Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಮಲೆನಾಡಿನಲ್ಲಿ ಕಡಿಮೆಯಾದ ಮಳೆಯ ಅಬ್ಬರ: ಚಾರ್ಮಡಿಯಲ್ಲಿ ಸಂಚಾರ ಪ್ರಾರಂಭ

Friday, 15.06.2018, 8:18 AM       No Comments

ಚಿಕ್ಕಮಗಳೂರು/ಕೊಡಗು : ಹಲವು ದಿನಗಳಿಂದ ಬಿಡದೆ ಸುರಿಯುತ್ತಿದ್ದ ಮಳೆಯ ಪ್ರಮಾಣ ಸ್ವಲ್ಪ ತಗ್ಗಿದೆ. ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಕಡಿಮೆಯಾಗಿದ್ದು ಭಾಗಮಂಡಲದಲ್ಲಿ ಪ್ರವಾಹ ಇಳಿಮುಖವಾಗಿದೆ. ಎಲ್ಲ ವಾಹನಗಳ ಸಂಚಾರ ಪ್ರಾರಂಭವಾಗಿದೆ. ಅಲ್ಲದೆ ಹುಣಸೂರು-ಗೋಣಿಕೊಪ್ಪಲು ಹೆದ್ದಾರಿ ಮುಕ್ತವಾಗಿದೆ.

ಚಿಕ್ಕಮಗಳೂರಲ್ಲೂ ತಗ್ಗಿದ ಮಳೆ

ಚಿಕ್ಕಮಗಳೂರಲ್ಲಿ ನಿನ್ನೆ ಸಂಜೆಯಿಂದ ಮಳೆ ಕಡಿಮೆಯಾಗಿದೆ. ಜಲಾವೃತಗೊಂಡಿದ್ದ ರಸ್ತೆಗಳೆಲ್ಲ ಮುಕ್ತವಾಗಿವೆ. ಕುದುರೆ ಮುಖ ಮಾರ್ಗದಲ್ಲಿ ಮುಳುಗಡೆಯಾಗಿದ್ದ ಸೇತುವೆ ಮೇಲೆ ಕೂಡ ಸಂಚಾರ ಪ್ರಾರಂಭವಾಗಿದೆ. ಚಾರ್ಮಾಡಿಯಲ್ಲೂ ವಾಹನಗಳು ಸಂಚರಿಸುತ್ತಿವೆ.
ಎನ್​.ಆರ್​ಪುರ, ಶೃಂಗೇರಿ, ಕೊಪ್ಪ, ಮೂಡಿಗೆರೆಗಳಲ್ಲೂ ಮಳೆ ಕಡಿಮೆಯಾಗಿದ್ದು ಕಾಫಿನಾಡು ಸಹಜ ಸ್ಥಿತಿಯತ್ತ ಬಂದಿದೆ. ತುಂಗಾ, ಭದ್ರಾ ನದಿಗಳು ಮೈದುಂಬಿ ಹರಿಯುತ್ತಿವೆ.

Leave a Reply

Your email address will not be published. Required fields are marked *

Back To Top