Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಜು. 16 ರಂದು ತುಂಗಭದ್ರಾ ಐಸಿಸಿ ಸಭೆ

Sunday, 08.07.2018, 5:39 PM       No Comments

< ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಪ್ರಕಟ >

ಸಿಂಧನೂರು: ತುಂಗಭದ್ರಾ ಜಲಾಶಯದಿಂದ ಕೃಷಿ ಚಟುವಟಿಕೆಗಳಿಗೆ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಜು. 16ಕ್ಕೆ ಮುನಿರಾಬಾದಿನ ಕಾಡಾ ಕಚೇರಿಯಲ್ಲಿ ಸಭೆಯನ್ನು ಕರೆದು ಚರ್ಚಿಸಲಾಗುವುದು ಎಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಪಶುಸಂಗೋಪನಾ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ಮೂರು ವರ್ಷಗಳ ಬಳಿಕ ನೀರಿನ ಸಂಗ್ರಹ ಪ್ರಮಾಣ ಹೆಚ್ಚಿದೆ. ಈಗಾಗಲೇ 43 ಟಿಎಂಸಿ ನೀರು ಸಂಗ್ರಹವಿದ್ದು, ಜಲಾಶಯದ ಮೇಲ್ಭಾಗದಲ್ಲಿ ಮಳೆ ಆಗುತ್ತಿರುವುದರಿಂದ ವಾರದಲ್ಲಿ ಮತ್ತಷ್ಟು ಒಳ ಹರಿವು ಹೆಚ್ಚುವ ಸಾಧ್ಯತೆ ಇದೆ ಎಂದರು.

ಎಡದಂಡೆ ನಾಲೆ ನೀರು ಬರುವ ನಿರೀಕ್ಷೆಯಲ್ಲಿ ರೈತರು ಈಗಾಗಲೇ ಭತ್ತದ ನಾಟಿಗೆ ಸಿದ್ಧತೆ ಮಾಡಿ ಕಾಯುತ್ತಿದ್ದಾರೆ. ಐಸಿಸಿ ಸಭೆಗೂ ಮುನ್ನ ಹಿರಿಯ ರೈತ ಮುಖಂಡರೊಂದಿಗೆ ಚರ್ಚಿಸಿ ಎಡದಂಡೆ ನಾಲೆಗೆ ನೀರು ಹರಿಸುವ ಸೂಕ್ತ ಸಮಯದ ಕುರಿತು ಚರ್ಚಿಸಲಾಗುವುದು. ಸದ್ಯಕ್ಕೆ ನೀರು ಹರಿಸುವ ಕುರಿತು ಯಾವುದೇ ಗೊಂದಲ ಇಲ್ಲ ಎಂದರು.

Leave a Reply

Your email address will not be published. Required fields are marked *

Back To Top