Wednesday, 19th September 2018  

Vijayavani

ಹವಾಲಾ ಕೇಸ್​ನಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಡಿಕೆಶಿಗೆ ಮತ್ತೊಂದು ಕಡೆ ಅನಾರೋಗ್ಯ        ಬಂಧನದಿಂದ ತಪ್ಪಿಸಿಕೊಳ್ಳಲು‌ ಸಚಿವ ಡಿಕೆಶಿ ಶತಪ್ರಯತ್ನ; ವಕೀಲರೊಂದಿಗೆ ಸತತ ಚರ್ಚೆ        ಡಿಕೆಶಿ ವಿರುದ್ಧ ದಾಖಲಾಗಿರುವ ಪ್ರಕರಣದ ಮಾಹಿತಿ ಪಡೆದ ಸಿಎಂ ಎಚ್ಡಿಕೆ; ಅಧಿಕಾರಿಗಳೊಂದಿಗೆ ಚರ್ಚೆ        ಬೆಳಗಾವಿ ರಾಜಕಾರಣದಲ್ಲಿ ಡಿಕೆಶಿ ಹಸ್ತಕ್ಷೇಪದ ಬಗ್ಗೆ ಸಿಎಂ ಜತೆ ಚರ್ಚೆಯನ್ನೇ ನಡೆಸಿಲ್ಲ ಎಂದ ಸತೀಶ್​ ಜಾರಿಕಿಹೊಳಿ        ಜೆಡಿಎಸ್​ ಸೇರುವಂತೆ ಆಳಂದ ಬಿಜೆಪಿ ಶಾಸಕ ಸುಭಾಷ್​ ಗುತ್ತೇದಾರ್​ಗೆ ಎಚ್​ಡಿಕೆ ಆಹ್ವಾನ       
Breaking News

ಖಾತೆಗಳಲ್ಲಿ ನನ್ನ ಹಸ್ತಕ್ಷೇಪವಿಲ್ಲ: ಎಚ್‌. ಡಿ. ರೇವಣ್ಣ

Thursday, 14.06.2018, 7:24 PM       No Comments

ಹಾಸನ: ನಾನು ಯಾವುದೇ ಸಚಿವರ ಖಾತೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಆ ಪ್ರಮೇಯವೂ ನನಗೆ ಬಂದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ನನ್ನ ಖಾತೆಯ ಬಗ್ಗೆ ಮಾತ್ರವೇ ತೀರ್ಮಾನ ತೆಗೆದುಕೊಳ್ಳುತ್ತೇನೆ. ನನ್ನ ಜಿಲ್ಲೆಗೆ ಸಂಬಂಧಿಸಿದ ವಿಷಯವಾದರೆ ಮಾತ್ರ ಸಂಬಂಧಿಸಿದವರಿಂದ ಕೆಲಸ ಮಾಡಿಸಿಕೊಳ್ಳುತ್ತೇನೆ. ಬೇರೆಯವರ ಖಾತೆಯಲ್ಲಿ ನಾನ್ಯಾಕೆ ಹಸ್ತಕ್ಷೇಪ ಮಾಡಲಿ ಎಂದು ಪ್ರಶ್ನಿಸಿದರು.

ಇಂಜಿನಿಯರ್‌ಗಳ ವರ್ಗಾವಣೆ ವಿಷಯವಾಗಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನಗೊಂಡಿದ್ದು, ಸಿಎಂಗೆ ಕರೆ ಮಾಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆಂಬ ಮಾಧ್ಯಮ ವರದಿಗೆ ಪ್ರತಿಕ್ರಿಯಿಸಿ, ಬೇರೆ ಸಚಿವರು ತಮ್ಮ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಕೊಳ್ಳಬೇಕಿದ್ದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿಗೆ ಹೋಗಿ ಮಾಡಿಸಿಕೊಳ್ಳಬೇಕು. ಕಾಲ ಬಂದಾಗ ಇದಕ್ಕೆಲ್ಲ ನಾನು ಉತ್ತರ ಹೇಳುತ್ತೇನೆ, ನಾನೇನು ಓಡಿ ಹೋಗುವುದಿಲ್ಲ ಎಂದರು.

Leave a Reply

Your email address will not be published. Required fields are marked *

Back To Top