Wednesday, 19th September 2018  

Vijayavani

ಆಸ್ಪತ್ರೆಯಿಂದ ಸಚಿವ ಡಿ.ಕೆ. ಶಿವಕುಮಾರ್​​ ಡಿಸ್ಚಾರ್ಜ್ - ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ - ಎಟಿಎಂ ಆರೋಪಕ್ಕೆ ಉತ್ತರಿಸ್ತಾರಾ?        ಗಾಂಧಿ ಕುಟುಂಬಕ್ಕೆ ಎಟಿಎಂ ಅಂತೆ ಡಿಕೆಶಿ - ಎಐಸಿಸಿಗೆ 600 ಕೋಟಿ ಆಗಿದ್ಯಂತೆ ಡೆಪಾಸಿಟ್ - ಡಿಕೆಶಿ ವಿರುದ್ಧ ಆರೋಪಗಳ ಪಟ್ಟಿ        ಇಡಿ ಪ್ರಕರಣದಲ್ಲಿ ಡಿಕೆಶಿ ಬಂಧನ ಖಚಿತ - ಅರೆಸ್ಟ್‌ ಬೆನ್ನಲ್ಲೇ ಮೈತ್ರಿ ಸರ್ಕಾರ ಖತಂ - ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಭವಿಷ್ಯ        ಬೆಂಗ್ಳೂರು ರಸ್ತೆ ಗುಂಡಿಗೆ ಹೈಕೋರ್ಟ್ ಗರಂ - ಬೆಳಗ್ಗೆಯೊಳಗೆ ಗುಂಡಿ ಮುಚ್ಚಿಸಿ - ಕೆಲ್ಸ ಮಾಡದಿದ್ರೆ ಬಿಬಿಎಂಪಿ ಬಂದ್ ಅಂದ್ರು ಸಿಜೆ        ನವಾಜ್​​ ಷರೀಫ್​ಗೆ ರಿಲೀಫ್ - ಜೈಲಿನಿಂದ ಪಾಕ್ ಮಾಜಿ ಪ್ರಧಾನಿ, ಪುತ್ರಿ ಬಿಡುಗಡೆ - ಇಸ್ಲಾಮಾಬಾದ್ ಹೈಕೋರ್ಟ್ ಆದೇಶ        ದುಬೈನಲ್ಲಿ ಏಷ್ಯಾಕಪ್ ಹಣಾಹಣಿ - ಹೈವೋಲ್ಟೇಜ್ ಮ್ಯಾಚ್​ಗೆ ಬದ್ಧ ವೈರಿಗಳು ಸಜ್ಜು - ಟಾಗ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ       
Breaking News

ರಾಜ್ಯಾದ್ಯಂತ ಭಾರಿ ಮಳೆ: ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳ

Tuesday, 10.07.2018, 4:15 PM       No Comments

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ಹಾಗೂ ನದಿಗಳು ಮೈದುಂಬಿ ಹರಿಯುತ್ತಿವೆ. ಜಲಾಶಗಳ ನೀರಿನಮಟ್ಟ ಏರಿಕೆಯಾಗಿದೆ. ಕೆ.ಆರ್.ಎಸ್. 111.5 ಅಡಿ ತುಂಬಿದ್ದು, ತಮಿಳುನಾಡಿಗೆ ನೀರು ಹರಿಸಲು ಸಿಎಂ ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರಿನ ಶಾಂತಿನಗರ, ವಿಲ್ಸನ್​ಗಾರ್ಡನ್​, ಕಾರ್ಪೋರೇಶನ್​, ಜೆಸಿ ರಸ್ತೆ ಮತ್ತಿತರ ಕಡೆಗಳಲ್ಲಿ ಮಧ್ಯಾಹ್ನದಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ.

