Friday, 21st September 2018  

Vijayavani

Breaking News

ನೀರು ಪೂರೈಕೆಗೆ ಆಗ್ರಹಿಸಿ ಪ್ರತಿಭಟನೆ

Wednesday, 13.06.2018, 9:38 PM       No Comments

ಹೊನ್ನಾವರ: ಇಲ್ಲಿನ ಉದ್ಯಮನಗರ ಉಂಟಾಗಿರುವ ವಿದ್ಯುತ್ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಬುಧವಾರ ಪಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಉದ್ಯಮ ನಗರದ ನಿವಾಸಿ ಶಾಂತಾ ಮೇಸ್ತ ಮಾತನಾಡಿ, ನಮ್ಮ ವಾರ್ಡ್​ನಲ್ಲಿ ವಿದ್ಯುತ್ತ ಸಮಸ್ಯೆ ಕಾಡುತ್ತಿದೆ. ಅದರಿಂದ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ನಿತ್ಯದ ಕೆಲಸ ಬಿಟ್ಟು ನೀರಿಗಾಗಿ ಅಲೆಯಬೇಕಾಗಿದೆ. ಈ ಕುರಿತು ಸಂಬಂಧಪಟ್ಟವರನ್ನು ವಿಚಾರಿಸಿದರೆ ಕುಮಟಾದಲ್ಲಿ ವಿದ್ಯುತ್ ಇಲ್ಲ ಎಂಬ ಸಬೂಬು ನೀಡುತ್ತಾರೆ. ಪಪಂ ಅಧ್ಯಕ್ಷರು, ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಯಶೋಧಾ ಮೇಸ್ತ ಮಾತನಾಡಿ, ನಮಗೆ ಕುಡಿಯಲು ಯೋಗ್ಯ ನೀರು ಸಿಗುತ್ತಿಲ್ಲ. ಉಪ್ಪು ನೀರು ಪೂರೈಕೆಯಾಗುತ್ತಿದೆ ಎಂದು ಆರೋಪಿಸಿದರು. ಪಪಂ ಅದ್ಯಕ್ಷೆ ರಾಜಶ್ರೀ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ, ನೀರು ಪೂರೈಕೆ ಮೋಟಾರ್ ದುರಸ್ತಿಯಲ್ಲಿದೆ. ಶಾಸಕರಿಗೆ ಮಾಹಿತಿ ನೀಡುತ್ತೇನೆ. ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆ ನೀಡಿದರು. ಶಾಸಕ ದಿನಕರ್ ಶೆಟ್ಟಿ ಸ್ಥಳಕ್ಕಾಗಮಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ, ಶೀಘ್ರ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನು ವಾಪಾಸ್ ಪಡೆದರು.

Leave a Reply

Your email address will not be published. Required fields are marked *

Back To Top