Saturday, 20th October 2018  

Vijayavani

ಚೀಪ್ ಮೆಂಟಾಲಿಟಿ ನನಗಿಲ್ಲ - ಇದರ ಹಿಂದೆ ಕೈವಾಡ ಇರಬಹುದು - ನಟಿ ಶ್ರುತಿ ಹರಿಹರನ್ ಆರೋಪ ತಳ್ಳಿಹಾಕಿದ ಅರ್ಜುನ್ ಸರ್ಜಾ        ಸ್ಯಾಂಡಲ್​ವುಡ್​​ನಲ್ಲಿ ಮೀ ಟೂ - ನಾಳೆ ಸುದ್ದಿಗೋಷ್ಠಿಯಲ್ಲಿ ಶ್ರುತಿ ಹಾಕ್ತಾರಾ ಬಾಂಬ್ - ನಟಿ ವಿರುದ್ಧ ಗುಡುಗಿದ ಅರ್ಜುನ್ ಸರ್ಜಾ ಅತ್ತೆ        ಧರ್ಮ ವಿಚಾರದಲ್ಲಿ ಡಿಕೆಶಿ ಕ್ಷಮೆಯಾಚನೆಗೆ ಸಿದ್ದು ಸಿಟ್ಟು - ಒಂದೇ ವೇದಿಯಲ್ಲಿದ್ರೂ ಮುಖ ಮುಖ ನೋಡಲಿಲ್ಲ - ಜಂಟಿ ಸುದ್ದಿಗೋಷ್ಠಿಯಲ್ಲಿ ನಾಯಕರ ಮಹಾ ಮುನಿಸು        ಜೆಡಿಎಸ್‌, ಕಾಂಗ್ರೆಸ್‌ನ ಸುದ್ದಿಗೋಷ್ಠಿ - ಕಾಂಗ್ರೆಸ್‌, ಜೆಡಿಎಸ್‌ ಜಂಟಿ ಸಮರಕ್ಕೆ ಬಿಜೆಪಿ ವ್ಯಂಗ್ಯ- ಟ್ವೀಟ್‌ ಮೂಲಕ ಟಾಂಗ್‌        ಒಂದೇ ಮನಸ್ಸು ಎರಡು ದೇಹ ಅಂದ್ರು ಸಿಎಂ - ಈ ಜನ್ಮದಲ್ಲಿ ಗೌಡ್ರು-ಸಿದ್ದು ಒಂದಾಗಲ್ಲ ಅಂದ್ರು ಕಾರಜೋಳ - ದೋಸ್ತಿಗಳಿಗೆ ಬಿಜೆಪಿ ನಾಯಕರ ಟಕ್ಕರ್        ಗದಗಿನ ತೋಂಟದಾರ್ಯ ಶ್ರೀಗಳು ಲಿಂಗೈಕ್ಯ - ಹೃದಯಾಘಾತದಿಂದ ಗದಗ್‌ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶ - ನಾಳೆ ಗದಗದಲ್ಲಿ ಅಂತ್ಯಕ್ರಿಯೆ       
Breaking News

ಪ್ರಧಾನಿ ನರೇಂದ್ರ ಮೋದಿ ದಲಿತ ವಿರೋಧಿ ಮನಸ್ಥಿತಿ ಹೊಂದಿದ್ದಾರೆ: ರಾಹುಲ್​

Thursday, 09.08.2018, 7:48 PM       No Comments

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದಲಿತ ವಿರೋಧಿ ಮನಸ್ಥಿತಿ ಹೊಂದಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯ ಜಂತರ್​ ಮಂತರ್​ನಲ್ಲಿ ಎಸ್​/ಎಸ್​ಟಿ (ದೌರ್ಜನ್ಯ ತಡೆ)ಕಾಯ್ದೆ 1989ನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿರುವದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ರಾಹುಲ್​ ಗಾಂಧಿ ಕೇಂದ್ರದ ವಿರುದ್ಧ ಕಿಡಿ ಕಾರಿದರು.

ಮೋದಿ ಅವರು ದಲಿತ ವಿರೋಧಿ ಮನಸ್ಥಿತಿ ಹೊಂದಿದ್ದಾರೆ. ಮೋದಿ ಅವರ ಹೃದಯ ಮತ್ತು ಮನಸ್ಸಿನಲ್ಲಿ ದಲಿತರಿಗಾಗಿ ಯಾವುದೇ ಸ್ಥಾನ ಇಲ್ಲ. ಅವರು ದಲಿತರನ್ನು ದಮನ ಮಾಡಲು ಬಯಸುತ್ತಾರೆ ಎಂದು ಎಲ್ಲಾ ದಲಿತರಿಗೆ ಗೊತ್ತು. ಇದೇ ಕಾರಣಕ್ಕಾಗಿ ನಾವು ಪ್ರಧಾನಿಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರಧಾನಿ ವಿರುದ್ಧ ರಾಹುಲ್​ ಕಿಡಿ ಕಾರಿದರು.

ಈ ಕಾಯ್ದೆಯನ್ನು ಕಾಂಗ್ರೆಸ್​ ಸರ್ಕಾರ ಜಾರಿಗೆ ತಂದಿತ್ತು. ನಮ್ಮ ಪಕ್ಷ ಈ ಕಾಯ್ದೆಯನ್ನು ರಕ್ಷಿಸಲು ಬದ್ಧವಾಗಿದೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ನಾವು ಭಾರತವನ್ನು ಹೀಗೆ ಇರಲು ಬಿಡುವುದಿಲ್ಲ. ಭಾರತದಲ್ಲಿ ಎಲ್ಲರಿಗೂ ಸಮಾನ ಸ್ಥಾನಮಾನ ಸಿಗಬೇಕು ಎಂದು ನಾವು ಬಯಸುತ್ತೇವೆ. ದಲಿತರು, ಬಡವರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರು ಎಲ್ಲರಿಗೂ ಸಮಾನ ಸ್ಥಾನಮಾನ ಸಿಗಬೇಕು. ಇದಕ್ಕಾಗಿ ನಾವು ಹೋರಾಡುತ್ತೇವೆ ಎಂದು ರಾಹುಲ್​ ತಿಳಿಸಿದರು. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top