Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಕೃಷಿ ವಿವಿ ವಿದ್ಯಾರ್ಥಿಗಳಿಂದ ಮಾನಸರಪಳಿ

Friday, 29.06.2018, 12:03 AM       No Comments

ರಾಯಚೂರು: ಖಾಸಗಿ ಸಂಸ್ಥೆಗಳಿಗೆ ಕೃಷಿ ಕಾಲೇಜು ಆರಂಭಕ್ಕೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕೃಷಿ ವಿವಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ಮುಂದುವರಿದಿದ್ದು, ವಿದ್ಯಾರ್ಥಿಗಳು ನಗರದ ಬಸವೇಶ್ವರ ವೃತ್ತದಲ್ಲಿ ಗುರುವಾರ ಮಾನವ ಸರಪಳಿ ರಚಿಸಿ ರಸ್ತೆ ಸಂಚಾರ ತಡೆ ನಡೆಸಿದರು.

ವಾರದಿಂದ ತರಗತಿ ಹಾಗೂ ಪರೀಕ್ಷೆ ಬಹಿಷ್ಕರಿಸಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ವಿವಿಯಿಂದ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಯಿತು. ನಂತರ ಪೊಲೀಸರು ವಿದ್ಯಾರ್ಥಿಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ರಾಜ್ಯದಲ್ಲಿ ಖಾಸಗಿ ಸಂಸ್ಥೆಗಳಿಗೆ ಕೃಷಿ ಕಾಲೇಜು ಆರಂಭಕ್ಕೆ ಅನುಮತಿ ನೀಡಿದಲ್ಲಿ ಕೃಷಿ ಪದವಿ ಗುಣಮಟ್ಟ ಕುಸಿಯಲಿದ್ದು, ಯಾವುದೇ ಅಗತ್ಯ ಸೌಲಭ್ಯಗಳಿಲ್ಲದ ಖಾಸಗಿ ಕಾಲೇಜುಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಮಾನ್ಯತೆ ದೊರೆಯುವುದಿಲ್ಲ ಮತ್ತು ಪ್ರಾಯೋಗಿಕ ತರಬೇತಿಗೆ ಬೇಕಾದ ಸೌಲಭ್ಯ ಹೊಂದದೆ ಕಾಲೇಜು ನಡೆಸುವುದರಿಂದ ವಿದ್ಯಾರ್ಥಿಗಳು ಅತಂತ್ರ ಸ್ಥಿತಿ ಎದುರಿಸಬೇಕಾಗುತ್ತದೆ. ಜತೆಗೆ ರಾಜ್ಯದಲ್ಲಿ ನಾಯಿಕೊಡೆಗಳಂತೆ ಕಾಲೇಜು ಆರಂಭವಾಗುವ ಆತಂಕವಿದೆ ಎಂದರು.

ಈಗಾಗಲೇ ರೈ ಟೆಕ್ನಾಲಜಿ ಸಂಸ್ಥೆಗೆ ಕಾಲೇಜು ಆರಂಭಿಸಲು ನೀಡಲಾಗಿರುವ ಅನುಮತಿ ರದ್ದುಗೊಳಿಸಬೇಕು. ಮುಂದಿನ ದಿನಗಳಲ್ಲಿ ಕಾಲೇಜು ಆರಂಭಕ್ಕೆ ಖಾಸಗಿಯವರಿಗೆ ಅನುಮತಿ ನೀಡಬಾರದು ಎಂದು ವಿದ್ಯಾರ್ಥಿಗಳು ಘೋಷಣೆ ಕೂಗಿದರು. ವಿವಿಯ ಕೃಷಿ ಸ್ನಾತಕೋತ್ತರ, ಪದವಿ ಮತ್ತು ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *

Back To Top