆಂಗಳೂರು: ನಟ ಉಪೇಂದ್ರ ರಾಜಕೀಯ ಪ್ರವೇಶಕ್ಕೆ ರಾಜಕೀಯ ನಾಯಕರು ಭಿನ್ನ ವಿಭಿನ್ನ ಹೇಳಿಕೆ ನೀಡಿದ್ದಾರೆ. ಇನ್ನು ಕಾಂಗ್ರೆಸ್​​ ಕಾರ್ಯಾಧ್ಯಕ್ಷ ದಿನೇಶ್​​ ಗುಂಡೂರಾವ್​​ ಉಪೇಂದ್ರ ರಾಜಕೀಯ ಪ್ರವೇಶದ ಕುರಿತು ಟೀಕಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ದಿನೇಶ್​ ಗುಂಡೂರಾವ್​​, ನಟ ಉಪೇಂದ್ರ ರಾಜಕೀಯಕ್ಕೆ ಬಂದ್ರ ಗಿಮಿಕ್​ ನಡೆಯಲ್ಲ, ಅವರು ಯಾವ ಹೋರಾಟದಲ್ಲಿ ಪಾಲ್ಗೊಂಡಿದ್ದರು ಎಂದು ಪ್ರಶ್ನಿಸಿದ್ದಾರೆ.

ಈ ಮಧ್ಯೆ ತುಮಕೂರಿನಲ್ಲಿ ಮಾತನಾಡಿದ ಜೆಡಿಎಸ್‌ ರೆಬೆಲ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌, ಗೀತಾ ಶಿವರಾಜ್​ಕುಮಾರ್​ ರಾಜಕೀಯಕ್ಕೆ ಬಂದು ಏನಾದರು ಅನ್ನೋದೇ ಉಪೇಂದ್ರರಿಗೆ ಪಾಠ ಎಂದು ಹೇಳಿದ್ದಾರೆ. ಈ ಮಧ್ಯೆ ನಟ ಶಿವರಾಜ್‌ ಕುಮಾರ್‌, ಉಪೇಂದ್ರಗೆ ಆಲ್‌ ದಿ ಬೆಸ್ಟ್ ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್​)

 

 

Leave a Reply

Your email address will not be published. Required fields are marked *

Back To Top