Monday, 15th October 2018  

Vijayavani

‘ಉಪ' ಕದನಕ್ಕೆ ಇಂದು ಉಮೇದುವಾರಿಕೆ-ಶಿವಮೊಗ್ಗದಲ್ಲಿ ಮಾಜಿ ಸಿಎಂ ಪುತ್ರ ನಾಮಪತ್ರ- ಇತ್ತ ರಾಮನಗರದಿಂದ ಸಿಎಂ ಪತ್ನಿ        ಕುತೂಹಲ ಕೆರಳಿಸಿದ ಬೆಳಗಾವಿ ಎಪಿಎಂಸಿ ಎಲೆಕ್ಷನ್-ಲಕ್ಷ್ಮೀ ವಿರುದ್ಧ ಸೋಲು ತೀರಿಸಿಕೊಳ್ಳಲು ಜಾರಕಿಹೊಳಿ ಬಣ ಸಿದ್ಧತೆ        ಸ್ಯಾಂಡಲ್​ವುಡ್​ನಲ್ಲೂ ‘ಮೀ ಟೂ’ ಸದ್ದು-ನಟಿ ಸಂಗೀತಾ ಭಟ್ ದಯವಿಟ್ಟು ಗಮನಿಸಿ ಅಂತ ಫೇಸ್​ಬುಕ್​ನಲ್ಲಿ ನೋವು        ಮೀ ಟೂ ಆರೋಪಕ್ಕೆ ಖುಷ್ಬು ತಿರುಗೇಟು-ಕೇಜ್ರಿಸ್ಟಾರ್ ಮೇಲೆ ಬೊಟ್ಟು ಮಾಡಿದವರಿಗೆ ಎದುರೇಟು        MEE TOOಗೆ ಬಿತ್ತು ಮೊದಲ ವಿಕೆಟ್-ಕೇಂದ್ರ ಸಚಿವ ಸ್ಥಾನಕ್ಕೆ ಎಂ.ಜೆ.ಅಕ್ಬರ್ ರಿಸೈನ್​        ಪೆಟ್ರೋಲ್ ಬ್ಯಾರಲ್ ಸ್ಫೋಟಕ್ಕೆ ಕೊಪ್ಪಳದ ಅಧಿಕಾರಿ ಸಾವು -ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನಲ್ಲಿ ಕೊನೆಯುಸಿರು       
Breaking News

ಜೋಡೆತ್ತು ಭಾರದ ಕಲ್ಲು ಎಳೆಯುವ ಸ್ಪರ್ಧೆ, ಕೆಳಗೆ ಬಿದ್ದ ರೈತನಿಗೆ ಗಾಯ

Friday, 29.06.2018, 7:25 PM       No Comments
<ಗಾಯಗೊಂಡ ಹುಲಿಗೆಪ್ಪ ರಿಮ್ಸ್ ಆಸ್ಪತ್ರೆಗೆ ದಾಖಲು >

ರಾಯಚೂರು: ಕಾರಹುಣ್ಣಿಮೆ ನಿಮಿತ್ತ ಎತ್ತುಗಳು ಭಾರದ ಕಲ್ಲು ಎಳೆಯುತ್ತಿದ್ದ ವೇಳೆ ರೈತ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಜಾಲಿಬೆಂಚಿ ಗ್ರಾಮದ ರೈತ ಮುಖಂಡ ಹುಲಿಗೆಪ್ಪ ಗಾಯಗೊಂಡಾತ. ಗ್ರಾಮದಲ್ಲಿ ಗುರುವಾರ ಸಂಜೆ ನಡೆದ ಎತ್ತುಗಳು ಭಾರದ ಕಲ್ಲು ಎಳೆಯುವ ಸ್ಪರ್ಧೆ ವೇಳೆ ಮುಂದೆ ಓಡುತ್ತಿದ್ದ ಹುಲಿಗೆಪ್ಪ ಆಯ ತಪ್ಪಿ ಬಿದಿದ್ದಾರೆ. ಜೋಡೆತ್ತು ಎಳೆಯುತ್ತಿದ್ದ ಕಲ್ಲು ಆತನ ಮೈಮೇಲೆ ಬಂದಿದೆ. ತಕ್ಷಣ ಸ್ಥಳದಲ್ಲಿದ್ದವರು ರಕ್ಷಣೆ ಮಾಡಿದ್ದಾರೆ. ಗಾಯಗೊಂಡ ಹುಲಿಗೆಪ್ಪನನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯರಗೇರಾ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

Back To Top