Thursday, 20th September 2018  

Vijayavani

ಸಿಎಂ ಕುಟುಂಬದ ವಿರುದ್ಧ ಬಿಜೆಪಿ ಭೂ ಅಸ್ತ್ರ - ಮೈಸೂರು, ರಾಮನಗರದಲ್ಲೂ ಭೂ ಅಕ್ರಮ - ಬಿಜೆಪಿ ನಾಯಕರಿಂದ ಭೂ ಚಕ್ರ        ಹಾಸನದಲ್ಲಿ ಗೌಡರ ಕುಟುಂಬದಿಂದ ಗೋಮಾಳ ಕಬಳಿಕೆ - ದೇಶಪಾಂಡೆಗೆ ದೂರು -ಎ.ಮಂಜುರಿಂದ ಕಂಪ್ಲೆಂಟ್​ ದಾಖಲು        ಬಿಜೆಪಿಯಿಂದ ಅಭಿವೃದ್ಧಿಗೆ ಸಹಕಾರ ಸಿಗುತ್ತಿಲ್ಲ - ದಂಗೆ ಏಳುವಂತೆ ಸಿಎಂ ಕರೆ - ಎಚ್ಡಿಕೆ ಮಾತಿನ ಬೆನ್ನಲ್ಲೇ ದಾಂಧಲೆ ಶುರು        ಎಚ್​ಡಿಕೆ-ಬಿಎಸ್​ವೈ ವಾಗ್ದಾಳಿ ಬೆನ್ನಲ್ಲೇ ಹೈಡ್ರಾಮಾ -ಯಡಿಯೂರಪ್ಪ ನಿವಾಸದೆದುರು ಕೈ ಕಾರ್ಯಕರ್ತರ ಹಂಗಾಮಾ        ಡಾಲರ್ಸ್ ಕಾಲನಿ ನಿವಾಸದಲ್ಲಿ ಗಲಾಟೆ - ರೇಣುಕಾಚಾರ್ಯ ಮೇಲೆ ಹಲ್ಲೆಗೆ ಯತ್ನ - ಬಿಎಸ್​ವೈ ಭಾವಚಿತ್ರ ಹರಿದು ಹಾಕಿ ಆಕ್ರೋಶ        ಇಲ್ಲಿ ನಿಮ್ಮ ಸರ್ಕಾರ, ಅಲ್ಲಿ ನಮ್ಮ ಸರ್ಕಾರ - ನಿಮ್ಮ ಯಾವುದೇ ಧಮ್ಕಿಗೂ ಹೆದರಲ್ಲ -  ಅಟ್ಯಾಕ್​ಗೆ ಬಿಎಸ್​ವೈ ಕೌಂಟರ್​ ಅಟ್ಯಾಕ್       
Breaking News

ಸರದಿಗಾಗಿ ಕಾದು ಸುಸ್ತಾದ ರೈತರು

Saturday, 13.01.2018, 3:00 AM       No Comments

ಹುಬ್ಬಳ್ಳಿ: ಬೆಂಬಲ ಬೆಲೆಯಡಿ ಶೇಂಗಾ ಖರೀದಿ ಪ್ರಕ್ರಿಯೆ ಆರಂಭವಾಗಿದ್ದು, ರೈತರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸಾಮಾನ್ಯ ಮಾರುಕಟ್ಟೆಯಲ್ಲಿ ಶೇಂಗಾ ಬೆಲೆ ಕಡಿಮೆ ಇರುವುದರಿಂದ ರೈತರು ಬಹುತೇಕ ಬೆಂಬಲ ಬೆಲೆಯಡಿ ಮಾರಾಟಕ್ಕೆ ಮುಂದಾಗಿದ್ದಾರೆ. ಶೇಂಗಾಕ್ಕೆ ಸರ್ಕಾರ ಪ್ರತಿ ಕ್ವಿಂಟಾಲ್​ಗೆ 4450 ರೂ. ಬೆಂಬಲ ಬೆಲೆ ಘೋಷಣೆ ಮಾಡಿದೆ.

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಹಾಗೂ ಕುಂದಗೋಳದಲ್ಲಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಈ ಕೇಂದ್ರಗಳಲ್ಲಿ ಕೆಓಎಫ್​ನವರು ಶೇಂಗಾ ಖರೀದಿ ಮಾಡುತ್ತಿದ್ದಾರೆ.

