Friday, 18th August 2017  

Vijayavani

1. ಕಾಂಗ್ರೆಸ್‌ನಲ್ಲಿ ಎಡಪಂಥಿಯರಿಗೆ ಮಾತ್ರ ಮಣೆ- ಚುನಾವಣಾ ತಂತ್ರಗಾರ ಕೈ ಗುಡ್‌ಬೈ- ಅಲ್ಪ ಸಂಖ್ಯಾತರರನ್ನ ಅತಿಯಾಗಿ ಓಲೈಸ್ತಿದ್ಯಾ ಕಾಂಗ್ರೆಸ್‌.? 2. ಜೆಡಿಎಸ್​ ಭಿನ್ನರಿಗೆಲ್ಲಾ ಇಲ್ಲಾ ಟಿಕೆಟ್​ – 3 ಕ್ಷೇತ್ರಗಳ ಟಿಕೆಟ್​​​​​​​​ಗೆ ಖಾತ್ರಿ ನೀಡದ ಖರ್ಗೆ- ತ್ರಿಶಂಕು ಸ್ಥಿತಿಯಲ್ಲಿ ಜೆಡಿಎಸ್​​​​​​ ಭಿನ್ನರ ಸ್ಥಿತಿ 3. ಸಿಲಿಕಾನ್ ಸಿಟಿಗೆ ಖತರ್ನಾಕ್​ ಗ್ಯಾಂಗ್​ ಎಂಟ್ರಿ- ಸೆಕ್ಯೂರಿಟಿ ಡ್ರೆಸ್​​​ನಲ್ಲಿ ಮಾಡ್ತಿದ್ದಾರೆ ಕಳ್ಳತನ- ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಕೃತ್ಯ 4. ರಾಜೀನಾಮೆ ಬಳಿಕ ವಿಶಾಲ್‌ ಸಿಕ್ಕಾ ಮೊದಲ ಮಾತು- ನನ್ನ ಜೀವನದ ದುಃಖದ ವಿಚಾರ ಅಂತಾ ಬೇಸರ- ಅತ್ತ ನಾನು ಕಾರಣನಲ್ಲ ಎಂದ ನಾರಾಯಣ ಮೂರ್ತಿ 5. ಯುಪಿ ಆಸ್ಪತ್ರೆಯಲ್ಲಿ ಮಕ್ಕಳ ಸಾವು ಪ್ರಕರಣ- ಹೈಕೋರ್ಟ್‌ನಿಂದ ಯೋಗಿ ಸರ್ಕಾರಕ್ಕೆ ತರಾಟೆಗೆ- ಕೂಡಲೇ ವರದಿ ನೀಡಲು ಸೂಚನೆ
Breaking News :

ಸ್ಕೂಬಾ ಡೈವಿಂಗ್: ಕೊನೆಗೂ ಬದುಕಿ ಬರಲಿಲ್ಲ ಶಿವಮೊಗ್ಗದ ಶೃತಿ

Monday, 10.07.2017, 3:15 PM       No Comments

ಶಿವಮೊಗ್ಗ: ಖಂಡಾಂತರದ ಹವಾಯಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್​ ಮಾಡುವ ವೇಳೆ ನೀರಲ್ಲಿ ಮುಳಗಿ ಕೋಮಾ ಸ್ಥಿತಿಗೆ ಜಾರಿದ್ದ ಶಿವಮೊಗ್ಗ ಮೂಲದ ಮಹಿಳೆ ಕೊನೆಗೂ ಚೇತರಿಸಿಕೊಳ್ಳದೆ ಸಾವನ್ನಪ್ಪಿದ್ದಾರೆ.

ಎಂಟು ತಿಂಗಳ ಹಿಂದೆ ತರೀಕೆರೆ ತಾಲೂಕು ಲಕ್ಕವಳ್ಳಿಯ ಶ್ರುತಿ (21) ವಿಜಯವಾಡದ ಸೀತಾ ರಾಮಕೃಷ್ಣ ಎಂಬುವರೊಂದಿಗೆ ಮದುವೆಯಾಗಿದ್ದರು. ಕ್ಯಾಲಿಫೋರ್ನಿಯಾದ ಸ್ಯಾನ್ ಜೋಸ್​ನ ಯಾಹೂ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸೀತಾ ರಾಮಕೃಷ್ಣ ವಿವಾಹದ ಬಳಿಕ ಪತ್ನಿಯನ್ನೂ ತನ್ನೊಂದಿಗೆ ಕರೆದೊಯ್ದಿದ್ದರು.

ಎಂದಿನಂತೆ ಪತಿ- ಪತ್ನಿ ಇಬ್ಬರೂ ಕಳೆದ ವಾರ ರಜೆ ಹಿನ್ನೆಲೆಯಲ್ಲಿ ಹವಾಯ್​ಗೆ ಪ್ರವಾಸ ಹೋಗಿದ್ದರು. ಈ ವೇಳೆ ಸ್ಕೂಬಾ ಡೈವಿಂಗ್​ ಮಾಡುವಾಗ ಶ್ರುತಿ (21) ಅವರ ಆಕ್ಸಿಜನ್​ ಪೈಪ್ ಕಿತ್ತು ಹೋಗಿ ನೀರಲ್ಲಿ ಮುಳುಗಿ ಕೋಮಾ ಸ್ಥಿತಿಗೆ ತಲುಪಿದ್ದರು. ಕೂಡಲೇ ಶ್ರುತಿಯನ್ನು ಹವಾಯ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಬಳಿಕ ಶ್ರುತಿ ಪಾಲಕರನ್ನು ಹವಾಯ್​ಗೆ ಕರೆಯಿಸಿಕೊಂಡು ಪಾಲಕರ ಧ್ವನಿಯನ್ನಾದರೂ ಕೇಳಿ ಚೇತರಿಸಿಕೊಳ್ಳುತ್ತಾಳೆಯೇ ಎಂಬ ನಿಟ್ಟಿನಲ್ಲಿಯೂ ಪ್ರಯತ್ನ ನಡೆಸಲಾಗಿತ್ತು. ಆದರೆ ಯಾವುದೇ ಪ್ರಯತ್ನಗಳು ಫಲಕಾರಿಯಾಗದೆ ಶ್ರುತಿ (21) ಭಾನುವಾರ ಮಧ್ಯರಾತ್ರಿ ಮೃತಪಟ್ಟಿದ್ದಾಳೆ.(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top