Saturday, 26th May 2018  

Vijayavani

ನಾಮಪತ್ರ ವಾಪಸ್ ಪಡೆದ ಸುರೇಶ್​ಕುಮಾರ್​- ಅವಿರೋಧವಾಗಿ ರಮೇಶ್​ಕುಮಾರ್​ ಆಯ್ಕೆ- ಎರಡನೇ ಬಾರಿಗೆ ಸ್ಪೀಕರ್​ ಆಗಿ ನೇಮಕ        ಸದನದಲ್ಲಿ ವಿಶ್ವಾಮತ ಪರೀಕ್ಷೆ- ಮೂರು ಪಕ್ಷಗಳ ಎಲ್ಲಾ ಶಾಸಕರು ಹಾಜರ್​- ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಬಿಎಸ್​ವೈ        ಮೈತ್ರಿ ಸರ್ಕಾರದ ಪರ್ವ ಆರಂಭ- ಸಾಲ ಮನ್ನಾ ಮಾಡ್ತಾರಾ ಎಚ್​ಡಿಕೆ- ಕೊಟ್ಟ ಮಾತು ಉಳಿಸಿಕೊಳ್ತಾರಾ ಕಾಂಗ್ರೆಸ್​ ನಾಯಕರು        ಸಚಿವ ಸ್ಥಾನಕ್ಕಾಗಿ ಲಾಬಿ ಶುರು- ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹಖಾತೆಗೆ ಡಿಕೆಶಿ ಪಟ್ಟು- ಹೈಕಮಾಂಡ್ ಭೇಟಿಗೆ ತೆರಳಲಿರುವ ಕೈ ನಾಯಕರು        ಮುಗಿದ ಬಹುಮತ ಸಾಬೀತಿನ ಪರೀಕ್ಷೆ- ಶಾಸಕರ ರೆಸಾರ್ಟ್​ ರಾಜಕೀಯ ಅಂತ್ಯ- ಇನ್ನಾದ್ರೂ ಕ್ಷೇತ್ರಗಳತ್ತ ತೆರಳ್ತಾರಾ ಎಂಎಲ್​ಎಗಳು        ಸಿಎಂಗೆ ಹೊಸ ಕಾರು ನೀಡಿದ ಡಿಪಿಎಆರ್- ಜಿಎ 6363 ಕಾರ್​ ನಂಬರ್​- ಹೊಸ ಕಾರು ಬಳಸಲು ಸಿಎಂ ನಿರ್ಧಾರ       
Breaking News

ಇನ್ನೂ ಸಿಗದ ಗೌರಿ ಹತ್ಯೆ ಹಂತಕರು: ಮತ್ತೆ ಬೀದಿಗಿಳಿದ ಪ್ರತಿಭಟನಾಕಾರರು

Tuesday, 05.12.2017, 3:17 PM       No Comments

<< ಸಿಎಂ ಮನೆಯವರೆಗೆ ರ‍್ಯಾಲಿ ತೆರಳಿದ್ದ ಅಭಿಮಾನಿಗಳನ್ನು ವಶಕ್ಕೆ ಪಡೆದ ಪೊಲೀಸರು >>

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಮಾಡಿದವರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಗೌರಿ ಹತ್ಯೆ ವಿರೋಧಿ ವೇದಿಕೆ ಮಂಗಳವಾರ ಪ್ರತಿಭಟನೆ ನಡೆಸಿತು.

ಹತ್ಯೆಯಾಗಿ ಮೂರು ತಿಂಗಳು ಕಳೆದರೂ ಇದುವರೆಗೆ ಹಂತಕರನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಆದಷ್ಟು ಬೇಗ ಹಂತಕರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಗೌರಿ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.

ಮೌರ್ಯ​ ಸರ್ಕಲ್​ನಿಂದ ಸಿಎಂ ನಿವಾಸದವರೆಗೆ ಗೌರಿ ಹತ್ಯೆ ವಿರೋಧಿ ವೇದಿಕೆಯಿಂದ ಪ್ರತಿಭಟನಾ ರ‍್ಯಾಲಿ ತೆರಳಿದಾಗ ಪ್ರತಿಭಟನಾಕಾರರನ್ನು ಮಾರ್ಗ ಮಧ್ಯೆಯೇ ಪೊಲೀಸರು ತಮ್ಮ ವಶಕ್ಕೆ ಪಡೆದರು.

ಗೌರಿ ಹಂತಕರ ರೇಖಾ ಚಿತ್ರ ಬಿಡುಗಡೆಯಾಗಿ ಹಲವು ವಾರಗಳೇ ಕಳೆದರೂ ಹಂತಕರ ಸುಳಿವು ಸಿಗದಿರುವುದು ಕುಟುಂಬದವರ ಹಾಗೂ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸಹೋದರಿ ಕವಿತಾ ಲಂಕೇಶ್ ಹಾಗೂ ಸಾಹಿತಿ ಚಂದ್ರಶೇಖರ ಪಾಟೀಲ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

Leave a Reply

Your email address will not be published. Required fields are marked *

Back To Top