Friday, 21st September 2018  

Vijayavani

ಸಿಎಂ ‘ದಂಗೆ’ ಹೇಳಿಕೆ ವಿರುದ್ಧ ಕೇಸರಿ ಗುಟುರು - ಡಿಜಿಪಿ ನೀಲಮಣಿ ರಾಜುಗೆ ಬಿಜೆಪಿ ದೂರು - ಸಂಜೆ 4.30ಕ್ಕೆ ಗವರ್ನರ್ ಭೇಟಿ​​​​        ರಾಜ್ಯಾದ್ಯಂತ ಭುಗಿಲೆದ್ದ ‘ದಂಗೆ’ ಉರಿ - ಕಲಬುರಗಿ, ಮಂಡ್ಯ, ಧಾರವಾಡ, ಕೊಡಗಿನಲ್ಲಿ ದಳ್ಳುರಿ        ಬ್ರದರ್ಸ್​​ ತಂಟೆಗೆ ಹೋಗ್ಬೇಡಿ, ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ - ಸಾಫ್ಟ್​ ಪಾಲಿಟಿಕ್ಸ್ ಬಗ್ಗೆ ಡಿಕೆಶಿಗೆ ಸಿದ್ದು ಕ್ಲಾಸ್        ಕರ್ನಾಟಕದಲ್ಲಿ ನಮಗೆ ಅಧಿಕಾರ ಬೇಕು - ಇಲ್ದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟ ಕಷ್ಟ - ಪರಿಸ್ಥಿತಿ ನಿಭಾಯಿಸಲು ಸಿದ್ದುಗೆ ಸೂಚನೆ        ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ - ಅಪಹರಿಸಿದ್ದ ಮೂವರು ಪೊಲೀಸರ ಹತ್ಯೆಗೈದ ಕಿರಾತಕರು        ಓಡಿಶಾದಲ್ಲಿ ಡೆಯ್ ಚಂಡಮಾರುತದ ಅಬ್ಬರ - ಕಾಲಾಪುರಕ್ಕೆ ನುಗ್ಗಿದ ಡ್ಯಾಮ್ ನೀರು ನುಗ್ಗಿ ಪ್ರವಾಹ - ಬಿರುಗಾಳಿಗೆ ಜನರು ಕಂಗಾಲ್       
Breaking News

ನಟ ಜೈಜಗದೀಶ್‌ ಕಾರು ಅಪಘಾತ, ತಲೆ, ಮುಖಕ್ಕೆ ತೀವ್ರ ಪೆಟ್ಟು

Friday, 17.08.2018, 7:37 PM       No Comments

ಹಾಸನ: ಚಿತ್ರನಟ ಜೈಜಗದೀಶ್​ ಅವರ ಕಾರು ಅಪಘಾತವಾಗಿದ್ದು, ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಸೋಮವಾರಪೇಟೆಯಿಂದ ಬೆಂಗಳೂರಿಗೆ ಹೊರಟಿದ್ದ ಅವರು, ತಾವೇ ಕಾರು ಓಡಿಸಿಕೊಂಡು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಜೈಜಗದೀಶ್ ಅವರ ತಲೆ ಮತ್ತು ಮುಖಕ್ಕೆ ತೀವ್ರ ಪೆಟ್ಟಾಗಿದೆ. ಅವರನ್ನು ನಗರದ ಜನಪ್ರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ನನಗೇನು ಆಗಿಲ್ಲ ಚೆನ್ನಾಗಿದ್ದೇನೆ. ಆಸ್ಪತ್ರೆಗೆ ಮಾಧ್ಯಮ ಮಿತ್ರರು ಬರಬೇಡಿ ಎಂದು ಮನವಿ ಮಾಡಿದ್ದು, ಆಸ್ಪತ್ರೆಗೆ ಮಾಧ್ಯಮದವರ ನಿರ್ಬಂಧ ಹೇರಲಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top