Friday, 21st September 2018  

Vijayavani

ಸಿಎಂ ‘ದಂಗೆ’ ಹೇಳಿಕೆ ವಿರುದ್ಧ ಕೇಸರಿ ಗುಟುರು - ಡಿಜಿಪಿ ನೀಲಮಣಿ ರಾಜುಗೆ ಬಿಜೆಪಿ ದೂರು - ಸಂಜೆ 4.30ಕ್ಕೆ ಗವರ್ನರ್ ಭೇಟಿ​​​​        ರಾಜ್ಯಾದ್ಯಂತ ಭುಗಿಲೆದ್ದ ‘ದಂಗೆ’ ಉರಿ - ಕಲಬುರಗಿ, ಮಂಡ್ಯ, ಧಾರವಾಡ, ಕೊಡಗಿನಲ್ಲಿ ದಳ್ಳುರಿ        ಬ್ರದರ್ಸ್​​ ತಂಟೆಗೆ ಹೋಗ್ಬೇಡಿ, ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ - ಸಾಫ್ಟ್​ ಪಾಲಿಟಿಕ್ಸ್ ಬಗ್ಗೆ ಡಿಕೆಶಿಗೆ ಸಿದ್ದು ಕ್ಲಾಸ್        ಕರ್ನಾಟಕದಲ್ಲಿ ನಮಗೆ ಅಧಿಕಾರ ಬೇಕು - ಇಲ್ದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟ ಕಷ್ಟ - ಪರಿಸ್ಥಿತಿ ನಿಭಾಯಿಸಲು ಸಿದ್ದುಗೆ ಸೂಚನೆ        ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ - ಅಪಹರಿಸಿದ್ದ ಮೂವರು ಪೊಲೀಸರ ಹತ್ಯೆಗೈದ ಕಿರಾತಕರು        ಓಡಿಶಾದಲ್ಲಿ ಡೆಯ್ ಚಂಡಮಾರುತದ ಅಬ್ಬರ - ಕಾಲಾಪುರಕ್ಕೆ ನುಗ್ಗಿದ ಡ್ಯಾಮ್ ನೀರು ನುಗ್ಗಿ ಪ್ರವಾಹ - ಬಿರುಗಾಳಿಗೆ ಜನರು ಕಂಗಾಲ್       
Breaking News

ಮದ್ವೆಯಾದ ಮೂರು ವರ್ಷದ ನಂತ್ರ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

Sunday, 30.07.2017, 10:28 AM       No Comments

ಶಿವಮೊಗ್ಗ: ಮಕ್ಕಳಿಲ್ಲ ಅಂತಾ ಕೆಲವರು ಕಂಡ ಕಂಡ ದೇವರುಗಳತ್ರ ಹರಕೆ ಹೊತ್ತುಕೊಳ್ತಾರೆ. ಕನಿಷ್ಠ ಒಂದು ಮಗುವಾದರು ಜನಿಸಲಿ ಅಂತಾ ಹಲವು ವೈದ್ಯರ ಬಳಿ ಸುತ್ತಾಡಿ ಸಲಹೆಗಳನ್ನು ಪಡೆದುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ ವಿಸ್ಮಯ ಎಂಬಂತೆ ಘಟನೆಗಳು ನಡೆಯುತ್ತವೆ.

ಹೌದು, ನಿನ್ನೆ ಶನಿವಾರಷ್ಟೇ ಬಳ್ಳಾರಿಯಲ್ಲಿ ಹುಲಿಗೆಮ್ಮ ಎಂಬಾಕೆ ನಾಲ್ವರು ಮಕ್ಕಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದ್ದರು. ಈಗ ಶಿವಮೊಗ್ಗದಲ್ಲಿ ಮಹಿಳೆಯೊಬ್ಬಳು ಒಂದಲ್ಲಾ, ಎರಡಲ್ಲಾ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾಳೆ. ವಿಶೇಷ ಅಂದ್ರೆ ಮದುವೆಯಾದ ಮೂರು ವರ್ಷಗಳ ಬಳಿಕ ಮಕ್ಕಳಾಗಿರುವುದು ದಂಪತಿಗಳಿಗೆ ಮಕ್ಕಳಿಲ್ಲದ ಕೊರಗು ನೀಗಿದೆ.

ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಹೊನ್ನೆಕೆರೆ ಗ್ರಾಮದ, ಸುಧಾಕರ್ ಶೆಟ್ಟಿ ಹಾಗೂ ಉಷಾ ದಂಪತಿಗಳಿಗೆ ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿತ್ತಾದ್ರೂ ಮಕ್ಕಳಾಗಿರಲಿಲ್ಲ. ಆದರೆ ಮೂರು ವರ್ಷಗಳ ಬಳಿಕ ಉಷಾ ಒಂದೇ ಬಾರಿಗೆ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದಾರೆ. ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಅಂತಾ ವೈದ್ಯರು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top