Tuesday, 20th February 2018  

Vijayavani

ಸದನದಲ್ಲಿ ಶಾಸಕರಿಲ್ಲದೆ ಬಣಬಣ - ಇಂದಿನ ಕಲಾಪಕ್ಕೆ ಬರೀ 22 ಮಂದಿ ಹಾಜರ್​ - ಬಜೆಟ್​ ಅಧಿವೇಶನವೂ 3 ದಿನ ಮೊಟಕು.        ಒಬ್ಬರಿಗಿಂತ ಮತ್ತೊಬ್ಬ ಖತರ್ನಾಕ್​​ - ಎಂಎಲ್​ಎ ಪುತ್ರನ ಟೀಂನಲ್ಲಿ 8 ಮಂದಿ - ಇದು ನಲಪಾಡ್​​​​​ ಗ್ಯಾಂಗ್​ನ ಕಂಪ್ಲೀಟ್​ ಕಹಾನಿ.        ವಿದ್ವತ್​ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ - ಮೂಗಿನ ಮೂಳೆ‌ ಕಟ್​​​, ಮೂಖ ಊದಿಕೊಂಡಿದೆ - ಐಸಿಯುನಲ್ಲೇ ಚಿಕಿತ್ಸೆ ಅಂದ್ರು ಮಲ್ಯ ಆಸ್ಪತ್ರೆ ವೈದ್ಯರು.        ವಿದ್ವತ್​​​​​​​​​​ ಬಿಜೆಪಿ ಕಾರ್ಯಕರ್ತ ವಿಚಾರ - ವಿವಾದದ ಬಳಿಕ ತಪ್ಪು ಸರಿಪಡಿಸಿಕೊಂಡ ಬಿಜೆಪಿ - ಅವ್ರು ನಮ್ಮ ಕಾರ್ಯಕರ್ತನಲ್ಲ ಅಂತಾ ಅಮಿತ್ ಷಾ ಸ್ಪಷ್ಟನೆ.        ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ - ಚಲಿಸುತ್ತಿದ್ದ ಲಾರಿಯ ಟಯರ್ ಸ್ಫೋಟ - ಇಬ್ಬರ ದುರ್ಮರಣ, ಲಾರಿ ಚಾಲಕನ ಸ್ಥಿತಿ ಗಂಭೀರ.       
Breaking News

ಚಂದನವನದ ಹಿರಿಯ ನಟ, ನಿರ್ದೇಶಕ ಕಾಶೀನಾಥ್​ ವಿಧಿವಶ

Thursday, 18.01.2018, 9:42 AM       No Comments

ಬೆಂಗಳೂರು: ಚಂದನವನದ ಹಿರಿಯ ನಟ ಹಾಗೂ ನಿರ್ದೇಶಕ ಕಾಶೀನಾಥ್​ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ವಿಧಿವಶರಾಗಿದ್ದಾರೆ.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಕಾಶಿನಾಥ್ ಅವರು ಎರಡು ದಿನಗಳ ಹಿಂದೆ ಶ್ರೀ ಶಂಕರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 7.45 ಗಂಟೆ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಡಾ.ಶೇಖರ್ ಪಾಟೀಲ್ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿತ್ತು.

ಕಾಶೀನಾಥ್ ಅವರು ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕ. ಇವರು ಕುಂದಾಪುರ ಸಮೀಪದ ಕೋಟೇಶ್ವರದ ಮಧ್ಯಮ ವರ್ಗದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ರಿಯಲ್ ಸ್ಟಾರ್ ಉಪೇಂದ್ರ, ಸಂಗೀತ ನಿರ್ದೇಶಕ ಮನೋಹರ್, ಚಿತ್ರ ನಿರ್ದೇಶಕ ಸುನೀಲ್‍ಕುಮಾರ್ ದೇಸಾಯಿ ಸೇರಿದಂತೆ ಹೆಸರಾಂತ ನಿರ್ದೇಶಕರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು.

ನಟನೆ, ನಿರ್ದೇಶನ, ಸಂಗೀತ ನಿರ್ದೇಶನ ಹಾಗೂ ಚಿತ್ರ ನಿರ್ಮಾಣ ಹೀಗೆ ವಿವಿಧ ವಿಭಾಗಗಳಲ್ಲಿ ತಮ್ಮ ನೈಪುಣ್ಯತೆ ತೋರಿಸಿದ್ದಾರೆ. ಅವರ ವಿಭಿನ್ನ ಶೈಲಿಯ ಚಿತ್ರಗಳು ಯಶಸ್ಸಿನ ಉತ್ತುಂಗಕ್ಕೇರಿ ಗಲ್ಲಾಪೆಟ್ಟಿಗೆಯನ್ನು ಸೂರೆ ಹೊಡೆದಿವೆ. ಅವರ ಗರಡಿಯಲ್ಲಿ ಪಳಗಿದ ಅನೇಕ ಯುವಕರು ಇಂದು ಚಿತ್ರರಂಗದಲ್ಲಿ ಬಹಳ ಯಶಸ್ವಿಯಾಗಿದ್ದಾರೆ.

ಕಾಶೀನಾಥ್​ ಚಿತ್ರಗಳು
ಅನಂತನ ಅವಾಂತರ, ಅನುಭವ, ಹೆಂಡತಿ ಎಂದರೆ ಹೇಗಿರಬೇಕು, ಅವಳೇ ನನ್ನ ಹೆಂಡತಿ, ಅವನೇ ನನ್ನ ಗಂಡ, ಮನ್ಮಥರಾಜ, ಚಪಲ ಚನ್ನಿಗರಾಯ, ಹಲೋ ಯಮ, ಅಜಗಜಾಂತರ ಅಪರಿಚಿತ, ಅನಾಮಿಕ, ಸಿಂಗಾರಿ ಬಂಗಾರಿ, ಕಲಿಯುಗದ ಕೃಷ್ಣ, ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಮಂಗಳೂರು ಮಂಜುನಾಥ್ ಸಂಭಾಷಣೆಯಿಂದ ಅವರು ಖ್ಯಾತಿ ಗಳಿಸಿದ್ದರು.

ಕನ್ನಡದಲ್ಲಿ 13, ಹಿಂದಿಯಲ್ಲಿ 2 ಹಾಗೂ ತೆಲುಗಿನಲ್ಲಿ 1 ಚಿತ್ರವನ್ನು ನಿರ್ದೇಶಿಸಿದ್ದರು. ಕನ್ನಡದ ಎರಡು ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಕಾಶಿನಾಥ್, ಮೂರು ಚಿತ್ರಗಳಿಗೆ ಚಿತ್ರಗೀತೆ ರಚಿಸಿದ್ದರು.

ಕನ್ನಡ, ತೆಲುಗಿನ ತಲಾ ಒಂದು ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡಿದ್ದರು. ಕನ್ನಡದಲ್ಲಿ 36, ತೆಲುಗಿನ ಒಂದು ಚಿತ್ರದಲ್ಲಿ ಅಭಿನಯಿಸಿದ್ದರು. 1991ರಲ್ಲಿ ಅವರು ನಿರ್ದೇಶಿಸಿದ್ದ ಅಜಗಜಾಂತರ ಚಿತ್ರ ಹಿಂದಿಯಲ್ಲಿ ‘ಜುದಾಯಿ’ ಎಂದು ರಿಮೇಕ್ ಆಗಿತ್ತು. ಅವರ ಕೊನೆಯ ಚಿತ್ರ ಚೌಕ ಕೂಡ ಯಶಸ್ವಿ ನೂರು ದಿನ ಪೂರೈಸಿತ್ತು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top