Saturday, 21st July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ಲಿಂಗಾಯತರಿಗೆ ಅಲ್ಪಸಂಖ್ಯಾತ ಮಾನ್ಯತೆಗಾಗಿ ಕೇಂದ್ರಕ್ಕೆ ಶಿಫಾರಸು

Thursday, 29.03.2018, 3:03 AM       No Comments

ಬೆಂಗಳೂರು: ಲಿಂಗಾಯತ ಹಾಗೂ ಬಸವ ತತ್ವ ಪ್ರಣೀತ ವೀರಶೈವ ಲಿಂಗಾಯತ ಸಮುದಾಯಗಳಿಗೆ ಧಾರ್ವಿುಕ ಅಲ್ಪಸಂಖ್ಯಾತರ ಮಾನ್ಯತೆ ನೀಡುವಂತೆ ರಾಜ್ಯ ಸರ್ಕಾರ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವ ಐದು ದಿನಗಳ ಮೊದಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ಅಂಶ ತಡವಾಗಿ ಬೆಳಕಿಗೆ ಬಂದಿದೆ.

ರಾಜ್ಯ ಸರ್ಕಾರ ಮಾರ್ಚ್ 19ರಂದು ಸಚಿವ ಸಂಪುಟ ಸಭೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಎಚ್. ಎಸ್. ನಾಗಮೋಹನ್ ದಾಸ್ ನೇತೃತ್ವದ ತಜ್ಞರ ಸಮಿತಿ ವರದಿ ಆಧರಿಸಿ ಕರ್ನಾಟಕ ಅಲ್ಪಸಂಖ್ಯಾತರ ಆಯೋಗ ಮಾಡಿದ್ದ ಶಿಫಾರಸು ಒಪ್ಪಿಕೊಂಡಿತ್ತಲ್ಲದೇ ಮಾರ್ಚ್ 22ರಂದು ರಾಜ್ಯದಲ್ಲಿ ಲಿಂಗಾಯತರು ಹಾಗೂ ಬಸವ ತತ್ವ ಒಪು್ಪವ ವೀರಶೈವ ಲಿಂಗಾಯತರಿಗೆ ಧಾರ್ವಿುಕ ಅಲ್ಪಸಂಖ್ಯಾತರ ಸ್ಥಾನಮಾನ ನೀಡಿ, ಅಧಿಸೂಚನೆ ಹೊರಡಿಸಿತ್ತು. ಅದಾದ ಮರುದಿನವೇ ಅಂದರೆ, ಮಾರ್ಚ್ 23ರಂದು ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮೊಹಮದ್ ಮೊಹಸಿನ್ ಅವರು ಕೇಂದ್ರ ಸರ್ಕಾರದ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ದಾಖಲೆಗಳ ಸಹಿತ ಶಿಫಾರಸು ರವಾನಿಸಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಆಯೋಗ ಪರಿಗಣಿಸಿರುವ ಐತಿಹ್ಯಗಳು, ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ಧರ್ಮದ ತಳಹದಿಯ ಮೂಲ ವಿಷಯಗಳ ಸಹಿತ ಶಿಫಾರಸು ಕಳಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಕಾಯ್ದೆ 1994ರ ಸೆಕ್ಷನ್ 2ಡಿ ಅನ್ವಯ ರಾಜ್ಯದಲ್ಲಿ ಲಿಂಗಾಯತರು ಹಾಗೂ ಬಸವ ತತ್ವ ಅನುಸರಿಸುವ ವೀರಶೈವ ಲಿಂಗಾಯತರನ್ನು ಧಾರ್ವಿುಕ ಅಲ್ಪಸಂಖ್ಯಾತರು ಎಂದು ಘೋಷಿಸಿ ಅಧಿಸೂಚನೆ ಹೊರಡಿಸಿದ್ದು, ರಾಷ್ಟ್ರೀಯ ಅಲ್ಪಸಂಖ್ಯಾತರ ಕಾಯ್ದೆ 1992ರ ಸೆಕ್ಷನ್ 2ಸಿ ಅಡಿಯಲ್ಲಿ ದೇಶಾದ್ಯಂತ ನೆಲೆಸಿರುವ ಲಿಂಗಾಯತರು ಹಾಗೂ ಬಸವ ತತ್ವ ಒಪು್ಪವ ವೀರಶೈವ ಲಿಂಗಾಯತರನ್ನು ಧಾರ್ವಿುಕ ಅಲ್ಪಸಂಖ್ಯಾತರೆಂದು ಪರಿಗಣಿಸಲು ಈ ಮೂಲಕ ಶಿಫಾರಸು ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಕೇಂದ್ರ ಇಕ್ಕಟ್ಟಿಗೆ ಸಿಲುಕಿಸಲು ತಂತ್ರ: ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುತ್ತದೆ ಎಂಬ ಮಾಹಿತಿ ರಾಜ್ಯ ಸರ್ಕಾರಕ್ಕೆ ಇತ್ತು. ನೀತಿ ಸಂಹಿತೆ ಜಾರಿಯಾದ ನಂತರ ಶಿಫಾರಸು ಮಾಡಲು ಅವಕಾಶ ಇಲ್ಲವೆಂಬುದನ್ನು ಅರಿತೇ ಚುನಾವಣೆಯ ಕಣದಲ್ಲಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಬೇಕೆಂಬ ಉದ್ದೇಶದಿಂದಲೇ ತರಾತುರಿಯಲ್ಲಿ ರವಾನೆ ಮಾಡಿದೆ.

23ರಂದೇ ರವಾನೆ…

ರಾಜ್ಯ ಸರ್ಕಾರ ಮಾರ್ಚ್ 23ರಂದು ಅಂದರೆ ಐದು ದಿನಗಳ ಹಿಂದೆಯೇ ಲಿಂಗಾಯತ ಮತ್ತು ಬಸವ ತತ್ವ ಒಪು್ಪವ ವೀರಶೈವ ಲಿಂಗಾಯತರನ್ನು ಧಾರ್ವಿುಕ ಅಲ್ಪಸಂಖ್ಯಾತರೆಂದು ಪರಿಗಣಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳಿಸಿದ್ದರೂ ಈ ವಿಷಯವನ್ನು ಬಹಿರಂಗವಾಗಿ ಪ್ರಕಟಿಸಿರಲಿಲ್ಲ. ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾದ ಬಳಿಕ ಬುಧವಾರ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಕಳಿಸಿರುವ ಶಿಫಾರಸು ಕಡತದ ದಾಖಲೆಗಳು ಮಾಧ್ಯಮಗಳಿಗೆ ಸೋರಿಕೆಯಾಗಿವೆ.

 

Leave a Reply

Your email address will not be published. Required fields are marked *

Back To Top