Saturday, 29th April 2017  

Vijayavani

ವಿಷ್ಣು ಅವತಾರ ವಿವಾದ, ಧೋನಿ ವಿರುದ್ಧದ ಕ್ರಿಮಿನಲ್ ಕೇಸ್ ರದ್ದು

Thursday, 20.04.2017, 4:55 PM       No Comments

ನವದೆಹಲಿ: ಪತ್ರಿಕೆಯೊಂದರ ಮುಖಪುಟದಲ್ಲಿ ವಿಷ್ಣು ವೇಷದಲ್ಲಿ ಕಾಣಿಸಿಕೊಂಡ ಆರೋಪದ ಮೇಲೆ ಖ್ಯಾತ ಕ್ರಿಕೆಟರ್ ಮಹೇಂದ್ರ ಸಿಂಗ್ ಧೋನಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ವೀಕ್ಷಿಸಿ ದಿಗ್ವಿಜಯ ನ್ಯೂಸ್ LIVE

ಮ್ಯಾಗಜೀನ್​ನ ಮುಖಪುಟದಲ್ಲಿ ಪ್ರಕಟವಾಗಿದ್ದ ವಿಷ್ಣು ವೇಷಧಾರಿ ಧೋನಿ ಚಿತ್ರದಿಂದ ಜನರ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಆಂಧ್ರ ಪ್ರದೇಶದ ಕೋರ್ಟ್​ನಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ನ ತ್ರಿಸದಸ್ಯ ಪೀಠ ಗುರುವಾರ ಧೋನಿ ಮತ್ತು ಮ್ಯಾಗಜೀನ್​ನ ಎಡಿಟರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿ ಆದೇಶಿಸಿದೆ.

ಧೋನಿ ಮತ್ತು ಮ್ಯಾಗಜೀನ್​ನ ಎಡಿಟರ್ ಯಾವುದೇ ದುರುದ್ದೇಶಪೂರಿತವಾಗಿ ಈ ಕೃತ್ಯ ಎಸಗಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಿಪಡಿಸಿದೆ.

ಆಂಧ್ರ ಪ್ರದೇಶದ ಅನಂತಪುರದ ಕೋರ್ಟ್​ನಲ್ಲಿ ಧೋನಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೇ ಚಿತ್ರವನ್ನು ಆಧಾರವಾಗಿಟ್ಟುಕೊಂಡು ಕರ್ನಾಟದಲ್ಲೂ ಸಹ ಧೋನಿ ಮತ್ತು ಇತರರ ವಿರುದ್ಧ ದೂರು ದಾಖಲಾಗಿತ್ತು.

– ಪಿಟಿಐ

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top