Saturday, 21st July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ಪ್ರತ್ಯೇಕ ಧರ್ಮದ ಬಗ್ಗೆ ಉತ್ತರ ನೀಡದೆ ಸಿಎಂಗೆ ಮೈಕ್​ ಕೊಟ್ಟ ರಾಗಾ

Wednesday, 04.04.2018, 2:10 PM       No Comments

ದಾವಣಗೆರೆ: ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಶಿಫಾರಸು ಮಾಡುವ ಅಗತ್ಯವಿತ್ತೆ ಎಂದು ವಿದ್ಯಾರ್ಥಿನಿ ಕೇಳಿದ ಪ್ರಶ್ನೆಗೆ ಉತ್ತರ ನೀಡಲು ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ನಿರಾಕರಿಸಿದ್ದಾರೆ.

ರಾಜ್ಯ ಪ್ರವಾಸದಲ್ಲಿರುವ ರಾಹುಲ್​ ದಾವಣಗೆರೆಯಲ್ಲಿ ನಡೆದ ಸಂವಾದದಲ್ಲಿ ಪಾಲ್ಗೊಂಡಿದ್ದಾಗ ಲಿಂಗಾಯತ ಪ್ರತ್ಯೇಕ ಸಂಬಂಧಿ ಪ್ರಶ್ನೆಗೆ ಉತ್ತರ ನೀಡದೇ, ಮೈಕ್​ ಅನ್ನು ಸಿಎಂ ಸಿದ್ದರಾಮಯ್ಯನವರಿಗೆ ನೀಡಿದ್ದಾರೆ.
ಈ ವಿಷಯ ನನಗೆ ಸಂಬಂಧಿಸಿದ್ದಲ್ಲ. ಇದು ಕರ್ನಾಟಕದ ಪ್ರಶ್ನೆ ಎಂದು ಸಿದ್ದರಾಮಯ್ಯ ಅವರ ಕಡೆ ಬೆರಳು ತೋರಿಸಿ ರಾಹುಲ್ ಹಾರಿಕೆಯ ಉತ್ತರ ನೀಡಿ ಕೈ ತೊಳೆದುಕೊಂಡರು.

ಇದು ಸರ್ಕಾರದ ವಿಷಯವಲ್ಲ
ಈ ಕುರಿತು ಉತ್ತರಿಸಿದ ಸಿದ್ದರಾಮಯ್ಯ, ಇದು ಹೊಸದಾಗಿ ನಮ್ಮ ಸರ್ಕಾರ ಮಾಡಿದ ವಿಷಯ ಅಲ್ಲ. ವೀರಶೈವ ಹಾಗೂ ಲಿಂಗಾಯತವನ್ನು ಪ್ರತ್ಯೇಕ ಧರ್ಮ ಮಾಡಿ ಎಂದು ಶಾಮನೂರು ಶಿವಶಂಕರಪ್ಪ ಸೇರಿದಂತೆ ನಾಲ್ವರು ಪ್ರತ್ಯೇಕ ಮನವಿ ಕೊಟ್ಟಿದ್ದರು. ಅಲ್ಲದೆ, ಲಿಂಗಾಯತ ಧರ್ಮದ ಬಗ್ಗೆ ಒತ್ತಡಗಳು ಹೆಚ್ಚಾದವು. ಆಗ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿದೆವು ಎಂದು ಸ್ಪಷ್ಟನೆ ನೀಡಿದರು.

ನ್ಯಾಯಮೂರ್ತಿ ನಾಗಮೋಹನ್​ ದಾಸ್ ವರದಿ ಆಧಾರದ ಮೇಲೆ ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಕೇಂದ್ರ ಸರ್ಕಾರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

Leave a Reply

Your email address will not be published. Required fields are marked *

Back To Top