ಚಿಕ್ಕಮಗಳೂರಲ್ಲಿ ಗುಡ್ಡ ಕುಸಿತ
ಚಿಕ್ಕಮಗಳೂರಲ್ಲಿ ಮಳೆ ಮುಂದುವರಿದಿದ್ದು ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಮತ್ತೆ ಕುಸಿತ ಉಂಟಾಗಿದೆ. ಕವಿಕಲ್​ ಗುಂಡಿ ಸಮೀಪ ಗುಡ್ಡ ಕುಸಿದಿದ್ದು ಐಡಿ ಪೀಠ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಗಿರಿ ಸಾಲಿನಲ್ಲಿ ರಸ್ತೆಗೆ ಕಲ್ಲು ಇಟ್ಟು ವಾಹನ ಸವಾರರಿಗೆ ಮುನ್ನಚ್ಚರಿಕೆ ನೀಡಲಾಗಿದ್ದು ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟಬುತ್ತಿ ಎಂಬಂತಾಗಿದೆ.
ಕೊಪ್ಪ ತಾಲೂಕಿನಲ್ಲಿ ಭಾರಿ ಮಳೆಗೆ ಮನೆಯೊಂದು ಕುಸಿದಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

ಕಂಟೈನರ್​ ಮೇಲೆ ಬಿದ್ದ ಮರ
ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು ಕಂಟೈನರ್​ ಮೇಲೆ ಮರ ಉರುಳಿ ಬಿದ್ದಿದೆ. ಇನ್ನು ಕೆಎಸ್​ಆರ್​ಟಿಸಿ ಬಸ್​ ಮೇಲೆ ವಿದ್ಯುತ್​ ಕಂಬ ಬಿದ್ದು ಬಸ್​ಗೆ ಭಾಗಶಃ ಹಾನಿಯಾಗಿದೆ.

ಶಿವಮೊಗ್ಗದ ತೀರ್ಥಹಳ್ಳಿ, ಆಗುಂಬೆ, ಹೊಸನಗರ, ಸಾಗರ ಭಾಗಗಳಲ್ಲೂ ಅತಿ ಹೆಚ್ಚು ಮಳೆಯಾಗುತ್ತಿದ್ದು ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜಾ ಘೋಷಣೆ ಮಾಡಲಾಗಿದೆ.

ಕುಮಾರಧಾರಾ ಹರಿವು ಹೆಚ್ಚಳ
ಮಂಗಳೂರಿನಲ್ಲಿ ಭಾರಿ ಮಳೆಗೆ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು ಹೊಸ್ಮಠ ಸೇತುವೆ ಮತ್ತೆ ಮುಳುಗಡೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಪರ್ಕವಾಗಿರುವ ಈ ಸೇತುವೆ ಸೋಮವಾರ ರಾತ್ರಿಯಿಂದಲೇ ಮುಳುಗಡೆಯಾಗಿದ್ದು ರಸ್ತೆ ಸಂಚಾರ ಬಂದ್​ ಮಾಡಲಾಗಿದೆ. ಹಾಸನ-ಮಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ರಸ್ತೆ ಕಾಮಗಾರಿಗೆ ಮಳೆ ಅಡ್ಡಿಯಾಗಿದೆ.

ಕೋಲಾರದಲ್ಲಿ ಗಾಳಿ ಮಳೆ
ಕೋಲಾರದಲ್ಲಿ ಉತ್ತಮ ಗಾಳಿ, ಮಳೆಯಾಗುತ್ತಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ರಾಗಿ, ಜೋಳ, ತೊಗರಿ, ಅವರೆಯಂಥ ದ್ವಿದಳ ಧಾನ್ಯಗಳ ಬಿತ್ತನೆಯಲ್ಲಿ ರೈತರು ತೊಡಗಿದ್ದಾರೆ. ಧಾರವಾಡದಲ್ಲೂ ಒಂದೇ ಸಮನೆ ಜಿಟಿಜಿಟಿ ಮಳೆಯಾಗುತ್ತಿದೆ.

Leave a Reply

Your email address will not be published. Required fields are marked *

Back To Top