Saturday, 22nd September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಹೊಸ ಹೇರ್‌ ಸ್ಟೈಲ್‌ಗೆ ವಿರೋಧ!

Sunday, 11.03.2018, 4:25 PM       No Comments

ಬೆಂಗಳೂರು: ತಮ್ಮ ಮುಂಬರುವ ಚಿತ್ರಕ್ಕಾಗಿ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಮಾಡಿಸಿಕೊಂಡಿದ್ದ ಹೊಸ ಕೇಶ ವಿನ್ಯಾಸ ಕಂಡು ದೊಡ್ಮನೆ ಹುಡುಗನ ಫ್ಯಾನ್ಸ್‌ ಫುಲ್‌ ಖುಷಿಯಾಗಿದ್ದರೆ ಇತ್ತ ಕನ್ನಡ ಪರ ಸಂಘಟನೆ ವಿರೋಧ ವ್ಯಕ್ತಪಡಿಸಿದೆ.

ಪವನ್‌ ಒಡೆಯರ್‌ ನಿರ್ದೇಶನದ ಹೊಸ ಚಿತ್ರಕ್ಕಾಗಿ ಪುನೀತ್‌ ರಾಜ್‌ಕುಮಾರ್‌ ಅವರು ನ್ಯೂ ಹೇರ್‌ಸ್ಟೈಲ್‌ ಮಾಡಿಸಿಕೊಂಡಿದ್ದರು. ಇದೀಗ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್‌ಗೌಡ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಇಂಥ ಕೇಶ ವಿನ್ಯಾಸ ಬೇಕಿತ್ತಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಪುನೀತ್‌ ಅವರು ನಮ್ಮೆಲ್ಲರ ಹೆಮ್ಮೆಯ ಸಾಂಸ್ಕೃತಿಕ ರಾಯಭಾರಿ. ಡಾ.ರಾಜ್ ಅವರ ಹಾದಿಯಲ್ಲಿ ಸಾಗುವ ಭರವಸೆ ಮೂಡಿಸಿದ್ದವರು. ರಾಜ್‌ ಹೆಸರನ್ನು ಚಿರಸ್ಥಾಯಿಯಾಗಿಸುವ ತಾಕತ್ತುಳ್ಳ ಪುನೀತ್‌ಗೆ ಇಂತಹ ಹೇರ್‌ಸ್ಟೈಲ್‌ ಬೇಕಾ? ಸುದೀಪ್‌ರನ್ನು ನೋಡಿ ಅನುಸರಿಸಿದ್ದ ಯುವಕರ ದಂಡು ಅರ್ಧ ಕೂದಲನ್ನು ಕತ್ತರಿಸಿ ಇನ್ನರ್ಧ ಹಾಗೆ ಬಿಟ್ಟಿದ್ದರು. ಇದೀಗ ಪುನೀತ್‌ರ ಸರದಿಯಾ ಎಂದು ಪ್ರಶ್ನಿಸಿದ್ದಾರೆ.

ಹೇರ್‌ ಸ್ಟೈಲ್‌ ವಯಕ್ತಿಕ ವಿಚಾರವೇ ಆಗಿದ್ದರೂ ನಿಮ್ಮಲ್ಲೊಬ್ಬ ರಾಜ್‌ ಇದ್ದಾರೆ ಎಂಬುದನ್ನು ನಾವು ಗಮನಿಸಿದ್ದೇವೆ. ಸ್ಟಾರ್‌ ವಾರ್‌ ಬಿಟ್ಟು ನೈಜ ನಾಯಕನಾಗುವ ಎಲ್ಲ ಅರ್ಹತೆ ನಿಮಗಿದೆ. ಸಿನಿಮಾ ನಟನೆಯಲ್ಲಿ ಓಕೆ, ನಿಮ್ಮ ನಿಜ ಜೀವನದಲ್ಲಿ ಇದೆಲ್ಲಾ ಬೇಕೆ? ಎಂದು ರಮೇಶ್‌ ಕುಮಾರ್‌ ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top