Friday, 19th October 2018  

Vijayavani

ನಾಡಿನೆಲ್ಲೆಡೆ ವಿಜಯದಶಮಿ ಸಡಗರ-ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ-ಸಾಂಸ್ಕೃತಿಕ ನಗರಿಯತ್ತ ಜನಸ್ತೋಮ        ತೂಕ ಹೆಚ್ಚಿಸಿಕೊಂಡ ಅರ್ಜುನ & ಟೀಂ-ಅಂಬಾರಿ ಹೊರಲು ಕ್ಯಾಪ್ಟನ್ ಗ್ರೀನ್‌ ಸಿಗ್ನಲ್-ಮೈಸೂರು ನಗರಿಗೆ ಬಿಗಿ ಬಂದೋಬಸ್ತ್​​​        ಡಿಕೆಶಿ ತಪ್ಪೊಪ್ಪಿಗೆಗೆ ಕಾಂಗ್ರೆಸ್​​​​​​ನಲ್ಲಿ ಭಿನ್ನಮತ-ಕನಕಪುರ ನಾಯಕನ ವಿರುದ್ಧ ದಿಗ್ಗಜರ ಆಕ್ರೋಶ        ಶಬರಿಮಲೆ ಸುತ್ತ ನಿಲ್ಲದ ಪ್ರತಿಭಟನೆ-ಸುಪ್ರೀಂಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಸಭೆ-ಅಯ್ಯಪ್ಪನ ಪೂಜೆಗೆ ಕರ್ನಾಟಕದ ಅರ್ಚಕ ನೇಮಕ        ಅಮೆರಿಕ ಅಧ್ಯಕ್ಷನಿಂದ ಮತ್ತೊಂದು ಶಾಕ್​-ಎಚ್​​1 ಬಿ ವೀಸಾ ನಿಯಮ ಮತ್ತಷ್ಟು ಬಿಗಿ ಮಾಡಲು ಸಿದ್ಧತೆ-ಅನಿವಾಸಿ ಭಾರತೀಯರಿಗೆ ಶಾಕ್​        ಕಲೆಕ್ಷನ್​​​​​​ನಲ್ಲಿ ಧೂಳೆಬ್ಬಿಸುತ್ತಿದ್ಧಾನೆ ವಿಲನ್​-ಮೊದಲ ದಿನವೇ ಇಪ್ಪತ್ತುವರೆ ಕೋಟಿ ಸಂಗ್ರಹ​-ಸ್ಯಾಂಡಲ್​​​ವುಡ್​​​​ ದಾಖಲೆಗಳೆಲ್ಲ ಪೀಸ್​ ​​       
Breaking News

ಭೀಕರ ಕಾಡ್ಗಿಚ್ಚಿಗೆ ಲಾಸ್ ಏಂಜಲೀಸ್ ತತ್ತರ: ಸಾವಿರಾರು ಎಕರೆ ಸಸ್ಯ, ಜೀವಿಗಳು ನಿರ್ನಾಮ

Thursday, 07.12.2017, 2:22 PM       No Comments

<<83 ಸಾವಿರ ಎಕರೆಗೂ ಹೆಚ್ಚು ಪ್ರದೇಶದ ಮರಗಿಡಗಳು ಬೂದಿ; ಸಾವಿರಾರು ಮನೆಗಳು ಬೆಂಕಿಗೆ ಆಹುತಿ >>

ಲಾಸ್​ ಏಂಜಲೀಸ್​: ಭೀಕರ ಕಾಡ್ಗಿಚ್ಚಿಗೆ ಅಮೆರಿಕದ ಲಾಸ್​ ಏಂಜಲೀಸ್​, ವೆಂಚುರಾ ಮತ್ತು ಸುತ್ತಮುತ್ತಲಿನ ಸಾವಿರಾರು ಎಕರೆ ಪ್ರದೇಶಗಳ ಮರಗಿಡಗಳು ಭಸ್ಮವಾಗಿವೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಬೆಂಕಿ ಕೆನ್ನಾಲಿಗೆಗೆ 83 ಸಾವಿರ ಎಕರೆಗೂ ಹೆಚ್ಚು ಪ್ರದೇಶ ಸುಟ್ಟು ಬೂದಿಯಾಗಿದೆ. ರಕ್ಷಣಾ ಪಡೆ ವಿಮಾನ, ಹೆಲಿಕಾಪ್ಟರ್​​ಗಳ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಾವಿರಾರು ಮನೆಗಳು ಬೆಂಕಿಗೆ ಆಹುತಿಯಾಗಿವೆ.

1,000ಕ್ಕೂ ಹೆಚ್ಚು ಅಗ್ನಿ ಶಾಮಕ ಸಿಬ್ಬಂದಿ ಜ್ವಾಲಾಗ್ನಿಯನ್ನು ನಂದಿಸಲು ಹಗಲಿರುಳು ಹರಸಾಹಸ ಮಾಡುತ್ತಿದ್ದಾರೆ. ಈಗಾಗಲೇ 50 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಬೆಂಕಿಯ ಕೆನ್ನಾಲಿಗೆ ಸುತ್ತಮುತ್ತಲಿನ ನಗರಗಳಿಗೂ ಹಬ್ಬುವ ಸಾಧ್ಯತೆಯಿದೆ. ಗಾಳಿಯ ವೇಗ ಹೆಚ್ಚಿದ್ದು, ಬೆಂಕಿ ಇನ್ನಷ್ಟು ವೇಗದಲ್ಲಿ ಹರಡುತ್ತಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top