Wednesday, 19th September 2018  

Vijayavani

ಆಸ್ಪತ್ರೆಯಿಂದ ಸಚಿವ ಡಿ.ಕೆ. ಶಿವಕುಮಾರ್​​ ಡಿಸ್ಚಾರ್ಜ್ - ಕೆಲವೇ ಕ್ಷಣಗಳಲ್ಲಿ ಸುದ್ದಿಗೋಷ್ಠಿ - ಎಟಿಎಂ ಆರೋಪಕ್ಕೆ ಉತ್ತರಿಸ್ತಾರಾ?        ಗಾಂಧಿ ಕುಟುಂಬಕ್ಕೆ ಎಟಿಎಂ ಅಂತೆ ಡಿಕೆಶಿ - ಎಐಸಿಸಿಗೆ 600 ಕೋಟಿ ಆಗಿದ್ಯಂತೆ ಡೆಪಾಸಿಟ್ - ಡಿಕೆಶಿ ವಿರುದ್ಧ ಆರೋಪಗಳ ಪಟ್ಟಿ        ಇಡಿ ಪ್ರಕರಣದಲ್ಲಿ ಡಿಕೆಶಿ ಬಂಧನ ಖಚಿತ - ಅರೆಸ್ಟ್‌ ಬೆನ್ನಲ್ಲೇ ಮೈತ್ರಿ ಸರ್ಕಾರ ಖತಂ - ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಭವಿಷ್ಯ        ಬೆಂಗ್ಳೂರು ರಸ್ತೆ ಗುಂಡಿಗೆ ಹೈಕೋರ್ಟ್ ಗರಂ - ಬೆಳಗ್ಗೆಯೊಳಗೆ ಗುಂಡಿ ಮುಚ್ಚಿಸಿ - ಕೆಲ್ಸ ಮಾಡದಿದ್ರೆ ಬಿಬಿಎಂಪಿ ಬಂದ್ ಅಂದ್ರು ಸಿಜೆ        ನವಾಜ್​​ ಷರೀಫ್​ಗೆ ರಿಲೀಫ್ - ಜೈಲಿನಿಂದ ಪಾಕ್ ಮಾಜಿ ಪ್ರಧಾನಿ, ಪುತ್ರಿ ಬಿಡುಗಡೆ - ಇಸ್ಲಾಮಾಬಾದ್ ಹೈಕೋರ್ಟ್ ಆದೇಶ        ದುಬೈನಲ್ಲಿ ಏಷ್ಯಾಕಪ್ ಹಣಾಹಣಿ - ಹೈವೋಲ್ಟೇಜ್ ಮ್ಯಾಚ್​ಗೆ ಬದ್ಧ ವೈರಿಗಳು ಸಜ್ಜು - ಟಾಗ್‌ಗೆದ್ದ ಪಾಕ್‌ ಬ್ಯಾಟಿಂಗ್‌ ಆಯ್ಕೆ       
Breaking News

ಮಹಿಳಾ ಐಟಿ ಉದ್ಯೋಗಿಗಳ ಕೌಶಲ ಅಭಿವೃದ್ಧಿ

Friday, 16.02.2018, 3:03 PM       No Comments

<< ಕರ್ನಾಟಕ ನಾವೀನ್ಯತಾ ಪ್ರಾಧಿಕಾರ ಸ್ಥಾಪನೆ>>

ಬೆಂಗಳೂರು: ದೀರ್ಘ ಅವಧಿಯ ಹೆರಿಗೆ ರಜೆ ಮತ್ತು ವ್ಯಾಸಂಗ ರಜೆಯ ನಿಮಿತ್ತ ತೆರಳುವ ಮಹಿಳೆಯರು ಕೌಶಲ ಸಮಸ್ಯೆ ಅನುಭವಿಸುತ್ತಿರುವುದನ್ನು ಮನಗಂಡ ಸರ್ಕಾರ ಮಹಿಳಾ ಐಟಿ ಉದ್ಯೋಗಿಗಳ ಕೌಶಲ ಅಭಿವೃದ್ಧಿ ಮಾಡಲು ಮುಂದಾಗಿದೆ.

ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಯರನ್ನು ಮುಂಚೂಣಿಗೆ ತರಲು ಸರ್ಕಾರ ಕೌಶಲ ಅಭಿವೃದ್ಧಿಗೆ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಸರ್ಕಾರ ತಿಳಿಸಿದೆ. 2018-19ನೇ ಸಾಲಿನ ಬಜೆಟ್​ನಲ್ಲಿ ಐಟಿ ಬಿಟಿ ಕ್ಷೇತ್ರಕ್ಕೆ ಒಟ್ಟಾರೆ 247 ಕೋಟಿ ರೂ. ಮೀಸಲಿಟ್ಟಿದೆ. ಕೃಷಿ ಕ್ಷೇತ್ರಕ್ಕೂ ಅತ್ಯಾಧುನಿಕ ತಂತ್ರಜ್ಞಾನವನ್ನು ಪರಿಚಯಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಸಿ ಕ್ಯಾಂಪ್ ಸಹಯೋಗದೊಂದಿಗೆ ಅಗ್ರಿ ಇನೋವೇಷನ್ ಕೇಂದ್ರವನ್ನು ನಿರ್ಮಿಸಲಾಗುತ್ತದೆ. ಈ ಮೂಲಕ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅವಕಾಶಗಳನ್ನು ಬಳಸಿಕೊಳ್ಳಲಾಗುವುದು. ಇನ್ನು ವಿವಿಧ ವಲಯದಲ್ಲಿ ನಾವೀನ್ಯತೆ ಪ್ರೋತ್ಸಾಹಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ‘ಕರ್ನಾಟಕ ನಾವೀನ್ಯತಾ ಪ್ರಾಧಿಕಾರ’ ಸ್ಥಾಪಿಸಲಾಗುತ್ತದೆ. ಉದ್ಯಮಗಳ ವಿನ್ಯಾಸ ಹಾಗೂ ಉತ್ಪನ್ನಗಳ ವಿನ್ಯಾಸಕ್ಕೆ ಪ್ರೋತ್ಸಾಹಿಸುವ ಉದ್ದೇಶದಿಂದ ಸೆಂಟರ್ ಫಾರ್ ಎಕ್ಸಲೆನ್ಸ್ ಇನ್ ಡಿಸೈನ್ ಆರಂಭಿಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದರು.

ವಿಜ್ಞಾನ ಸಂಶೋಧಕರಿಗೆ ಶಿಷ್ಯವೇತನ

ವಿಜ್ಞಾನ ಮತ್ತು ಇಂಜಿನಿಯರಿಂಗ್​ನ ಪಿಎಚ್​.ಡಿ. ಸಂಶೋಧಕರಿಗೆ ಡಿಎಸ್​ಟಿ ಶಿಷ್ಯವೇತನವನ್ನು ಪ್ರಾರಂಭಿಸಲು 1 ಕೋಟಿ ರೂ. ಸರ್ಕಾರ ಒದಗಿಸಲಿದೆ. ಉಳಿದಂತೆ ಬೆಳಗಾವಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಮಿನಿ 3 ಡಿ ತಾರಾಲಯ ಸ್ಥಾಪಿಸಲಾಗುತ್ತದೆ. ಇನ್ನು ರಾಜ್ಯದಲ್ಲಿ ನವೋದ್ಯಮಗಳಿಗೆ ಉತ್ತೇಜನ ನೀಡಲು ಕಲಬುರಗಿಯಲ್ಲಿ ದೇಶಪಾಂಡೆ ಫೌಂಡೇಶನ್ ಸಹಯೋಗದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಉತ್ತೇಜನ ಕೇಂದ್ರ ನಿರ್ಮಿಸಲಾಗುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top