Sunday, 23rd July 2017  

Vijayavani

1. ಕೊಪ್ಪಳದ ಖೋಟಾನೋಟು ಪ್ರಕರಣಕ್ಕೆ ಹೊಸ ಟ್ವಿಸ್ಟ್​- ಐವರಲ್ಲಿ ಮೂವರು ಆರೋಪಿಗಳು ಅರೆಸ್ಟ್- ವೈಯಕ್ತಿಕ ದ್ವೇಷಕ್ಕೆ ಬಲಿಯಾಗಿದ್ದ ಉಪನ್ಯಾಸಕ 2. ಮಳೆಗೆ ಹಾರಂಗಿ ಜಲಾಶಯ ಬಹುತೇಕ ಭರ್ತಿ- ಡ್ಯಾಂನಿಂದ 1,200 ಕ್ಯೂಸೆಕ್ ನೀರು ಬಿಡುಗಡೆ- ನದಿಪಾತ್ರದ ಜನರಿಗೆ ಎಚ್ಚರದಿಂದಿರಲು ಸೂಚನೆ 3. ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವಕರ್ಮ ಸಮಾವೇಶ- ಸಮುದಾಯದಿಂದ ಬಿಎಸ್​ವೈಗೆ ಸನ್ಮಾನ- ಬಿಜೆಪಿ ಹಲವು ಮುಖಂಡರು ಹಾಜರ್‌ 4. ಕಾಂಗ್ರೆಸ್​ ಕದ ತಟ್ಟಿದ ಜೆಡಿಎಸ್​ ರೆಬೆಲ್ಸ್​- ಇನ್ನೆರಡು ತಿಂಗಳಲ್ಲಿ ಸೇರ್ಪಡೆ ಖಚಿತ- ಇನ್ನೂ ಏಳು ಜನ ಬರ್ತಾರೆಂದು ಜಮೀರ್​ ಬಾಂಬ್​ 5. ವನಿತೆಯರ ವಿಶ್ವಕಪ್‌ನಲ್ಲಿ ಇಂಡೋ- ಇಂಗ್ಲೆಂಡ್‌ ಫೈಟ್- ಟಾಸ್‌ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ- ಟೀಂ ಇಂಡಿಯಾಗೆ ದೇಶ ಜನರಿಂದ ಆಲ್​ ದ ಬೆಸ್ಟ್​
Breaking News :

ಕನ್ನಡಿಗರ ಕ್ಷಮೆ ಕೇಳಿದ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್

Friday, 21.04.2017, 12:48 PM       No Comments

ಬೆಂಗಳೂರು: ತಮಿಳು ನಟ ಸತ್ಯರಾಜ್ ಕ್ಷಮೆ ಯಾಚಿಸುವವರೆಗೆ ಬಾಹುಬಲಿ2 ಚಿತ್ರ ಬಿಡಗಡೆಗೆ ಅವಕಾಶ ನೀಡುವುದಿಲ್ಲ ಎಂದು ಕನ್ನಡ ಪರ ಸಂಘಟನೆಗಳ ಒತ್ತಾಯಕ್ಕೆ ಮಣಿದಿರುವ ಸತ್ಯರಾಜ್ ಶುಕ್ರವಾರ ಕನ್ನಡಿಗರ ಕ್ಷಮೆ ಯಾಚಿಸಿದ್ದಾರೆ. ವೀಕ್ಷಿಸಿ ದಿಗ್ವಿಜಯ ನ್ಯೂಸ್ LIVE

ನಾನು ಕನ್ನಡಿಗರು ಮತ್ತು ಕರ್ನಾಟಕದ ವಿರೋಧಿಯಲ್ಲ. 9 ವರ್ಷಗಳ ಹಿಂದೆ ನಾನು ಆ ಹೇಳಿಕೆ ನೀಡಿದ್ದೆ. ನನ್ನ ಮಾತುಗಳಿಂದ ಕನ್ನಡಿಗರಿಗೆ ನೋವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಬಾಹುಬಲಿ ಚಿತ್ರದಲ್ಲಿ ನಾನೊಬ್ಬ ಸಣ್ಣ ಪಾತ್ರಧಾರಿ ಮಾತ್ರ, ನನ್ನ ಹೇಳಿಕೆಯಿಂದ ಚಿತ್ರಕ್ಕೆ ತೊಂದರೆಯಾಗಬಾರದು ಎಂದು ಸತ್ಯರಾಜ್ ತಮ್ಮ ಕ್ಷಮಾಪಣಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ಸತ್ಯರಾಜ್ ಕನ್ನಡಿಗರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಬಹುಬಲಿ-2 ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದವು. ಜತೆಗೆ ಚಿತ್ರ ಬಿಡುಗಡೆ ದಿನ ರಾಜ್ಯ ಬಂದ್ ಆಚರಿಸುವುದಾಗಿ ತಿಳಿಸಿದ್ದವು.

ಕಟ್ಟಪ್ಪ ಕ್ಷಮೆಗೆ ಪಟ್ಟು

ಕಡೆಗೂ ಮೌನ ಮುರಿದ ರಾಜಮೌಳಿ

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

thirteen − 12 =

Back To Top