Sunday, 19th August 2018  

Vijayavani

ರಣಚಂಡಿ ಮಳೆಗೆ ಕುಸಿಯುತ್ತಿದೆ ಕೊಡಗು - ಮತ್ತೆ ಜೋರಾಯ್ತು ಮಳೆ ಅಬ್ಬರ - ಮುಕ್ಕೋಡ್ಲು ಗ್ರಾಮದಲ್ಲಿ 80 ಜನರ ರಕ್ಷಣೆ        ಕ್ಷಣ ಕ್ಷಣಕ್ಕೂ ಆತಂಕ, ಬಿರುಕು ಬಿಟ್ಟ ಧರೆ - ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದೆ ಬೆಟ್ಟ,ಗುಡ್ಡ - ಕಣ್ಮುಂದೆಯೇ ನೆಲಸಮ ವಾಗ್ತಿದೆ ಬದುಕು        ಕೊಡಗಲ್ಲಿ ಇಂದು ಸಿಎಂ ಎಚ್​ಡಿಕೆ ಪ್ರವಾಸ - ಸಂತ್ರಸ್ಥರ ನೋವು ಆಲಿಸಲಿರುವ ಬಿಎಸ್​ವೈ - ನಿರಾಶ್ರಿತರಿಗೆ ನೆರವು ಅಂದ್ರು ರೇವಣ್ಣ        ಸಂತ್ರಸ್ಥರಿಗೆ ಸ್ಯಾಂಡಲ್​ವುಡ್​​​​​​​​​ ನೆರವಿನ ಹಸ್ತ - ಅಗತ್ಯವಸ್ತುಗಳ ಪೂರೈಸಿದ ಸ್ಟಾರ್ಸ್​​​​​​​​​​​ - ಕೈಲಾದ ಸಹಾಯ ಮಾಡ್ತಿದ್ದಾರೆ ಕರುನಾಡ ಜನರು        ಕೇರಳದಲ್ಲಿ ಕಡಿಮೆಯಾಗ್ತಿಲ್ಲ ನೆರೆ ಅಬ್ಬರ - ಸಾವಿನ ಸಂಖ್ಯೆ 357ಕ್ಕೇ ಏರಿಕೆ - ದೇವರನಾಡಿಗೆ ಹರಿದು ಬರ್ತಿದೆ ನೆರವಿನ ಮಹಾಪೂರ        ಭಾರತ - ಇಂಗ್ಲೆಂಡ್​ ನಡುವಿನ 3ನೇ ಟೆಸ್ಟ್​​​​ ಪಂದ್ಯ - ಬೃಹತ್ ಮೊತ್ತದತ್ತ ಟೀಂ ಇಂಡಿಯಾ - ಶತಕದ ಗಡಿಯಲ್ಲಿ ಎಡವಿದ ಕೊಹ್ಲಿ       
Breaking News

ಸಿಎಂ ಸಿದ್ದರಾಮಯ್ಯರ ನಿದ್ದೆಯಿಂದ ರಾಜ್ಯದ ಹಿತಾಸಕ್ತಿಗೆ ಧಕ್ಕೆ: ಪ್ರತಾಪ್‌ ಸಿಂಹ

Monday, 15.01.2018, 3:05 PM       No Comments

ಬೆಂಗಳೂರು: ಗೋವಾ ಸಚಿವರ ಕಣಕುಂಬಿ ಭೇಟಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಅವರು, ಮುಖ್ಯಮಂತ್ರಿಯವರ ನಿದ್ದೆ ರಾಜ್ಯದ ಹಿತಾಸಕ್ತಿಯನ್ನು ಹಾಳು ಮಾಡುತ್ತಿದೆ. ಗೋವಾ ಮುಖ್ಯಮಂತ್ರಿಯನ್ನು ಕಣಕುಂಬಿಗೆ ಬರಲು ಏಕೆ ಅವಕಾಶ ನೀಡಿದಿರಿ? ಕಾವೇರಿ ಸಮಸ್ಯೆ ಇದ್ದಾಗ ನಮ್ಮ ಸಚಿವರು ತಮಿಳುನಾಡಿಗೆ ಹೋಗುತ್ತಾರಾ ಎಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದಾರೆ.

ಮತ್ತೊಂದೆಡೆ ಕನ್ನಡಿಗರ ವಿರುದ್ಧ ಗೋವಾ ಸಚಿವ ವಿನೋದ್‌ ಪಾಲ್ಯೇಕರ್‌ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಅವಾಚ್ಯ ಶಬ್ದದಿಂದ ಕನ್ನಡಿಗರನ್ನು ನಿಂದಿಸಿದ ಸಚಿವರ ವಿರುದ್ಧ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕರ್ನಾಟಕ ಸಂಗ್ರಾಮ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಗೋವಾ ಸಚಿವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ರಾಮನಗರದ ಚನ್ನಪಟ್ಟಣದಲ್ಲಿಯೂ ಸಚಿವರ ಹೇಳಿಕೆ ವಿರುದ್ಧ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಚಿವರ ಪ್ರತಿಕೃತಿ ದಹಿಸಿದರು. ಕೂಡಲೇ ಗೋವಾ ಮುಖ್ಯಮಂತ್ರಿ ಮತ್ತು ಸಚಿವ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top