Friday, 15th December 2017  

Vijayavani

1. ಸನ್ನಿ ನೈಟ್​ಗೆ ವ್ಯಾಪಕ ವಿರೋಧ ಹಿನ್ನೆಲೆ- ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರ್ಕಾರ- ಸಾವಿರಾರು ಅಭಿಮಾನಿಗಳಿಗೆ ನಿರಾಸೆ 2. ಆಟೋ ಮತ್ತು ಕಾರಿನ ಮೇಲೆ ಟಿಪ್ಪರ್ ಪಲ್ಟಿ- ಸ್ಥಳದಲ್ಲೇ ಮೂವರ ದುರ್ಮರಣ – ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ 3. ಶನಿಮುಖಿ ಸುನೀಲ್​ಗೆ ಸುಪಾರಿ ಕೇಡು- ವಾರದ ಅಚ್ಚರಿಯಲ್ಲಿ ಕ್ರೈಂ ವರದಿ ಕಿಂಗ್ ಲೇಖನ – ಇನ್ನೂ ಬರೆಯೋದು ಇದೆ ಎಂದ ಬೆಳಗೆರೆ 4. ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು- ಜೆಡಿಎಸ್ ಸಭೆಯಲ್ಲಿ ಮಾರಾಮಾರಿ- ಬಾಗಲಕೋಟೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು 5. ಗುಜರಾತ್ ವಿಧಾನಸಭೆಯಲ್ಲಿ ಯಾರು ಗೆಲ್ತಾರೆ- ನಾಯಿ ಬೊಗಳುತೈತೆ ಭವಿಷ್ಯ – ವೈರಲ್ ಆಯ್ತು ಬೌಬೌ ವಿಡಿಯೋ
Breaking News :

ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಮೇಲ್ಛಾವಣಿ ಕುಸಿತ: ವೃದ್ಧ ದಂಪತಿ ಸಾವು

Friday, 08.09.2017, 9:25 AM       No Comments

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಮೇಲ್ಛಾವಣಿ ಕುಸಿದಿದ್ದು, ವೃದ್ಧ ದಂಪತಿ ಮೃತಪಟ್ಟ ಘಟನೆ ಇಂಡಿ ತಾಲೂಕಿನ ಜೆವೂರ ಗ್ರಾಮದಲ್ಲಿ ನಡೆದಿದೆ.

ಮನೆ ಛಾವಣಿ ಕುಸಿತ ಬೆಳಗಾಗುವಷ್ಟರಲ್ಲಿ ದಂಪತಿ ಸಾವು

ಜೆವೂರ ಗ್ರಾಮದ ಕರಬಸಪ್ಪ ಆಕಳವಾಡಿ (75) ಆತನ ಪತ್ನಿ ಇಂದಿರಾಬಾಯಿ ಆಕಳವಾಡಿ (65) ಮೃತ ದುರ್ದೈವಿಗಳು. ಜೆವೂರ ಗ್ರಾಮದ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ. ಮಳೆಯಿಂದ ನೆನೆದಿದ್ದ ಮನೆ ಕುಸಿತವಾಗಿ ಅವಘಡ ಸಂಭವಿಸಿದೆ. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ಥವ್ಯವಸ್ಥಗೊಂಡಿದ್ದು, ಮನೆಯ ಮೇಲ್ಛಾವಣಿ ಕುಸಿಯುತ್ತಿವೆ. ಜಿಲ್ಲೆಯ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಇಂದು ಬೆಳಗ್ಗೆ ಮೇಲ್ಛಾವಣಿ ಕುಸಿದು ದಂಪತಿ ಮೃತಪಟ್ಟಿದ್ದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top