Monday, 25th June 2018  

Vijayavani

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ವಿಚಾರ- ಪರಂ, ಸಿದ್ದು ನಡುವೆ ಮೂಡದ ಒಮ್ಮತ- ಸಿದ್ದು ಟ್ರೀಟ್‌ಮೆಂಟ್‌ ಮುಗಿಯೋವರೆಗೂ ವೇಟಿಂಗ್‌        ಸಾಲಮನ್ನಾ ಹೇಗೆ ಮಾಡ್ತಾರೆ ಕಾದು ನೋಡ್ತೀನಿ- ಜೆಡಿಎಸ್‌ ಅಂದಿದಕ್ಕೆಲ್ಲಾ ತಲೆ ಅಲ್ಲಾಡಿಸಬೇಡಿ- ಪರಂಗೆ ಸಿದ್ದರಾಮಯ್ಯ ಕಿವಿಮಾತು        ಐಎಎಸ್‌ ಅಧಿಕಾರಿಗಳ ಫೀಡ್‌ಬ್ಯಾಕ್‌ ಕೇಳಿದ ಕೇಂದ್ರ- ಎಲ್ಲಾ ರಾಜ್ಯಗಳಿಗೂ ಸುತ್ತೋಲೆ ರವಾನೆ- ಬಡ್ತಿ ವಿಚಾರದಲ್ಲಿ ಹೊಸ ಹೆಜ್ಜೆ ಇಟ್ಟ ಮೋದಿ ಸರ್ಕಾರ        ಸಿಎಂ ಗ್ರಾಮ ವಾಸ್ತವ್ಯದ ಫಲದಿಂದ ಬಂತು ಬಸ್‌- ಎಚ್‌ಡಿಕೆ ಸೇತುವೆ ಭರವಸೆ ಠುಸ್‌- ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಗ್ರೌಂಡ್‌ ರಿಪೋರ್ಟ್‌        ಕೈಗಾ ಸುತ್ತಮುತ್ತಾ ಕ್ಯಾನ್ಸರ್‌ ಭೀತಿ- ಭಯ ಪಡಬೇಡಿ ಇದು ಕೇವಲ ವದಂತಿ- ಉತ್ತರಕನ್ನಡ ಜನತೆಗೆ ಜಿಲ್ಲಾಧಿಕಾರಿ ಅಭಯ        ಊಟ, ತಿಂಡಿ, ಸ್ನ್ಯಾಕ್ಸ್‌ ಎಲ್ಲದಕ್ಕೂ ಅದೇ- 19 ವರ್ಷದಿಂದ ಪಾರ್ಲೆ ಜಿ ಬಿಸ್ಕೆಟ್‌ ತಿಂದೇ ಜೀವನ- ಚಿಕ್ಕೋಡಿ ಯುವತಿ ವೈದ್ಯಲೋಕಕ್ಕೆ ಸವಾಲ್‌       
Breaking News

ಹರಿಣಗಳ ನಾಡಲ್ಲಿ ಘರ್ಜಿಸಿದ ಕೊಹ್ಲಿ ಪಡೆ: ಸರಣಿ ವಶದೊಂದಿಗೆ ಇತಿಹಾಸ ಸೃಷ್ಟಿ

Friday, 16.02.2018, 11:09 PM       No Comments

ಸೆಂಚುರಿಯನ್‌: ಪ್ರವಾಸಿ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ 6ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಜಯ ಸಾಧಿಸಿದೆ. ಈ ಮೂಲಕ 6 ಪಂದ್ಯಗಳ ಏಕದಿನ ಸರಣಿಯಲ್ಲಿ 5-1 ಅಂತರದಿಂದ ಸರಣಿ ವಶಪಡಿಸಿಕೊಂಡು ಇತಿಹಾಸ ಸೃಷ್ಟಿಸಿದೆ.

ಸೆಂಚುರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ 205 ರನ್​ಗಳ ಗುರಿಯನ್ನು ಬೆನ್ನತ್ತಿದ ಭಾರತ 32.1 ಓವರ್​ಗಳಲ್ಲಿ 2 ವಿಕೆಟ್​ ಕಳೆದುಕೊಂಡು 206 ರನ್​ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ಟೀಂ ಇಂಡಿಯಾ ಪರ ಶಿಖರ್​ ಧವನ್​(18), ರೋಹಿತ್​ ಶರ್ಮಾ(15), ವಿರಾಟ್​ ಕೊಹ್ಲಿ(129*) ಹಾಗೂ ಅಜಿಂಕ್ಯಾ ರಹಾನೆ (ಅಜೇಯ 34*) ರನ್​ಗಳ ಕಾಣಿಕೆ ನೀಡಿದರು.

ದಕ್ಷಿಣ ಆಫ್ರಿಕಾ ಪರ ಲುಂಗಿಸಾನಿ ಎನ್ಜಿಡಿ ಎರಡು ವಿಕೆಟ್​ ಪಡೆದರು.

ಇದಕ್ಕೂ ಮೊದಲು ಟಾಸ್​ ಸೋತು ಬ್ಯಾಟ್​ ಮಾಡಿದ ದಕ್ಷಿಣ ಆಫ್ರಿಕಾ 46.5 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು ಭಾರತಕ್ಕೆ 205 ರನ್‌ ಗುರಿಯನ್ನು ನೀಡಿತು.

ಆಫ್ರಿಕಾ ಪರ ಹಶೀಂ ಆಮ್ಲಾ (10), ಮಾರ್ಕ್​ರಾಮ್ (24), ಎಬಿಡಿ (30)​, ಜೊಂಡೊ (54), ಕ್ಲಾಸೆನ್ (22), ಮಾರ್ಕೆಲ್ (20) ಹಾಗೂ ಇಂಡಿಲ್ 34 ರನ್​ಗಳ ಕಾಣಿಕೆ ನೀಡಿದರು.

ಟೀಂ ಇಂಡಿಯಾ ಪರ ಶಾರ್ದೂಲ್​​ ಠಾಕೂರ್​ಗೆ​ 4 ವಿಕೆಟ್​, ಯಜುವೇಂದ್ರ ಚಾಹಲ್, ಬುಮ್ರಾಗೆ ತಲಾ 2, ಕುಲದೀಪ್​​ ಯಾದವ್, ಹಾರ್ದಿಕ್ ಪಾಂಡ್ಯಗೆ ತಲಾ 1 ವಿಕೆಟ್​ ಪಡೆದರು. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top