Thursday, 21st June 2018  

Vijayavani

ಮೈತ್ರಿ ಸರ್ಕಾರದಲ್ಲಿ ಮತ್ತೆ ತಾರತಮ್ಯತೆ - ರೇವಣ್ಣ ಕಾರ್​​​ಗೆ ಗೇಟ್​​ ಓಪನ್​​, ದೇಶಪಾಂಡೆಗೆ ನಟರಾಜ ಸರ್ವಿಸ್​​        ಅಂದು ಹೇಳಿದ್ದೊಂದು.. ಇಂದು ಮಾಡಿದ್ದೊಂದು - ಸಂಡೂರಿನಲ್ಲಿ ಕೊಟ್ಟು ಮಾತು ಮರೆತ ಸಿಎಂ - ಮತ್ತೆ ಗಣಿಗಾರಿಕೆಗೆ ಅವಕಾಶ        ಡಿಕೆಶಿ ಡೈರಿಯಲ್ಲಿ ಕೆಜಿ ಕೋಡ್​ ವಿಚಾರ - ದೆಹಲಿಯಿಂದ ಆಗಮಿಸಿದ ಇಡಿ ತಂಡ - ಡಿಕೆಶಿ ಸೇರಿ ಐವರು ವಿರುದ್ಧ ಇಡಿ FIR ಸಾಧ್ಯತೆ        ಶಕ್ತಿ ಭವನದಲ್ಲಿ ಬಜೆಟ್​​​ ಪೂರ್ವಭಾಗಿ ಸಭೆ - ಸಣ್ಣ ನೀರಾವರಿ ಇಲಾಖೆ ಜತೆ ಸಿಎಂ ಚರ್ಚೆ - ಅನುದಾನ ಭರವಸೆ ನೀಡಿದ ಎಚ್​ಡಿಕೆ        ಬಿಜಿಎಸ್​ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ - ನಡೆದಾಡುವ ದೇವರ ಕಾಣಲು ಗಣ್ಯರ ದಂಡು - ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​​ವೈ        ಜಿಲ್ಲಾಸ್ಪತ್ರೆಯಲ್ಲಿ ಅನಾಥವಾಯ್ತು ಕಂದಮ್ಮ - ಶಸ್ತ್ರಚಿಕಿತ್ಸೆಗೆ ಬಂದು ಮಗು ಬಿಟ್ಟೋದ ಹೆತ್ತಮ್ಮ - ರೋಧಿಸುತ್ತಿದೆ 3 ತಿಂಗಳ ಕೂಸು       
Breaking News

ಮಲೆನಾಡಲ್ಲಿ ಮಳೆಯ ಅಬ್ಬರ: ಮನೆ ಮೇಲೆ ಮರಬಿದ್ದು ನಾಲ್ವರಿಗೆ ಗಾಯ

Wednesday, 13.06.2018, 1:39 PM       No Comments

ಶಿವಮೊಗ್ಗ: ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಸಾಗರ ತಾಲೂಕಿನ ಗೌತಮಪುರ ಗ್ರಾಮದಲ್ಲಿ ಎರಡು ಮನೆಗಳ ಮೇಲೆ ಅರಳಿ ಮರ ಬಿದ್ದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕುರುವಳ್ಳಿ ಗ್ರಾಮದಲ್ಲಿ ಭಾರಿ ಗಾತ್ರದ ಮರ ಬಿದ್ದು ರಸ್ತೆ ಸಂಚಾರ ವ್ಯತ್ಯಯವಾಗಿದೆ.

ಬುಧವಾರ ಮುಂಜಾನೆ ಸುರಿದ ಭಾರಿ ಮಳೆಗೆ ಇಬ್ಬರ ಮನೆಯ ಮೇಲೆ ಅರಳಿ ಮರ ಬಿದ್ದಿದೆ. ಸೀತಮ್ಮ, ನಾಗರತ್ನ, ಸರೋಜಮ್ಮ ಹಾಗೂ ಸುಕನ್ಯಾ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು ಅವರೆಲ್ಲರನ್ನೂ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆಸಾಗರ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿದ್ದರು.

ರಸ್ತೆ ಸಂಚಾರ ಅಸ್ತವ್ಯಸ್ತ

ತೀರ್ಥಹಳ್ಳಿ ತಾಲೂಕಿನ ಕುರುವಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಮಳೆಗೆ ಮರ ಬಿದ್ದಿದ್ದು ತೀರ್ಥಹಳ್ಳಿ ಹಾಗೂ ಕೊಪ್ಪ ನಡುವಿನ ಸಂಚಾರ ಬಂದ್​ ಆಗಿದೆ. ಹಾಗಾಗಿ ವಾಹನಗಳೆಲ್ಲ ಬುಕ್ಲಾಪುರ ಮಾರ್ಗವಾಗಿ ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಸಂಚರಿಸುತ್ತಿವೆ.

Leave a Reply

Your email address will not be published. Required fields are marked *

Back To Top