Sunday, 24th June 2018  

Vijayavani

ಆಪ್ತರ ಜತೆ ಮಾಜಿ ಸಿಎಂ ಸಭೆ ಹಿನ್ನೆಲೆ - ಸಿದ್ದರಾಮಯ್ಯ ಭೇಟಿಗೆ ತೆರಳಿದ ಪರಂ - ರಾಜಕೀಯ ವಿಚಾರಗಳ ಬಗ್ಗೆ ನಾಯಕರ ಚರ್ಚೆ ಸಾಧ್ಯತೆ        ಪ್ರಕೃತಿ ಚಿಕಿತ್ಸಾಲಯದಿಂದ ಹೊರ ಬಂದ ಸಿದ್ದು - ಅಭಿಮಾನಿಗಳ ಜತೆ ಮಾಜಿ ಸಿಎಂ ಚರ್ಚೆ - ಕೈ ಕಾರ್ಯಕರ್ತರ ಜತೆ ಸೆಲ್ಫಿಗೆ ಫೋಸ್​​        ಶಿವಮೊಗ್ಗದಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ - ರೌಡಿ ಶೀಟರ್​​​ ಹಬೀಬ್​ ಬರ್ಬರ ಹತ್ಯೆ - ತುಂಗಾನಗರ ಠಾಣೆಯಲ್ಲಿ ಪ್ರಕರಣ        ಖಾತೆ ಹಂಚಿಕೆಯಾಯ್ತು, ಈಗ ಬಂಗಲೆ ಸರದಿ - ಒಂದೊಂದು ಬಂಗಲೆಗೆ ಮೂವರ ಪೈಪೋಟಿ - ಸಿಎಂ ಕುಮಾರಸ್ವಾಮಿಗೆ ಬಂಗಲೆ ಕೊಡೋದೇ ಚಿಂತೆ        ಹಿಟ್​​ಲಿಸ್ಟ್​​ನಲ್ಲಿದ್ದ 20 ಉಗ್ರರ ಪೈಕಿ ಇಬ್ಬರು ಫಿನಿಶ್ - ಕುಲ್ಗಾಮದಲ್ಲಿ ಇಬ್ಬರು ಎಲ್​​ಇಟಿ ಉಗ್ರರು ಉಡೀಸ್​ - ಶಸ್ತ್ರ ಸಹಿತ ಒಬ್ಬ ಟೆರರ್​ ಸರೆಂಡರ್        ಮನೆಗಾಗಿ ಕಣ್ಣೀರಿಟ್ಟ ವೃದ್ಧೆಗೆ ಶಾಸಕರ ಸಹಾಯ - 20 ಸಾವಿರ ಹಣ ನೀಡಿದ ಡಾ.ರಂಗನಾಥ - ದಿಗ್ವಿಜಯ ನ್ಯೂಸ್​ ವರದಿಗೆ ಸ್ಪಂದಿಸಿದ ಕುಣಿಗಲ್​ ಶಾಸಕ       
Breaking News

2 ನಿಮಿಷ, 40 ಸೆಕೆಂಡ್​ನಲ್ಲಿ ಮುಗಿಯಿತು ರಾಹುಲ್​ ಸುದ್ದಿಗೋಷ್ಠಿ

Thursday, 14.06.2018, 9:23 AM       No Comments

ಮುಂಬೈ: ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ 2 ನಿಮಿಷ 40 ಸೆಕೆಂಡ್​ಗಳಲ್ಲಿ ಸುದ್ದಿಗೋಷ್ಠಿ ಮುಗಿಸಿ ಪತ್ರಕರ್ತರ ಮುನಿಸಿಗೆ ಕಾರಣರಾಗಿದ್ದಾರೆ.

ರಾಹುಲ್​ ಗಾಂಧಿಯವರು ಜೂ.13ರಂದು ಬೆಳಗ್ಗೆ 8.30ಕ್ಕೆ ಮುಂಬೈನಲ್ಲಿ ತಮ್ಮ ಮೊದಲ ಸುದ್ದಿಗೋಷ್ಠಿ ಏರ್ಪಡಿಸಿದ್ದರು. ಆದರೆ, ಕೇವಲ 2 ನಿಮಿಷ 40 ಸೆಕೆಂಡ್​ಗಳಲ್ಲಿ ಬಿಜೆಪಿ, ಆರ್​ಎಸ್​ಎಸ್​ ಹಾಗೂ ನರೇಂದ್ರ ಮೋದಿಯವರನ್ನು ನಿಂದಿಸಿ, ನಾಗಪುರಕ್ಕೆ ಹೋಗಬೇಕೆಂದು ಹೇಳಿ ಅಲ್ಲಿಂದ ಹೋಗಿಯೇ ಬಿಟ್ಟರು.

ರಾಹುಲ್​ ಪ್ರೆಸ್​ಕಾನ್ಪರೆನ್ಸ್​ಗೆ ಸುಮಾರು 100 ಜನ ಪತ್ರಕರ್ತರು ಆಗಮಿಸಿದ್ದರು. ಪತ್ರಿಕೆ, ಸುದ್ದಿವಾಹಿನಿ, ಆನ್​ಲೈನ್​ ಮೀಡಿಯಾದವರೆಲ್ಲ ಪಾಲ್ಗೊಂಡಿದ್ದರು. ಸುಮಾರು ಒಂದು ತಾಸು ತಡವಾಗಿ ಬಂದ ರಾಹುಲ್​ ಗಾಂಧಿ ಏನೂ ಸರಿಯಾಗಿ ಮಾತನಾಡದೆ ಮಾಧ್ಯಮದವರನ್ನು ನಿರಾಸೆಗೊಳಿಸಿದರು.

ರಾಹುಲ್ ಗಾಂಧಿಯವರಿಗೆ ನಾಗ್ಪುರಕ್ಕೆ ಹೋಗಲು ಸಮಯ ಮೀರುತ್ತಿತ್ತು. ಅದಕ್ಕೆ ಸುದ್ದಿಗೋಷ್ಠಿಯಲ್ಲಿ ಸರಿಯಾಗಿ ಮಾತನಾಡಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top