Tuesday, 20th February 2018  

Vijayavani

ಸದನದಲ್ಲಿ ಶಾಸಕರಿಲ್ಲದೆ ಬಣಬಣ - ಇಂದಿನ ಕಲಾಪಕ್ಕೆ ಬರೀ 22 ಮಂದಿ ಹಾಜರ್​ - ಬಜೆಟ್​ ಅಧಿವೇಶನವೂ 3 ದಿನ ಮೊಟಕು.        ಒಬ್ಬರಿಗಿಂತ ಮತ್ತೊಬ್ಬ ಖತರ್ನಾಕ್​​ - ಎಂಎಲ್​ಎ ಪುತ್ರನ ಟೀಂನಲ್ಲಿ 8 ಮಂದಿ - ಇದು ನಲಪಾಡ್​​​​​ ಗ್ಯಾಂಗ್​ನ ಕಂಪ್ಲೀಟ್​ ಕಹಾನಿ.        ವಿದ್ವತ್​ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ - ಮೂಗಿನ ಮೂಳೆ‌ ಕಟ್​​​, ಮೂಖ ಊದಿಕೊಂಡಿದೆ - ಐಸಿಯುನಲ್ಲೇ ಚಿಕಿತ್ಸೆ ಅಂದ್ರು ಮಲ್ಯ ಆಸ್ಪತ್ರೆ ವೈದ್ಯರು.        ವಿದ್ವತ್​​​​​​​​​​ ಬಿಜೆಪಿ ಕಾರ್ಯಕರ್ತ ವಿಚಾರ - ವಿವಾದದ ಬಳಿಕ ತಪ್ಪು ಸರಿಪಡಿಸಿಕೊಂಡ ಬಿಜೆಪಿ - ಅವ್ರು ನಮ್ಮ ಕಾರ್ಯಕರ್ತನಲ್ಲ ಅಂತಾ ಅಮಿತ್ ಷಾ ಸ್ಪಷ್ಟನೆ.        ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ - ಚಲಿಸುತ್ತಿದ್ದ ಲಾರಿಯ ಟಯರ್ ಸ್ಫೋಟ - ಇಬ್ಬರ ದುರ್ಮರಣ, ಲಾರಿ ಚಾಲಕನ ಸ್ಥಿತಿ ಗಂಭೀರ.       
Breaking News

ಐಷಾರಾಮಿ ಕಾರಿಗೆ ಚಾ.ಬೆಟ್ಟದಲ್ಲಿ ಪೂಜೆ ಮಾಡಿಸಿದ ದರ್ಶನ್

Tuesday, 16.01.2018, 6:26 PM       No Comments

ಮೈಸೂರು: ಸುಮಾರು ಐದು ಕೋಟಿ ಬೆಲೆ ಬಾಳುವ ಐಷರಾಮಿ ಕಾರನ್ನು ಖರೀದಿಸಿರುವ ಛಾಲೆಂಜಿಂಗ್ ಸ್ಟಾರ್ ದರ್ಶನ್​ ಅವರು ಮಂಗಳವಾರ ಸ್ನೇಹಿತರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಐಷಾರಾಮಿ ಲ್ಯಾಂಬೊರ್ಗಿನಿ ಕಾರ್​ ಇದಾಗಿದ್ದು, ಬೆಟ್ಟಕ್ಕೆ ಆಗಮಿಸಿ ಅಧಿದೇವಿಯ ಆಶೀರ್ವಾದ ಪಡೆಯುವುದರೊಂದಿಗೆ ಹೊಸ ಕಾರ್​ಗೆ ಅರ್ಚಕರಿಂದ ಪೂಜೆ ಮಾಡಿಸಿದರು.

ಈ ವೇಳೆ ನೆಚ್ಚಿನ ನಟನನ್ನು ನೋಡಲು ಮತ್ತು ಅವರೊಂದಿಗೆ ಫೋಟೊ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗ್ಗಿಬಿದ್ದರು. ಅಭಿಮಾನಿಗಳ ಸಮೂಹದಿಂದ ಹೊರಬಂದ ಅವರು, ತಿ.ನರಸೀಪುರ ರಸ್ತೆಯಲ್ಲಿರುವ ತಮ್ಮ ಫಾರಂ ಹೌಸ್​ಗೆ ತೆರಳಿದರು.

ತೋಟದ ಮನೆಯಲ್ಲಿ ಹಸುಗಳಿಗೆ ಸಿಂಗಾರ ಮಾಡಿ ಕಿಚ್ಚು ಹಾಯಿಸಿ. ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ತಮ್ಮ ಸ್ನೇಹಿತರೊಂದಿಗೆ ವಿಜೃಂಭಣೆಯಿಂದ ಆಚರಿಸಿದರು.

Leave a Reply

Your email address will not be published. Required fields are marked *

Back To Top