Saturday, 21st July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ನಾಳೆಯಿಂದ ಎರಡು ದಿನ ರಾಹುಲ್​ ಗಾಂಧಿ ರಾಜ್ಯ ಪ್ರವಾಸ

Monday, 19.03.2018, 3:51 PM       No Comments

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಮಂಗಳವಾರದಿಂದ(ಮಾ.20) ಎರಡು ದಿನ ರಾಜ್ಯದಲ್ಲಿ ಮೂರನೇ ಹಂತದ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ‌ಪರಮೇಶ್ವರ್ ಹೇಳಿದ್ದಾರೆ.
ಮಾರ್ಚ್ ೨೦ರಂದು ಮಂಗಳೂರಿಗೆ ಆಗಮಿಸಲಿರುವ ರಾಹುಲ್​ ಗಾಂಧಿ, ಮಾ.೨೧ ರಂದು ಚಿಕ್ಕಮಗಳೂರು ಹಾಗೂ ಹಾಸನ ಪ್ರವಾಸ ಕೈಗೊಂಡು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇನ್ನೊಂದು ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ
ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಹ್ಯಾರಿಸ್ ಸೇರಿ ಎಲ್ಲಾ ಹಾಲಿ ಶಾಸಕರಿಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ. ಗೆಲ್ಲುವ ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದರು.

ಮತಯಂತ್ರ ಬೇಡ ಮತಪತ್ರವಿರಲಿ
ಎಲೆಕ್ಟ್ರಾನಿಕ್​ ಮತಯಂತ್ರಗಳ ಬಳಕೆ ಬಗ್ಗೆ ನಮ್ಮದೂ ವಿರೋಧವಿದೆ. ಮತಪತ್ರ ಬಳಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ. ಅಶೋಕ್​ ಖೇಣಿ ಸೇರ್ಪಡೆ ಬಗ್ಗೆ ಕೆಲವರು ವಿರೋಧ ವ್ಯಕ್ತಪಡಿಸಿರಬಹುದು. ಆದರೆ, ಈ ವಿಷಯದಲ್ಲಿ ‌ಪಕ್ಷ ತೀರ್ಮಾನ ಕೈಗೊಂಡಿದೆ. ಅದಕ್ಕೆ ಎಲ್ಲರೂ ಬದ್ಧ ರಾಗಿರಬೇಕು ಎಂದು ಪಕ್ಷದ ನಿರ್ಧಾರವನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡರು.

ಉತ್ತರ ಆಧರಿಸಿ ಮೊಯ್ಲಿ ಪುತ್ರನ ವಿರುದ್ಧ ಕ್ರಮ
ವೀರಪ್ಪಮೊಯ್ಲಿ ಪುತ್ರ ಹರ್ಷ ಮೊಯ್ಲಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಉತ್ತರ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

Leave a Reply

Your email address will not be published. Required fields are marked *

Back To Top