Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

ಧರ್ಮಸ್ಥಳ, ಶೃಂಗೇರಿಯಲ್ಲಿ ಬಿ ಫಾರ್ಮ್​ಗೆ ಪೂಜೆ ಮಾಡಿಸಿದ ಅನಿತಾ; ಕೋಡಿಮಠದ ಶ್ರೀಗಳ ಭವಿಷ್ಯವಾಣಿ ಬಗ್ಗೆ ಬೇಸರ

Friday, 12.10.2018, 8:21 PM       No Comments

ಶೃಂಗೇರಿ:ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಶುಕ್ರವಾರ ಶೃಂಗೇರಿಗೆ ಭೇಟಿ ನೀಡಿ ಶ್ರೀ ಶಾರದಾಂಬೆ ಮತ್ತು ತೋರಣ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಉಭಯ ಜಗದ್ಗುರುಗಳ ಆಶಿರ್ವಾದ ಪಡೆದರು.

ನಾಮಪತ್ರಗಳನ್ನು ಶ್ರೀಗಳ ಮುಂದೆ ಇಟ್ಟು ಆಶಿರ್ವಾದ ಪಡೆದದ್ದು ವಿಶೇಷವಾಗಿತ್ತು. ಜಗದ್ಗುರು ಶ್ರೀ ಭಾರತೀತೀರ್ಥರು ಅವರಿಗೆ ಫಲಮಂತ್ರಾಕ್ಷತೆ ನೀಡಿ ಹರಸಿದರು.

ಇದಕ್ಕೂ ಮೊದಲು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು, ಮಂಜುನಾಥನ ಸನ್ನಿಧಿಯಲ್ಲಿ ಬಿ. ಫಾರ್ಮ್​ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅನಿತಾ , ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ. ಕೋಡಿ ಮಠ ಸ್ವಾಮಿಗಳ ಬಗ್ಗೆ ಗೌರವ ಇದೆ. ಸರಕಾರ ಎರಡು ತಿಂಗಳಲ್ಲಿ ಬಿಳುತ್ತೆ ಎಂಬಂಥ ಹೇಳಿಕೆ ನೀಡಬಾರದಿತ್ತು ಎಂದರು.

ಧರ್ಮಸ್ಥಳಕ್ಕೆ ಹೆಲಿಕಾಪ್ಟರ್​ನಲ್ಲಿ ಬಂದಿಳಿದ ಅನಿತಾ ಕುಮಾರಸ್ವಾಮಿ

Leave a Reply

Your email address will not be published. Required fields are marked *

Back To Top