Wednesday, 17th October 2018  

Vijayavani

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ -  ಸಂಜೆ 6.15ರಿಂದ 6.45ರೊಳಗೆ ಉಕ್ಕಿಹರಿಯಲಿದೆ ಜೀವನದಿ ಕಾವೇರಿ        ಪವಿತ್ರ ತೀರ್ಥಕ್ಕಾಗಿ ಹರಿದು ಬಂದಿದೆ ಭಕ್ತರ ದಂಡು - ತಲಕಾವೇರಿಯಲ್ಲಿ ಬಿಗಿ ಬಂದೋಬಸ್ತ್​ - ಸಿಎಂ ಕುಮಾರಸ್ವಾಮಿ ಉಪಸ್ಥಿತಿ        ನಿಗದಿಯಂತೆ ಬಾಗಿಲು ತೆರೆದ ಅಯ್ಯಪ್ಪ ದೇಗುಲ - ಮಹಿಳಾ ಭಕ್ತರಿಗೆ ಸಿಗಲೇ ಇಲ್ಲ ಮಣಿಕಂಠನ ದರ್ಶನ        ಶಬರಿಮಲೆಯಲ್ಲಿ ಭಾರೀ ಹಿಂಸಾಚಾರ ಹಿನ್ನೆಲೆ - ಪಂಪಾ, ನೀಲಕ್ಕಲ್ ಸೇರಿ 4 ಕಡೆ ನಿಷೇಧಾಜ್ಞೆ ಜಾರಿ - 144 ಸೆಕ್ಷನ್ ಆದೇಶ        ಮೀಟೂ ಅಭಿಯಾನಕ್ಕೆ ಮೊದಲ ವಿಕೆಟ್‌ ಪತನ - ಕೇಂದ್ರ ಸಚಿವ ಸ್ಥಾನಕ್ಕೆ ಅಕ್ಬರ್‌ ರಾಜೀನಾಮೆ       
Breaking News

ನಿರ್ಮಾಣ ಹಂತದ ಕಟ್ಟಡಕ್ಕೆ ಬೆಂಕಿ: ಸೌದಿಯಲ್ಲಿ 10 ಭಾರತೀಯರ ಸಾವು

Thursday, 13.07.2017, 7:43 AM       No Comments

ಸೌದಿ ಅರೇಬಿಯಾ: ಕಟ್ಟಡವೊಂದಕ್ಕೆ ಬೆಂಕಿ ಬಿದ್ದ ಪರಿಣಾಮ ಉಸಿರುಗಟ್ಟಿ ಭಾರತೀಯ ಮೂಲದ 10 ಮಂದಿ ಮೃತಟಪಟ್ಟಿರುವ ಘಟನೆ ಸೌದಿ ಅರೇಬಿಯಾದ ನಜ್ರಾನ ಬಳಿ ನಿನ್ನೆ ಬುಧವಾರ ನಡೆದಿದೆ.

ಕಟ್ಟಡ ನಿರ್ಮಾಣ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 10 ಮಂದಿ ಭಾರತೀಯರು ಸೇರಿ ಒಬ್ಬ ಬಾಂಗ್ಲಾ ಪ್ರಜೆ ಮೃತಟಪಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹವಾನಿಯಂತ್ರಿತ ಘಟಕದಲ್ಲಿನ ಶಾರ್ಟ್​ ಸರ್ಕೂಟ್​ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಹೊರ ಬರಲಾರದೆ ಆಮ್ಲಜನಕ ದೊರೆಯದೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್​​ ಟ್ವೀಟ್​​ ಮಾಡಿ ಸಂತಾಪ ಸೂಚಿಸಿದ್ದಾರೆ. ಅಲ್ಲಿನ ಕಾನ್ಸಲ್ ಜನರಲ್ ಜೆಡ್ಡಾ ಜತೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ಭಾರತೀಯರ ನೆರವಿಗೆ ಬರಲಿದ್ದಾರೆ ಅಂತ ಟ್ವೀಟ್​​ ಮಾಡಿದ್ದಾರೆ.(ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top