Friday, 15th December 2017  

Vijayavani

1. ಸನ್ನಿ ನೈಟ್​ಗೆ ವ್ಯಾಪಕ ವಿರೋಧ ಹಿನ್ನೆಲೆ- ಕಾರ್ಯಕ್ರಮ ರದ್ದುಗೊಳಿಸಿದ ರಾಜ್ಯ ಸರ್ಕಾರ- ಸಾವಿರಾರು ಅಭಿಮಾನಿಗಳಿಗೆ ನಿರಾಸೆ 2. ಆಟೋ ಮತ್ತು ಕಾರಿನ ಮೇಲೆ ಟಿಪ್ಪರ್ ಪಲ್ಟಿ- ಸ್ಥಳದಲ್ಲೇ ಮೂವರ ದುರ್ಮರಣ – ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ 3. ಶನಿಮುಖಿ ಸುನೀಲ್​ಗೆ ಸುಪಾರಿ ಕೇಡು- ವಾರದ ಅಚ್ಚರಿಯಲ್ಲಿ ಕ್ರೈಂ ವರದಿ ಕಿಂಗ್ ಲೇಖನ – ಇನ್ನೂ ಬರೆಯೋದು ಇದೆ ಎಂದ ಬೆಳಗೆರೆ 4. ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು- ಜೆಡಿಎಸ್ ಸಭೆಯಲ್ಲಿ ಮಾರಾಮಾರಿ- ಬಾಗಲಕೋಟೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು 5. ಗುಜರಾತ್ ವಿಧಾನಸಭೆಯಲ್ಲಿ ಯಾರು ಗೆಲ್ತಾರೆ- ನಾಯಿ ಬೊಗಳುತೈತೆ ಭವಿಷ್ಯ – ವೈರಲ್ ಆಯ್ತು ಬೌಬೌ ವಿಡಿಯೋ
Breaking News :

ಕಾಲೇಜ್ ಶೌಚಾಲಯದಲ್ಲಿ ವಿದ್ಯಾರ್ಥಿಯ ಶವ ಪತ್ತೆ

Sunday, 08.10.2017, 12:31 PM       No Comments

ಬೆಂಗಳೂರು: ಬೆಳ್ಳಂದೂರಿನ ಚೈತನ್ಯ ಟೆಕ್ನಾಲಜಿ ಸ್ಕೂಲ್​​ ಮತ್ತು ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿ ಒಬ್ಬನ ಶವ ಪತ್ತೆಯಾಗಿದೆ.

ಶ್ರೀಕಾಂತ್ ಪುರಾಣಿಕ್ ಹಾಗೂ ಸುಚೇತ್ರ ದಂಪತಿಯ ಪುತ್ರ ಸಾರ್ಥಕ್​ ಪುರಾಣಿಕ್ (17) ನಿಗೂಢ ರೀತಿಯಲ್ಲಿ ಮೃತಪಟ್ಟಿರುವ ದುರ್ದೈವಿ. ಧಾರವಾಡ ಮೂಲದ ಸಾರ್ಥಕ್ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಎರಡು ವರ್ಷಗಳಿಂದ ಕಾಲೇಜಿನ ಹಾಸ್ಟೆಲ್​ನಲ್ಲಿದ್ದ.

ಶೌಚಾಲಯಕ್ಕೆ ತೆರಳಿದ್ದ ಸಾರ್ಥಕ್ ಸಾಕಷ್ಟು ಸಮಯವಾದರೂ ಹೊರ ಬರದೇ ಇದ್ದಾಗ ಸಹಪಾಠಿಗಳು ಶೌಚಾಲಯದ ಬಳಿ ತೆರಳಿದ್ದಾರೆ. ಆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಕಾಲೇಜು ಸಿಬ್ಬಂದಿ ಕೂಡಲೇ ಸಾರ್ಥಕ್​ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ದಾಖಲಿಸುವ ಮೊದಲೇ ಸಾರ್ಥಕ್ ಮೃತಪಟ್ಟಿದ್ದಾನೆ. ಬೆಳ್ಳಂದೂರು ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top