Thursday, 24th May 2018  

Vijayavani

Breaking News

ಎಐಸಿಸಿ ಅಧ್ಯಕ್ಷ ಚುನಾವಣೆ: ನಾಮಪತ್ರ ಸಲ್ಲಿಸಿದ ರಾಹುಲ್​ ಗಾಂಧಿ

Monday, 04.12.2017, 12:08 PM       No Comments

<< ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ , ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ಆಶೀರ್ವಾದ ಪಡೆದು ನಾಮಿನೇಷನ್​ >>

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್​ ಗಾಂಧಿ ಸೋಮವಾರ ನಾಮಪತ್ರ ಸಲ್ಲಿಸಿದರು.

ಬೆಳಗ್ಗೆ 11 ಗಂಟೆಗೆ ದೆಹಲಿಯ ಅಕ್ಬರ್​ ರೋಡ್​ನಲ್ಲಿರುವ ಕಾಂಗ್ರೆಸ್​ ಪ್ರಧಾನ ಕಚೇರಿಯಲ್ಲಿ ರಾಹುಲ್​ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು. ಇದಕ್ಕೂ ಮುನ್ನ ರಾಹುಲ್​ ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಮತ್ತು ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು.

ರಾಹುಲ್​ ನಾಮಪತ್ರ ಸಲ್ಲಿಕೆ ವೇಳೆ ಮನಮೋಹನ್​ ಸಿಂಗ್​, ಶೀಲಾ ದೀಕ್ಷಿತ್​, ಸುಶೀಲ್​ ಕುಮಾರ್​ ಶಿಂಧೆ, ಗುಲಾಂ ನಬಿ ಆಜಾದ್​, ಮೊಹ್ಸಿನಾ ಕಿದ್ವಾಯಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಿರಿಯ ಕಾಂಗ್ರೆಸ್​ ನಾಯಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮನಮೋಹನ್​ ಸಿಂಗ್​ ಅವರು ರಾಹುಲ್​ ಕಾಂಗ್ರೆಸ್​ನ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಮಪತ್ರ ಸಲ್ಲಿಸಲು ಸೋಮವಾರ ಮಧ್ಯಾಹ್ನ 3 ಗಂಟೆಯವರೆಗೂ ಕಾಲಾವಕಾಶವಿದ್ದು, ಸದ್ಯ ರಾಹುಲ್​ ಗಾಂಧಿ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್​ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಡಿ.​ 19 ರಂದು ಪಕ್ಷ ಅಧಿಕೃತವಾಗಿ ಘೋಷಣೆ ಮಾಡಲಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top