ಹುಬ್ಬಳ್ಳಿಯಲ್ಲಿ ಖರೀದಿ ಕೇಂದ್ರ ಇಲ್ಲ. ಆದರೆ, ತಾಲೂಕಿನ ಶಿರಗುಪ್ಪಿ ಹಾಗೂ ಕುಂದಗೋಳದಲ್ಲಿ ಇರುವ ಕೇಂದ್ರದಲ್ಲಿ ನೋಂದಣಿ ಮಾಡಿಕೊಂಡ ರೈತರು ಶೇಂಗಾವನ್ನು ಹುಬ್ಬಳ್ಳಿಗೆ ತರುವಂತಾಗಿದೆ.

ಬೆಂಬಲ ಬೆಲೆಯಡಿ ಖರೀದಿ ಮಾಡಿದ ಶೇಂಗಾವನ್ನು ಅಲ್ಲಿ ಸಂಗ್ರಹಿಸಲು ವ್ಯವಸ್ಥೆ ಇಲ್ಲದ ಕಾರಣ ಹುಬ್ಬಳ್ಳಿಯ ಅಮರಗೋಳ ಎಪಿಎಂಸಿ ಬಳಿಯ ಗೋದಾಮಿನಲ್ಲಿ ಸಂಗ್ರಹಿಸಲಾಗುತ್ತಿದೆ. ಹಾಗಾಗಿ ಶುಕ್ರವಾರ ಶೇಂಗಾ ತುಂಬಿದ ನೂರಾರು ವಾಹನಗಳು ಅನ್​ಲೋಡಿಗಾಗಿ ಗೋದಾಮಿಗೆ ಬಂದಿದ್ದರಿಂದ ದಟ್ಟಣೆ ಉಂಟಾಗಿತ್ತು. ರೈತರು ಗೋದಾಮಿನ ಎದುರು ಸರದಿಗಾಗಿ ಕಾಯುವಂತಾಯಿತು.

ಇನ್ನೂರಕ್ಕೂ ಹೆಚ್ಚು ವಾಹನಗಳು ಬಂದಿದ್ದರಿಂದ ಎಲ್ಲ ವಾಹನಗಳ ಅನ್​ಲೋಡ್ ಆಗುತ್ತದೆಯೋ ಇಲ್ಲವೋ ಎಂಬ ಆತಂಕವೂ ರೈತರಿಗೆ ಎದುರಾಗಿತ್ತು. ಇನ್ನೂ ಕೆಲ ರೈತರು ನೇರವಾಗಿ ಇಲ್ಲಿಯೇ ಮಾರಾಟ ಮಾಡುವ ಉದ್ದೇಶದಿಂದ ಬಂದಿದ್ದರು. ಅಂತಹ ರೈತರಿಗೆ ಸೂಕ್ತ ದಾಖಲಾತಿಗಳನ್ನು ತರಲು ಹೇಳಿದ ಕೆಓಎಫ್ ಅಧಿಕಾರಿಗಳು, ತಂದ ನಂತರ ಖರೀದಿ ಪ್ರಕ್ರಿಯೆ ನಡೆಸಿದರು

ಶೇಂಗಾ ತಂದ ಎಲ್ಲ ರೈತರಿಗೂ ಚೀಟಿ ನೀಡಲಾಗಿದೆ. ಹಮಾಲಿ ಕಾರ್ವಿುಕರ ಕೊರತೆ ಹಾಗೂ ಇತರೆ ಸಮಸ್ಯೆ ಹಿನ್ನೆಲೆಯಲ್ಲಿ ಶುಕ್ರವಾರ ಸಂಪೂರ್ಣ ಶೇಂಗಾ ಅನ್​ಲೋಡಿಂಗ್ ಆಗದಿದ್ದರೆ, ರಜೆ ಇದ್ದರೂ ಶನಿವಾರವೂ ಪ್ರಕ್ರಿಯೆ ಮುಂದುವರಿಸಿ ಅನ್​ಲೋಡ್ ಮಾಡಲಾಗುವುದು ಎಂದು ಕೆಎಓಎಫ್ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top