Saturday, 22nd September 2018  

Vijayavani

ಸಂಕಷ್ಟ ತಂದ ದಂಗೆ ಹೇಳಿಕೆ - ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು - ರಾಷ್ಟ್ರಪತಿಗಳಿಗೆ ಮಾಹಿತಿ ರವಾನೆ ಸಾಧ್ಯತೆ        ಸಿಎಂ ಬೇಜವಾಬ್ಧಾರಿ ಹೇಳಿಕೆಗೆ ರಾಜ್ಯಾದ್ಯಂತ ಖಂಡನೆ - ಬಿಜೆಪಿ ಕಾರ್ಯಕರ್ತರ ಪ್ರೊಟೆಸ್ಟ್​ - ಬಾಗಲಕೋಟೆಯಲ್ಲಿ ಬ್ಯಾನರ್​ ದಹನ        ಮಲೆನಾಡಲ್ಲಿ ಪ್ರವಾಹದ ಬೆನ್ನಲ್ಲೇ ಮತ್ತೊಂದು ಬರೆ - ನೆರೆ ಬಳಿಕ ಬತ್ತುತ್ತಿವೆ ನದಿಗಳು - ಆತಂಕದಲ್ಲಿ ಚಿಕ್ಕಮಗಳೂರು ಜನತೆ        ಶತಮಾನದ ಆಸ್ಪತ್ರೆಗೆ ಸರ್ಕಾರದ ಬೀಗ - ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಜಾಗ - ಉಡುಪಿಯಲ್ಲಿ ಉಚಿತ ಚಿಕಿತ್ಸೆ ಇನ್ನು ಮರೀಚಿಕೆ..?        ಮೈಸೂರಲ್ಲಿ ನಾಡಹಬ್ಬಕ್ಕೆ ತಯಾರಿ - ಮಾವುತರಿಗೆ ಜಿಲ್ಲಾಡಳಿತದ ಭೂರಿ ಭೋಜನ - ಕೇರಂ ಆಡಿ ಸಂತಸಪಟ್ಟ ಕಾವಾಡಿಗರು        ಹುಬ್ಬಳ್ಳಿಯಲ್ಲಿ ಅಷ್ಟವಿನಾಯಕ ಸ್ಪರ್ಧೆ - ಅಲಂಕಾರದಲ್ಲಿ ಹಿರೇಪೇಟೆಯ ವಿನಾಯಕ ಪ್ರಥಮ- ಗಾಂಧಿ ಚೌಕ್ ಗಣಪ ಉತ್ತಮ ವಿಗ್ರಹ       
Breaking News

ಎಐಎಡಿಎಂಕೆ ಪಕ್ಷದ ನಾಯಕಿ ಶಶಿಕಲಾ ಪತಿ ನಟರಾಜನ್ ನಿಧನ

Tuesday, 20.03.2018, 5:59 AM       No Comments

ಚೆನ್ನೈ: ‌ಎಐಎಡಿಎಂಕೆ ಪಕ್ಷದ ನಾಯಕಿ ವಿ.ಕೆ.ಶಶಿಕಲಾ ಪತಿ ನಟರಾಜನ್ ಮಾರುಥಪ್ಪ(74) ಸೋಮವಾರ ತಡರಾತ್ರಿ 1.35ರ ಸುಮಾರಿಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ನಟರಾಜನ್ ಅವರು ಚೆನ್ನೈನ ಗ್ಲೋಬಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.

ನಟರಾಜನ್ ನಿಧನ ಕುರಿತು ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಹೊರಬಂದಿದೆ. ಮಾ.16ರಂದು ನಟರಾಜನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

ಸದ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮೃತ ನಟರಾಜನ್ ಪತ್ನಿ ಶಶಿಕಲಾ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಪತಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್​ ಪಡೆಯುವ ಸಾಧ್ಯತೆ ಇದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top