Thursday, 19th April 2018  

Vijayavani

ಬಿಜೆಪಿ ಕಚೇರಿಯಲ್ಲಿ ಅಮಿತ್‌ ಷಾ ಮೀಟಿಂಗ್ - ಸೋಶಿಯಲ್‌ ಮೀಡಿಯಾ ಬಗ್ಗೆ ಫುಲ್‌ ಮಾರ್ಕ್ಸ್‌ - ಎಚ್ಚರಿಕೆ ಹೆಜ್ಜೆ ಇಡಲು ಸಲಹೆ        ಒಂಟಿಸಲಗದ ಮನೆಗೆ ಬಂತು ಬಿ ಫಾರಂ ​​ - ಅಂಬಿ ಷರುತ್ತುಗಳಿಗೆ ಒಪ್ಪಿದ ಪರಂ - ಪಕ್ಷದ ನಡೆ ಬಗ್ಗೆ ರೆಬೆಲ್‌ಸ್ಟಾರ್‌ ಗರಂ        ಕೈ ಟಿಕೆಟ್​ ತಪ್ಪಿದ್ದಕ್ಕೆ ಶಶಿಕುಮಾರ್ ಅಸಮಾಧಾನ​ - ದೇವೆಗೌಡರ ಭೇಟಿಯಾದ ಕೊಲ್ಲೂರ ಕಾಳ - ಪದ್ಮನಾಭ ನಗರದ ನಿವಾಸದಲ್ಲಿ ಜೆಡಿಸ್​ ಸೇರ್ಪಡೆ        ಟಿಕೆಟ್​ಗಾಗಿ ಹೆಚ್ಚಿದ ಕಣ್ಣೀರಧಾರೆ - ಮಾಯಕೊಂಡದಲ್ಲಿ ಕಣ್ಣೀರಿಟ್ಟ ಮಾಜಿ ಶಾಸಕ - ತರೀಕೆರೆಯಲ್ಲಿ ಶಿವಶಂಕರಪ್ಪ ಭಾವುಕ        ಭವಾನಿ ಸೋಲಿಸಿ ಎಂದಿದ್ದು ನನ್ನನ್ನಲ್ಲ - ಕೈ ಅಭ್ಯರ್ಥಿ ವಿರುದ್ಧ ಮಾತನಾಡಿದ್ದಾರೆ - ಭವಾನಿ ವಿಡಿಯೋ ಬಗ್ಗೆ ಸಾ.ರಾ ಮಹೇಶ್‌ ಸ್ಪಷ್ಟನೆ        ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ - 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಗ್ರೀನ್​ಸಿಗ್ನಲ್ - ಚುನಾವಣಾ ಆಯೋಗದಿಂದ ಒಪ್ಪಿಗೆ       
Breaking News

ದಲಿತರ ಕಾಲನಿಗೆ ಬಿ.ಎಸ್​. ಯಡಿಯೂರಪ್ಪ ಭೇಟಿ: ಉಪಹಾರ ಸೇವನೆ

Saturday, 14.04.2018, 2:29 PM       No Comments

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೆಲಮಂಗಲ ತಾಲೂಕಿನ ಮೈಲನಹಳ್ಳಿಯಲ್ಲಿ ದಲಿತರ ಕಾಲನಿಗೆ ಭೇಟಿ ನೀಡಿದರು.

ಮಂಜುಳಾ ಮತ್ತು ನರಸಿಂಹ ಮೂರ್ತಿ ದಂಪತಿ ನಿವಾಸಕ್ಕೆ ಭೇಟಿ ನೀಡಿದ ಬಿಎಸ್​ವೈ ಅವರ ಮನೆಯಲ್ಲಿ ಉಪಾಹಾರ ಸೇವಿಸಿದರು. ಈ ಸಂದರ್ಭದಲ್ಲಿ ಸಿ.ಪಿ.ಯೋಗೇಶ್ವರ್​, ಎಂ.ಜಿ.ನಾಗರಾಜ್​ ಮತ್ತು ಸಚ್ಚಿದಾನಂದ ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಎಸ್​ವೈ ನಾನು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಇಂದಿಗೆ ಎರಡು ವರ್ಷವಾಯಿತು. ಅಂಬೇಡ್ಕರ್​ ಅವರ ಬಗ್ಗೆ ಜನರಿಗೆ ಪರಿಚಯಿಸುವ ಕೆಲಸವನ್ನು ಮೋದಿ ಮಾಡಿದ್ದಾರೆ. ಶಿಕ್ಷಣ, ಸಾಮಾಜಿಕ ಕ್ಷೇತ್ರದಲ್ಲಿ ದಲಿತ ಸಮುದಾಯದವರ ಜತೆ ನಾನು ಇರುತ್ತೇನೆ ಎಂದು ತಿಳಿಸಿದರು.

ಅಂಬೇಡ್ಕರ್​ ಭಾವಚಿತ್ರಕ್ಕೆ ಸಿಎಂ ಪುಷ್ಪ ನಮನ

ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿಯವರು ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು.

 

Leave a Reply

Your email address will not be published. Required fields are marked *

Back To Top