Sunday, 22nd July 2018  

Vijayavani

ಶೀರೂರು ಶ್ರೀ ಸಾವಿನ ಹಿಂದೆ ರಮ್ಯಾ ಶೆಟ್ಟಿ ಕೈವಾಡ - ಗೋಡಂಬಿ ಜ್ಯೂಸ್ ಕುಡಿಸಿರೋ ಶಂಕೆ - ತನಿಖೆ ಚುರುಕುಗೊಳಿಸಿದ ಉಡುಪಿ ಪೊಲೀಸರು        ದೋಸ್ತಿ ಸರ್ಕಾರಕ್ಕೆ ಆಯುಷ್ಯ ಕಡಿಮೆ - ಜೆಡಿಎಸ್ ಜತೆ ಲೋಕ ಎಲೆಕ್ಷನ್​​ ಮೈತ್ರಿ ಬೇಡ - ತುಮಕೂರಿನಲ್ಲಿ ಮಾಜಿ ಶಾಸಕ ರಾಜಣ್ಣ ಅಪಸ್ವರ        ಡಿಸಿಎಂ ಪರಮೇಶ್ವರ್​ಗೆ ದೋಸ್ತಿ ಇಷ್ಟ - ದೊಡ್ಡಗೌಡರಿಗೆ ಆಗ್ತಿದೆಯಂತೆ ಕಷ್ಟ - ಲೋಕಸಭಾ ಮೈತ್ರಿಯಲ್ಲೇ ದೋಸ್ತಿ ಬಗ್ಗೆ ಎದ್ದಿದೆ ಗೊಂದಲ        ರಸ್ತೆಯಲ್ಲಿ ಬರ್ತಿದ್ದ ಬಾಲಕಿ ಮೇಲೆ ಹರಿದ ಕಾರು - ಪವಾಡ ಸದೃಶ್ಯ ರೀತಿಯಲ್ಲಿ ಪುಟಾಣಿ ಪಾರು - ಉತ್ತರ ಪ್ರದೇಶದಲ್ಲೊಂದು ಪವಾಡ        ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೂ ಸಂಚಕಾರ- ಹನುಮಂತ ಹುಟ್ಟಿದ ಸ್ಥಳ ಮುಜರಾಯಿ ಇಲಾಖೆ ವಶಕ್ಕೆ - ದೋಸ್ತಿ ಸರ್ಕಾರದ ಮತ್ತೊಂದು ವಿವಾದ        ಜಲಾಶಯದಿಂದ ತುಂಗಭದ್ರಾ ನದಿಗೆ ನೀರು - ಡ್ರೋಣ್ ಕಣ್ಣಲ್ಲಿ ಮನಮೋಹಕ ನೋಟ - ಎಲ್ಲೆಲ್ಲೂ ಹಸಿರ ಸಿರಿಯ ವೈಭವ       
Breaking News

ಇಲ್ಲದ ರೋಗಕ್ಕೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯರು

Tuesday, 26.09.2017, 10:54 AM       No Comments

ತುಮಕೂರು: ಇಲ್ಲದ ರೋಗವನ್ನು ಇದೆ ಎಂದು ಸುಳ್ಳು ವರದಿ ನೀಡಿ ಚಿಕಿತ್ಸೆ ನೀಡುವ ಮೂಲಕ ಸರ್ಕಾರಿ ವೈದ್ಯರು ಮಹಿಳೆಯೊಬ್ಬರ ಜೀವನದೊಂದಿಗೆ ಚೆಲ್ಲಾಟವಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ.

2 ವರ್ಷದ ಹಿಂದೆ ಜಿಲ್ಲೆಯ ಶಿರಾ ಸರ್ಕಾರಿ ಆಸ್ಪತ್ರೆ ವೈದ್ಯರು ಮಹಿಳೆಯೊಬ್ಬರಿಗೆ HIV ರೋಗವಿದೆ ಎಂದು ಸುಳ್ಳು ವರದಿ ನೀಡಿದ್ದರು. ಆ ಸಂದರ್ಭದಲ್ಲಿ ಮಹಿಳೆ ತನ್ನ ಮೊದಲ ಮಗುವಿನ ಗರ್ಭ ಧರಿಸಿದ್ದರು. ವರದಿ ಬಂದ ನಂತರ ಮಹಿಳೆಗೆ ತುಮಕೂರು ಸರ್ಕಾರಿ ಆಸ್ಪತ್ರೆಯಲ್ಲಿ ನಿರಂತರವಾಗಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಮಾರಕ ರೋಗಕ್ಕೆ ತುತ್ತಾದೆ ಅಂತ ಮಾನಸಿಕ ಖಿನ್ನತೆಗೊಳಗಾಗಿ ಮಹಿಳೆ ತಮ್ಮ ಮಗುವನ್ನು ಕಳೆದುಕೊಂಡಿದ್ದರು.

ಬಳಿಕ ಎರಡನೇ ಮಗುವಿನ ಗರ್ಭಿಣಿಯಾದಾಗ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿದ್ದರು. ಆ ನಂತರ ಇದನ್ನು ಖಚಿತಪಡಿಸಿಕೊಳ್ಳಲು ಇನ್ನೂ ಮೂರ್ನಾಲ್ಕು ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸಿದ್ದರು. ಎಲ್ಲಾ ಪರೀಕ್ಷೆಯಲ್ಲೂ ಎಚ್​​ಐವಿ ನೆಗೆಟಿವ್ ಎಂದು ವರದಿ ಬಂದಿದೆ.

ಇದರಿಂದಾಗಿ ಶಿರಾ ಸರ್ಕಾರಿ ಆಸ್ಪತ್ರೆ ವೈದ್ಯರ ಎಡವಟ್ಟು ಬಯಲಾಗಿದೆ. ಸುಳ್ಳು ವರದಿಯಿಂದಾಗಿ ತೀವ್ರವಾಗಿ ನೊಂದಿರುವ ಮಹಿಳೆ ಈಗ ವೈದ್ಯರ ನಿರ್ಲಕ್ಷ್ಯದ ವಿರುದ್ಧ ಕಾನೂನು ಹೋರಾಟ ನಡೆಸಲು ಮುಂದಾಗಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top