Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ಆಸ್ಟ್ರೇಲಿಯಾದ ಪ್ರಭಾವಿ ಬೌಲಿಂಗ್​: ಅಲ್ಪ ಮೊತ್ತಕ್ಕೆ ಕುಸಿದ ಭಾರತ

Tuesday, 10.10.2017, 8:50 PM       No Comments

ಗುವಾಹಟಿ: ಆಸ್ಟ್ರೇಲಿಯಾ ಬೌಲರ್​ಗಳ ಪ್ರಭಾವಿ ಬೌಲಿಂಗ್​ ದಾಳಿಗೆ ಸಿಲುಕಿದ ಭಾರತದ ತಂಡ 2ನೇ ಟಿ20 ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿದಿದ್ದು, ಪ್ರವಾಸಿ ತಂಡಕ್ಕೆ ಗೆಲ್ಲಲು 119 ರನ್​ ಗುರಿ ನೀಡಿದೆ.

ಟಾಸ್​ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್​ ಆಯ್ದುಕೊಂಡಿತು. ಆಸ್ಟ್ರೇಲಿಯಾದ ಬೌಲಿಂಗ್​ ದಾಳಿಗೆ ಸಿಲುಕಿದ ಭಾರತ 20 ಓವರ್​ಗಳಲ್ಲಿ 118 ರನ್​ ಗಳಿಸಿ ಆಲೌಟಾಯಿತು. ಭಾರತದ ಪರ ಕೇದಾರ್​ ಜಾಧವ್​ (27), ಹಾರ್ದಿಕ್​ ಪಾಂಡ್ಯ (25), ಕುಲದೀಪ್​ ಯಾದವ್​ (16) ಮತ್ತು ಎಂ.ಎಸ್​. ಧೋನಿ (13) ಮಾತ್ರ ಎರಡಂಕಿ ಮೊತ್ತ ಗಳಿಸಿದರು. ಉಳಿದ ಎಲ್ಲಾ ಬ್ಯಾಟ್ಸ್​ಮನ್​ಗಳು ವಿಫಲರಾದ ಕಾರಣ ಭಾರತ ಅಲ್ಪ ಮೊತ್ತಕ್ಕೆ ಕುಸಿಯಿತು.

ಆಸ್ಟ್ರೇಲಿಯಾ ಪರ ಪ್ರಭಾವಿ ಬೌಲಿಂಗ್​ ದಾಳಿ ನಡೆಸಿದ ಜೇಸನ್​ ಬೆಹೆರೆನ್ಡಾಫ್​ (21 ಕ್ಕೆ 4) ಮತ್ತು ಆ್ಯಡಮ್​ ಜಂಪಾ (19 ಕ್ಕೆ 2) ವಿಕೆಟ್​ ಪಡೆದು ಮಿಂಚಿದರು. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top