More

    ಕರ್ನಾಟಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಆರಂಭ: ಏನೆಲ್ಲ ವಿಶೇಷತೆಗಳಿವೆ?

    ಬೆಂಗಳೂರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇಂದಿನಿಂದ ಮಾ.25ರಿಂದ ಏ.6ರ ವರೆಗೆ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ನಡೆಸಲಿದೆ.

    ರಾಜ್ಯಾದ್ಯಂತ 4,41,910 ಬಾಲಕರು ಮತ್ತು 4,28,058 ಬಾಲಕಿಯರು ಸೇರಿ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿದ್ದಾರೆ.

    ಒಟ್ಟು 2,750 ಪರೀಕ್ಷಾ ಕೇಂದ್ರಗಳನ್ನು ರಚಿಷಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಧಿಕಾರಿ/ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್ ೆನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ೋಷಿಸಲಾಗಿದೆ. ’
    ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಕ್ಯಾಮರಾ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ವಹಿಸಲಾಗುವುದು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.

    ಜಿಲ್ಲಾಧಿಕಾರಗಳ ಹಂತದಲ್ಲಿ ವಿಚಕ್ಷಣ ಜಾಗೃತದಳ ನೇಮಿಸಲು ತಿಳಿಸಲಾಗಿದೆ. ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

    ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆ ನಡೆಯಲಿವೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts