Friday, 23rd March 2018  

Vijayavani

ರಾಜ್ಯಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿಲ್ಲ- ಎಚ್​ಡಿಕೆ ಆರೋಪದಲ್ಲಿ ಹುರುಳಿಲ್ಲ- ಜೆಡಿಎಸ್‌ ನಡೆ ಬಗ್ಗೆ ಸಿಎಂ ಆಕ್ರೋಶ        ಕಾಗೋಡು, ಚಿಂಚನಸೂರು ಅಡ್ಡಾದಿಡ್ಡಿ ಮತದಾನ- ಜೆಡಿಎಸ್​ ರೆಬೆಲ್ಸ್​ನಿಂದ ಮತ್ತೇ ಅಡ್ಡ ಮತದಾನ- ಮತಗಟ್ಟೆಯಲ್ಲಿ ಹಲವು ಹೈಡ್ರಾಮಾ        ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ವಿಚಾರ- ವೀರಶೈವ ಮಹಾಸಭಾದಿಂದ ಮಹತ್ವದ ಸಭೆ- ಶಾಮನೂರು ನೇತೃತ್ವದಲ್ಲಿ ಮೀಟಿಂಗ್‌        ತೋಟದಲ್ಲಿ ಲೀಕಾಯ್ತು SSLC ಪೇಪರ್- ಪ್ರಶ್ನೆಪತ್ರಿಕೆ ವಾಹನದಲ್ಲಿ ವಿದ್ಯಾರ್ಥಿ ಕರೆತಂದಿದ್ದ ಶಿಕ್ಷಕ ಡಿಬಾರ್- ಮೊದಲ ದಿನವೇ ಎಕ್ಸಾಂ ಅವಾಂತರ        ರಾಜಧಾನಿ ಅನತಿ ದೂರದಲ್ಲೇ ಕಳ್ಳಬಟ್ಟಿ ದಂಧೆ- ಅಬಕಾರಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ- ಆಪರೇಷನ್ ಸೇಂದಿ​ಗೆ ದಿಗ್ವಿಜಯ ನ್ಯೂಸ್ ಸಾಥ್​       
Breaking News

ಗೌರಿ ಲಂಕೇಶ್​ ಹತ್ಯೆ: ಎಸ್​ಐಟಿ ಅಧಿಕಾರಿಗಳ ತನಿಖೆ ಚುರುಕು

Thursday, 07.09.2017, 5:39 PM       No Comments

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್​ ಹತ್ಯೆ ಪ್ರಕರಣದ ತನಿಖೆಯನ್ನು ಎಸ್​ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದು, ಅವರ ಕಚೇರಿ ಮತ್ತು ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಪ್ರಕರಣದ ತನಿಖೆ ನಡೆಸಲು ಬುಧವಾರ ಎಸ್​ಐಟಿ ತಂಡವನ್ನು ರಚಿಸಲಾಗಿತ್ತು. ಗುರವಾರ ಸಿಐಡಿ ಕಚೇರಿಯಲ್ಲಿ ಎಸ್​ಐಟಿ ಅಧಿಕಾರಿಗಳು ಸಭೆ ನಡೆಸಿದ ನಂತರ ತನಿಖೆ ಪ್ರಾರಂಭಿಸಿದ್ದಾರೆ. ಗುರುವಾರ ಬಸವನಗುಡಿಯಲ್ಲಿರುವ ಗೌರಿ ಲಂಕೇಶ್​ ಅವರ ಕಚೇರಿಗೆ ಇಬ್ಬರು ಎಸ್​ಐಟಿ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಎಸ್​ಐಟಿ ಅಧಿಕಾರಿಗಳು ಮತ್ತು FSL ಅಧಿಕಾರಿಗಳ ತಂಡ ರಾಜರಾಜೇಶ್ವರಿ ನಗರದಲ್ಲಿರುವ ಗೌರಿ ಲಂಕೇಶ್​ ಅವರ ಮನೆಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯ ಬಳಿ ಬುಲೆಟ್​ ಚೂರುಗಳು, ಮತ್ತಿತರ ವಸ್ತುಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top