More

    ಆಡಂಬರ ಮಾಡದೇ ಸೋನಿಯಾ ಗಾಂಧಿ ಜನ್ಮದಿನಾಚರಣೆ

    ಶಿವಮೊಗ್ಗ: ಎಐಸಿಸಿ  ನಾಯಕಿ ಸೋನಿಯಾ ಗಾಂಧಿ ಜನ್ಮದಿನವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಭಾನುವಾರ ನಗರದಲ್ಲಿ ವಿಶಿಷ್ಠವಾಗಿ ಆಚರಣೆ ಮಾಡಿದರು. ಅದ್ಧೂರಿ, ಆಡಂಬರ ಮಾಡದೇ ಬಡವರು ಒಳಗೊಂಡಂತೆ ಎಲ್ಲ ವರ್ಗದವರಿಗೂ ಉಚಿತ ಆರೋಗ್ಯ ತಪಾಸಣೆ ನಡೆಸುವ ಮೂಲಕ ಕಾಂಗ್ರೆಸ್ ನಾಯಕಿಯ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
    ನಗರದ ಸೈನ್ಸ್ ಮೈದಾನದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಎಐಸಿಸಿ ನಾಯಕಿಗೆ ಜನ್ಮದಿನದ ಶುಭಾಶಯ ಕೋರಲಾಯಿತು. ಜತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಹತ್ತು ಹಲವು ಸೌಲಭ್ಯಗಳನ್ನು ಕಲ್ಪಿಸಿ ಜನರಿಗೆ ನೆರವಾದರು.
    ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಸೋನಿಯಾ ಗಾಂಧಿ ಅವರು 20 ವರ್ಷ ಎಐಸಿಸಿ ಅಧ್ಯಕ್ಷರಾಗಿದ್ದರು. ಯಾವತ್ತೂ ಅಧಿಕಾರಕ್ಕೆ ಆಸೆ ಪಡೆದೆ ಪಕ್ಷ, ದೇಶಕ್ಕಾಗಿ ದುಡಿದಿದ್ದಾರೆ. ಪ್ರಧಾನಿ ಆಗುವ ಅವಕಾಶವಿದ್ದರೂ ದೂರವೇ ಉಳಿದರು. ಅವರ ಮಾರ್ಗದರ್ಶನದಲ್ಲಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ ದೇಶದಲ್ಲಿ 10 ವರ್ಷ ಅಧಿಕಾರ ನಡೆಸಿ ಅನೇಕ ಸೌಲಭ್ಯ ಕಲ್ಪಿಸಿದ್ದರು. 72 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಲಾಯಿತು. ರೈತರ
    ಆತ್ಮಹತ್ಯೆ ತಡೆಗೆ ವಿಶೇಷ ಯೋಜನೆ ಜಾರಿಗೆ ತರಲಾಗಿತ್ತು ಎಂದರು.
    ಸಿದ್ದರಾಮಯ್ಯ ನೇತೃತ್ವದಲ್ಲೂ ರಾಜ್ಯದಲ್ಲಿ ಐದು ವರ್ಷ ಶುದ್ಧ ಆಡಳಿತ ನೀಡಿದ್ದು ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಿದೆ. ಸೋನಿಯಾ ಗಾಂಧಿ ಅವರ ಜನ್ಮದಿನಾಚರಣೆ ನಿಮಿತ್ತ ಕೆಲವೆಡೆ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ, ಮತ್ತೆ ಕೆಲವಡೆ ಉಚಿತವಾಗಿ ಶಸ್ತ್ರಚಿಕಿತ್ಸೆಗೂ ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.
    ಮಾಜಿ ಎಂಎಲ್ಸಿ ಆರ್.ಪ್ರಸನ್ನಕುಮಾರ್ ಮಾತನಾಡಿ, ಸೋನಿಯಾ ಗಾಂಧಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಒಬ್ಬ ರಾಜಕಾರಣಿಯಾಗಿ ದೇಶದಲ್ಲಿ ಮಾತ್ರವಲ್ಲ, ಪ್ರಪಂಚದಲ್ಲಿ ಮಾದರಿಯಾಗಿದ್ದಾರೆ. ಅಧಿಕಾರಕ್ಕಾಗಿ ಕಿತ್ತಾಡುವವರೆ ಜಾಸ್ತಿ. ಆದರೆ ಪ್ರಧಾನಿ ಆಗುವ ಅವಕಾಶ ಇದ್ದರೂ ಆರ್ಥಿಕ ತಜ್ಞ ಡಾ. ಮನಮೋಹನ್‌ಸಿಂಗ್ ಅವರನ್ನು ಆ ಹುದ್ದೆ ಆಯ್ಕೆ ಮಾಡಿದರು. ಇದರಿಂದ ಅವರ ವ್ಯಕ್ತಿತ್ವ ಅರ್ಥವಾಗುತ್ತದೆ. ಅಧಿಕಾರಕ್ಕೆ ಆಸೆ ಪಡೆದೇ ದೇಶಕ್ಕಾಗಿ ಶ್ರಮಿಸುತ್ತಿದ್ದಾರೆ ಎಂದರು.
    ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್, ಕೆಪಿಸಿಸಿ ವೈದ್ಯಕೀಯ ವಿಭಾಗದ ಮಾಜಿ ಅಧ್ಯಕ್ಷ ಡಾ. ರಾಘವೇಂದ್ರ, ಡಾ. ಪ್ರದೀಪ ಡಿಮೆಲ್ಲೋ, ಮಾಜಿ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಖಾನ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮುಖಂಡರಾದ ಸಿ.ಎಸ್.ಚಂದ್ರಭೂಪಾಲ್, ಸಲೀಂ, ಜಿ.ಪಲ್ಲವಿ, ಎಚ್.ಸಿ.ಯೋಗೇಶ್, ಅನ್ವರ್, ಎನ್.ಡಿ.ಪ್ರವೀಣ್‌ಕುಮಾರ್, ಸೌಗಂಧಕ, ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts