Wednesday, 22nd November 2017  

Vijayavani

1. ಉಗ್ರನ ವಿರುದ್ಧ ಕೊಡಲಿಲ್ಲ ಪಾಕ್ ಸಾಕ್ಷ್ಯ – LET ಕ್ರಿಮಿ ಹಫೀಜ್ ಸಯೀದ್​ಗೆ ಕ್ಲೀನ್​ಚಿಟ್ – ಮನೆಯಿಂದ ಹೊರಬರ್ತಾನೆ ಮುಂಬೈ ದಾಳಿ ಮಾಸ್ಟರ್ ಮೈಂಡ್ 2. ಅಲೆಮಾರಿಗಳ ಮನೆ ತೆರವು ವೇಳೆ ಅಮಾನವೀಯ ವರ್ತನೆ – ನಡುರಸ್ತೆಯಲ್ಲಿ ಮಹಿಳೆಗೆ ಹೆರಿಗೆ – ದಿಗ್ವಿಜಯ ನ್ಯೂಸ್​ ವರದಿಗೆ ಡಿಸಿ ಸ್ಪಂದನೆ 3. ಹೆರಿಗೆ ವೇಳೆ ಮೃತಪಟ್ಟಿದ್ದಾಳೆ ಅಂದ್ರು ಡಾಕ್ಟರ್ಸ್​ – ಅಂತ್ಯ ಸಂಸ್ಕಾರದ ವೇಳೆ ಕಣ್ಣು ಬಿಟ್ಲಂತೆ ಬಾಣಂತಿ – ಮನೆಗೆ ತರೋವಷ್ಟರಲ್ಲಿ ಮತ್ತೆ ಸಾವಿನ ದರ್ಶನ 4. ಕೊಪ್ಪಳ ಜಿಲ್ಲಾಪ್ರವಾಸದಲ್ಲಿ ಎಚ್​ಡಿಡಿ – ಗವಿಮಠಕ್ಕೆ ಮಾಜಿ ಪ್ರಧಾನಿ ಭೇಟಿ – ಇಳಿವಯಸ್ಸಿನಲ್ಲೂ ಕಿಂಡಿಯಲ್ಲೆ ತೆರಳಿ ದರ್ಶನ 5. ಯೂರ್ಟನ್​ ವೇಳೆ ಕಾರಿಗೆ ಲಾರಿ ಡಿಕ್ಕಿ – ಡಿಕ್ಕಿ ಹೊಡೆದ ಲಾರಿಗೆ ಟ್ರಕ್ ಡ್ಯಾಶ್ – ಸೌದಿ ಹೈವೇಯಲ್ಲಿ ಹಾರಿಬಲ್ ಆಕ್ಸಿಡೆಂಟ್
Breaking News :

ಅನ್ನಕೊಟ್ಟು ಸಾಕಿದ ಮಾಲೀಕನ ಪುತ್ರನಿಗೆ ಕಚ್ಚಿದ ಶ್ವಾನ

Thursday, 07.09.2017, 5:16 PM       No Comments

ಮೈಸೂರು: ಮನೆಯಲ್ಲಿ ಪ್ರತೀಯಿಂದ ಸಾಕಿದ್ದ ಶ್ವಾನವೇ ಮನೆಯ ಮಾಲೀಕನ ಪುತ್ರನ ಮೇಲೆ ಭೀಕರವಾಗಿ ದಾಳಿ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ದಟ್ಟಗಳ್ಳಿಯ ಯುನಿವರ್ಸಿಟಿ ಲೇಔಟ್‌ನಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಬಡಾವಣೆ ನಿವಾಸಿ ಅಜಯ್ ಅವರ ಪುತ್ರ ನಾಲ್ಕು ವರ್ಷದ ಅಮೋಘ ವರ್ಷ ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕ. ಬಾಲಕನ ತಲೆಗೆ ಗಂಭೀರವಾದ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Pls download Vijayavani Android App

ಅಜಯ್​ ಅವರು ತಮ್ಮ ಮನೆಯಲ್ಲಿ ರಾಟ್​ ವೀಲರ್​ ಜಾತಿಯ ನಾಯಿಯನ್ನು ಸಾಕಿದ್ದರು. ಬುಧವಾರ ಮಧ್ಯಾಹ್ನ ಅಮೋಷ ವರ್ಷ ಮನೆಯ ಮುಂದಿನ ಆವರಣದಲ್ಲಿ ನಾಯಿಯೊಂದಿಗೆ ಆಟವಾಡುತ್ತಿದ್ದ. ಈ ಸಂದರ್ಭದಲ್ಲಿ ನಾಯಿ ಮಗುವಿನ ತಲೆಯನ್ನು ಬಲವಾಗಿ ಕಚ್ಚಿದೆ. ಮಗುವಿನ ಕಿರುಚಾಟ ಕೇಳಿದ ನೆರೆಯ ನಿವಾಸಿಗಳು ಬಾಲಕನ ಪೋಷಕರಿಗೆ ವಿಷಯ ತಿಳಿಸಿ ಬಾಲಕನ ರಕ್ಷಣೆಗೆ ಮುಂದಾಗಿದ್ದಾರೆ.

ಆದರೆ ಮಗುವನ್ನು ನಾಯಿಯಿಂದ ಬಿಡಿಸಿಕೊಳ್ಳಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ದೊಣ್ಣೆಯಿಂದ ನಾಯಿಗೆ ಹೊಡೆದು ಮಗುವನ್ನು ಬಿಡಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top